• October 18, 2024

ಪುತ್ತೂರು: ಡಿವಿ, ಕಟೀಲ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ದಾಂಜಲಿ ಸಲ್ಲಿಸಿದ ಆಕ್ರೊಶಿತರು

 

ಪುತ್ತೂರು: ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲಾಗುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಪುತ್ತೂರು ಮೂಲದ ನಳೀನ್ ಕುಮಾರ್ ಕಟೀಲ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಇದರ ಬೆನ್ನಲ್ಲೆ ಆಕ್ರೋಶಿತರು ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಡಿವಿ ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲ್ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ದಾಂಜಲಿ ಎಂದು ಬರೆದು ಚಪ್ಪಲಿ ಹಾರ ಹಾಕಿದ್ದಾರೆ.

ಭಾರತೀಯ ಜನತಾ ಪಾರ್ಟಿ ಪುತ್ತೂರು ಮೂಲದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರವಿರುವ ಬ್ಯಾನರ್ ನಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ದಾಂಜಲಿ ನೊಂದ ಹಿಂದೂ ಕಾರ್ಯಕರ್ತರು ಎಂದು ಬರೆಯಲಾಗಿದೆ.

Related post

Leave a Reply

Your email address will not be published. Required fields are marked *

error: Content is protected !!