ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ -2024 ಪ್ರಶಸ್ತಿಗೆ ಆಡಳಿತ ಅಧಿಕಾರಿ ಪ್ರಥ್ವಿರಾಜ್ ಪಿ ಶೆಟ್ಟಿ ಆಯ್ಕೆ
ಬೆಳ್ತಂಗಡಿ :ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಮತ್ತು ಕಳಿಯ ಗ್ರಾಮ ವೃತ್ತದ ಗ್ರಾಮ ಆಡಳಿತ ಅಧಿಕಾರಿಯವರಾದ ಶ್ರೀ ಪ್ರಥ್ವಿರಾಜ್ ಪಿ ಶೆಟ್ಟಿ ರವರನ್ನು ಕರ್ನಾಟಕ ಸರ್ಕಾರವು ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ -2024 ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ.
ಸೆಪ್ಟೆಂಬರ್ 27 ರಂದು ಬೆಂಗಳೂರಿನಲ್ಲಿ ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಜರುಗುವ ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.