• October 14, 2024

ಏ.17 ಸಂತೆಕಟ್ಟೆಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

 ಏ.17 ಸಂತೆಕಟ್ಟೆಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

 

ಬೆಳ್ತಂಗಡಿ ತಾಲೂಕು ಪ.ಪಂ ವ್ಯಾಪ್ತಿಯ ಎಲ್ಲಾ ಸಾರ್ವಜನಿಕರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿಯವರು ಮುಖ್ಯವಾದ ಸೂಚನೆ ಹೊರಡಿಸಿದ್ದಾರೆ.

2023 ಗೆ ಸಂಬಂಧಿಸಿದ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಏ.17 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಯನ್ನು ಮೆರವಣಿಗೆ ಮೂಲಕ ನಗರದ ವಿವಿಧ ಭಾಗಗಳಿಂದ ಪ್ರಾರಂಭಿಸಿ ಮುಖ್ಯ ರಸ್ತೆಯ ಮೂಲಕವಾಗಿ ಚುನಾವಣಾ ಅಧಿಕಾರಿಗಳ ಕಚೇರಿಯವರೆಗೆ ವಾಹನ ದಟ್ಟಣೆ ಹೆಚ್ಚಾಗಿ ಟ್ರಾಫಿಕ್ ಸಮಸ್ಯೆ ಉಂಟಾಗುವ ಸಂಭವವಿರುವುದರಿಂದ ಏ. 17 ರಂದು ನಾಮಪತ್ರ ಸಲ್ಲಿಕೆ ಇರುವುದರಿಂದ ಸಂತೆಯಲ್ಲಿನ ವರ್ತಕರು ವ್ಯಾಪಾರಸ್ಥರು ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಸಂತೆಕಟ್ಟೆಯಿಂದ ಬಸ್ ನಿಲ್ದಾಣದವರೆಗೆ ವ್ಯಾಪಾರ ಮಾಡುವುದನ್ನು ನಿಷೇಧಿಸಿದೆ.

ರಸ್ತೆಯ ಎರಡು ಬದಿಯ ಸ್ಥಳದಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳಿಗೆ ಸಂತೆ ಮಾರುಕಟ್ಟೆ ಒಳಗಡೆ ವ್ಯಾಪಾರ ಮಾಡಲು ಅನುಕೂಲ ಕಲ್ಪಿಸಲಾಗಿದ್ದು ವರ್ತಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!