ಸುದ್ದಿಗೋಷ್ಠಿ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಏ.10-17 ರವರೆಗೆ 64 ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ, ಪ್ರತಿಷ್ಠಾ ಜಾತ್ರಾ ಮಹೋತ್ಸವ
ಕನ್ಯಾಡಿ: ಏ.10 ರಿಂದ ಏ.17 ರವರೆಗೆ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರ ಶ್ರೀ ಭಗವಾನ್ ನಿತ್ಯಾನಂದ ದೇವಸ್ಥಾನದಲ್ಲಿ 64 ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ, ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಜರುಗಲಿದೆ ಎಂದು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ತಿಳಿಸಿದರು.
ಅವರು ಏ.5 ರಂದು ಶ್ರೀರಾಮ ಕ್ಷೇತ್ರ ಕನ್ಯಾಡಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
64 ವರ್ಷಗಳ ಹಿಂದೆ ಶ್ರೀ ರಾಮ ಜಯ ರಾಮ ಜಯ ಜಯ ರಾಮ ಎಂಬ ತಾರಕ ಮಂತ್ರವನ್ನು 7 ದಿನಗಳ ಕಾಲ ಭಜನಾ ಸಪ್ತಾಹ ಪ್ರಾರಂಭ ಮಾಡಿದ್ದರು ಅಲ್ಲದೆ ಪ್ರತೀ ವರ್ಷ ಜಾತ್ರಾ ಮಹೋತ್ಸವ ನಡೆದು ಬರುತ್ತಿದೆ. ಏ.10ರಂದು ಶ್ರೀರಾಮ ನಾಮ ಸಪ್ತಾಹದ ಅಖಂಡ ನಂದಾದೀಪ ಬೆಳಗಿಸುವ ಮೂಲಕ ಪ್ರಾರಂಭವಾಗಲಿದ್ದು ಕಾರ್ಯಕ್ರಮದ ವಿವರಗಳನ್ನು ತಿಳಿಸಿದರು.
ಸುದ್ದಿಗೊಷ್ಠಿಯಲ್ಲಿ ಶ್ರೀ ರಾಮ ಕ್ಷೇತ್ರ ಸಮಿತಿ ಸಂಚಾಲಕ ಜಯಂತ ಕೋಟ್ಯಾನ್, ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಧರ್ಮಸ್ಥಳ ಟ್ರಷ್ಠಿ ತುಕರಾಮ್ ಸಾಲಿಯಾನ್, ನಿವೃತ್ತ ಎಸ್ ಪಿ ಪಿತಾಂಬರ ಹೇರಾಜೆ, ಯಕ್ಷಗಾನ ಅಕಾಡೆಮಿ ಸದಸ್ಯ ರಾಘವ ಹೆಚ್ ಗೇರುಕಟ್ಟೆ, ಪ್ರಶಾಂತ್ ಪಾರೆಂಕಿ, ರಾಘವ ಕಲ್ಮಂಜ, ಪ್ರೀತಮ್ ಡಿ ಮತ್ತಿತರರು ಉಪಸ್ಥಿತರಿದ್ದರು.