ಬಿಜೆಪಿ ಮುಖಂಡನ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ: ಬಿಜೆಪಿ ಕಾರ್ಯಕರ್ತರ ವಿಜಯೋತ್ಸವವನ್ನು ಸಹಿಸಲಾಗದೆ ಹಲ್ಲೆ ಎಂಬ ಆರೋಪ
ಕಳೆಂಜ: ಕಳೆಂಜ ಗ್ರಾಮದ ನಿವಾಸಿ ರಾಜೇಶ್ ಎಮ್ ಕೆ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ.
ರಾಜೇಶ್ ಎಮ್ ಕೆ ಇವರು ತಾಲೂಕು ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ. ಇಂದು ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಜಯಭೇರಿ ಗಳಿಸಿದ್ದು ಇದರ ಸಂಭ್ರಮಾಚರಣೆಯನ್ನು ಬಿಜೆಪಿ ಕಾರ್ಯಕರ್ತರು ಆಚರಿಸಿದ್ದರು. ಇದನ್ನು ಸಹಿಸದ ಕಾಂಗ್ರೆಸ್ ಕಾರ್ಯಕರ್ತ ಕುಶಾಲಪ್ಪ ಗೌಡ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಇದೀಗ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ