ಉಪ್ಪಿನಂಗಡಿಯಲ್ಲಿ ನೆರೆ ಭೀತಿ
ಉಪ್ಪಿನಂಗಡಿ: ಕುಮಾರಧಾರ- ನೇತ್ರಾವತಿ ನದಿಗಳು ಉಕ್ಕಿ ಹರಿಯುತ್ತಿದ್ದು, ಉಪ್ಪಿನಂಗಡಿಯಲ್ಲಿ ನೆರೆ ಎದುರಾಗಿದೆ. ಎರಡೂ ನದಿಗಳಲ್ಲಿ ನೀರಿನ ಮಟ್ಟ ಏರುತ್ತಲೇ ಇರುವುದರಿಂದ ಅಲ್ಲಿಯ ಜನರಲ್ಲಿ ಆತಂಕ ಮೂಡಿದೆ.
ಸಹಸ್ರಲಿಂಗೇಶ್ವರ ಮಹಾಕಾಳಿ ಸ್ನಾನಘಟ್ಟದ ಬಳಿ ನೇತ್ರಾವತಿ ನದಿಗಿಳಿಯುವ 38 ಮೆಟ್ಟಿಲುಗಳಲ್ಲಿ ನೆನ್ನೆ ಸಂಜೆ ವೇಳೆಗೆ 6 ಮೆಟ್ಟಿಲುಗಳಷ್ಟೆ ಕಾಣುತ್ತಿದ್ದವು, ಪುತ್ತೂರು ತಹಶೀಲ್ದಾರ್ ಉಪ್ಪಿನಂಗಡಿಗೆ ಆಗಮಿಸಿ ಗೃಹರಕ್ಷಕರನ್ನೊಳಗೊಂಡ ಪ್ರಾಕೃತಿಕ ವಿಕೋಪ ತಂಡದ ರಬ್ಬರ್ ಬೋಟ್ ನಲ್ಲಿ ಸಂಚರಿಸಿ ಬೋಟ್ ನ ಕಾರ್ಯಕ್ಷಮತೆ ಪರಿಶೀಲನೆ ನಡೆಸಿದ್ದಾರೆ.