ಚಲಿಸುತ್ತಿದ್ದ ಬಸ್ ನಲ್ಲಿ ಕಾಣಿಸಿಕೊಂಡ ಹೊಗೆ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ
ಪುತ್ತೂರು: ಚಲಿಸುತ್ತಿದ್ದ ಬಸ್ಸಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ ಘಟನೆ ಪುತ್ತೂರು ಮುಖ್ಯ ರಸ್ತೆ ಯಲ್ಲಿ ಇಂದು ನಡೆದಿದೆ.
ಪುತ್ತೂರು ಬಸ್ ನಿಲ್ದಾಣದಿಂದ ಧರ್ಮಸ್ಥಳದ ಕಡೆಗೆ ಹೊರಟ್ಟಿದ್ದ ಬಸ್ ಹಳೇ ಮಯೂರ ಥಿಯೇಟರ್ ಬಳಿ ತಲುಪಿದಾಗ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಇದನ್ನು ಗಮನಿಸಿದ ಬಸ್ ಚಾಲಕ ಬಸ್ ಅನ್ನು ಮಾರ್ಗ ಮಧ್ಯದಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದ್ದಾರೆ.