ದ. ಕ. ಜಿಲ್ಲಾಡಳಿತದಿಂದ ಶಾಸಕರ ಹಕ್ಕಿಗೆ ಚ್ಯುತಿ: ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಧರಣಿ ಪ್ರತಿಭಟನೆ
ಮಂಗಳೂರು: ಅಧಿಕಾರದಾಹಿ ಕಾಂಗ್ರೆಸ್ ಸರಕಾರ ಸರಕಾರಿ ಅಧಿಕಾರಿಗಳನ್ನು ತನ್ನ ಕಪಿ ಮುಷ್ಠಿಯಲ್ಲಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಶಾಸಕರ ಹಕ್ಕಿಗೆ ಚ್ಯುತಿಯಾಗುತ್ತಿದ್ದು
ಮೂಡುಬಿದಿರೆ ಕ್ಷೇತ್ರದ ಇರುವೈಲ್ ಹಾಗೂ ಬಂಟ್ವಾಳ ಕ್ಷೇತ್ರದ ಇರ್ವತ್ತೂರು ಗ್ರಾಮ ಪಂಚಾಯತ್‌ನ ಉದ್ಘಾಟನಾ ಕಾರ್ಯಕ್ರಮವನ್ನು ಶಿಷ್ಟಾಚಾರ ನೆಪದಲ್ಲಿ ರದ್ಡು ಪಡಿಸಿ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯುವುದು ಹಾಗೂ ಶಾಸಕರ ಹಕ್ಕಿನ ರಕ್ಷಣೆಗೆ ಒತ್ತಾಯಿಸಿ ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಬಾಗ ದರಣಿ ಪ್ರತಿಭಟನೆ ನಡೆಸಲಾಯಿತು.