ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ನೋಟೀಸ್:ಹಿಂದೂ ವಿರೋಧಿ ಆಡಳಿತ ವ್ಯವಸ್ಥೆಯ ವಿರುದ್ಧ ವಿಶ್ವ ಹಿಂದೂ ಪರಿಷದ್ ಬಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡ ವತಿಯಿಂದ ಬೃಹತ್ ಪ್ರತಿಭಟನೆ
ಬೆಳ್ತಂಗಡಿ: ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ನೋಟಿಸ್ ಜಾರಿ ಮಾಡಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಹತ್ತಿಕ್ಕುವ ಹಿಂದೂ ವಿರೋಧಿ ಆಡಳಿತ ವ್ಯವಸ್ಥೆಯ ವಿರುದ್ಧ ವಿಶ್ವ ಹಿಂದೂ ಪರಿಷದ್ ಬಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡ ವತಿಯಿಂದ ನ.20 ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಪೊಲೀಸ್ ಇಲಾಖೆಯನ್ನು ಸರಕಾರಿ ವ್ಯವಸ್ಥೆಯನ್ನು ಬಳಸಿಕೊಂಡು ಹಿಂದೂ ಸಂಘಟನೆಯನ್ನು ಮಟ್ಟ ಹಾಕಲು ಹೊರಟಿರುವ ನಡೆಯನ್ನು ಹಿಂದೂ ಸಮಾಜ ಖಂಡಿಸಿದ್ದು, ಅದರಿಂದ ಬಜರಂಗದಳ ಕಾರ್ಯಕರ್ತರ ಮೇಲೆ ಸುಖಾ ಸುಮ್ಮನೆ ಗಡಿಪಾರು ನೋಟೀಸ್ ಜಾರಿ ಮಾಡಿರುವುದು ಸರಿಯಲ್ಲ ಹಾಗಾಗಿ ಅದನ್ನು ಪರಿಷ್ಕರಣೆ ಮಾಡಿ ಗಡಿಪಾರು ವರದಿಯನ್ನು ಹಿಂಪಡೆಯುವಂತೆ ಉಪತಹಶೀಲ್ದಾರ್ ಜಯ ಕೆ ಅವರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರುಗಳಾದ ದಿನೇಶ್ ಚಾರ್ಮಾಡಿ, ಬೆಳ್ತಂಗಡಿ ಪ್ರಖಂಡದ ಕಾರ್ಯದರ್ಶಿ ಮೋಹನ್, ಸಂಚಾಲಕ ಸಂತೋಷ್ ಅತ್ತಾಜೆ, ಜಿಲ್ಲಾ ಪ್ರಮುಖರುಗಳಾದ ತಿಲಕ್ ಹಾಗೂ ಗಣೇಶ್ ಕಳೆಂಜ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.