ಉಜಿರೆ: ವೃತ್ತಿಪರ ಕೌಶಲ್ಯದ ಕುರಿತು ಹತ್ತು ದಿನಗಳ ತರಬೇತಿ ಕಾರ್ಯಾಗಾರ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಯ ಎಸ್ ಡಿ ಎಂ ರೋಟರಿ ವೃತ್ತಿ ಮಾರ್ಗ ದರ್ಶನ ಮತ್ತು ಮಾನವ ಸಂಪನ್ಮೂಲ ಕೇಂದ್ರವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ಖಾಸಗಿ ಕಂಪನಿಗಳ ನೇಮಕಾತಿ ಪ್ರಕ್ರಿಯೆಗಳಿಗೆ ಪೂರಕವಾಗಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೌಶಲ್ಯದ (Quantitative Aptitude) ಕುರಿತು ಹತ್ತು ದಿನಗಳ ತರಬೇತಿ ಕಾರ್ಯಾಗಾರನ್ನು ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಾಗಾರದಲ್ಲಿ ಒಟ್ಟು 52 ವಿದ್ಯಾರ್ಥಿಗಳು ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಂಡರು. ಸಂಪನ್ಮೂಲ ವ್ಯಕ್ತಿಗಳಾಗಿ ಮನೋಹರ ಟಿ. ಜೆ ಭಾಗವಹಿಸಿ ಹತ್ತು ದಿನಗಳ ತರಬೇತಿಯನ್ನು ನಡೆಸಿಕೊಡುತ್ತಿದ್ದಾರೆ ಕಾಲೇಜಿನ ಪ್ರಾಂಶುಪಾಲ ಡಾ. B.A ಕುಮಾರ ಹೆಗ್ಡೆ ಯವರ ಮಾರ್ಗದರ್ಶನದಲ್ಲಿ ಡಾ. ನಾಗರಾಜ ಪೂಜಾರಿ ತರಬೇತಿ ಕಾರ್ಯಾಗಾರನ್ನು ಸಂಘಟಿಸಿ ನಿರ್ವಹಣೆ ಮಾಡಿದರು.