ವಿಪರೀತ ಮಳೆ ಹಿನ್ನಲೆ ಬೆಳ್ತಂಗಡಿ ತಾಲೂಕಿನಲ್ಲಿ ಯಾವುದೇ ರೀತಿಯ ತುರ್ತು ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಹಾಗೂ ‘ ಶ್ರಮಿಕ ‘ ತಂಡ ಸಹಾಯಕ್ಕೆ ಸನ್ನದ್ಧ: ತುರ್ತು ಸಹಾಯಕ್ಕಾಗಿ ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡುವಂತೆ ಸೂಚನೆ
ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಎಲ್ಲಾ ಜೀವ ನದಿಗಳು ಉಕ್ಕಿ ಹರಿಯುತ್ತಿದ್ದು ಜಿಲ್ಲೆಯನ್ನು ಸಂಪರ್ಕಿಸುವ ಎಲ್ಲಾ ಪ್ರಮುಖ ರಸ್ತೆಗಳಲ್ಲಿಯೂ ಭೂಕುಸಿತ ಹಾಗೂ ಮರಗಳು ರಸ್ತೆಗೆ ಉರುಳುತ್ತಿರುವ ಘಟನೆಗಳು ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರು ಅಗತ್ಯ ಸಂಚಾರ ನಡೆಸುವ ಸಂದರ್ಭ ಅತ್ಯಂತ ಹೆಚ್ಚಿನ ಕಾಳಜಿಯನ್ನು ವಹಿಸಬೇಕಾಗಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ನದಿ ಪಾತ್ರಗಳಲ್ಲಿ ವಾಸಿಸುತ್ತಿರುವ ಎಲ್ಲಾ ಜನರು ಕೂಡ ತಮ್ಮ ರಕ್ಷಣೆ ಹಾಗೂ ಜಾನುವಾರುಗಳ ರಕ್ಷಣೆಯ ದೃಷ್ಟಿಯಿಂದ ಮುಂಜಾಗ್ರತ ಕ್ರಮಗಳನ್ನು ವಹಿಸಿಕೊಂಡು ಯಾವುದೇ ರೀತಿಯ ಅಪಾಯದ ಮುನ್ಸೂಚನೆ ದೊರೆತ ತಕ್ಷಣ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಹಾಗು ‘ ಶ್ರಮಿಕ ‘ ತಂಡ ಸಹಾಯಕ್ಕೆ ಸನ್ನದ್ಧವಾಗಿದ್ದು ಈ ಕೆಳಗೆ ನೀಡಲಾದ ತುರ್ತು ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡಬಹುದು.