ಕನ್ಯಾಡಿ: ಚಾತುರ್ಮಾಸ್ಯ ವೃತಾಚರಣೆಗೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮಧು ಬಂಗಾರಪ್ಪ
ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 10 ನೇ ದಿನದ ಚಾತುರ್ಮಾಸ್ಯ ವೃತಾಚರಣೆಗೆ ಜಿಲ್ಲಾ ಉಸ್ತುವಾರಿಯಾಗಿರುವ ಮಧು ಬಂಗಾರಪ್ಪ ಇವರು ಭೇಟಿ ನೀಡಿ ಸ್ವಾಮಿಗಳ ಪಾದುಕ ಪೂಜೆಯಲ್ಲಿ ಭಾಗಿಯಾದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ, ಎಂ ಎಲ್ ಸಿ ಪ್ರತಾಪ್ ಸಿಂಹ ನಾಯಕ್, ಅಭಿನಂದನ್ ಹರೀಶ್ ಕುಮಾರ್, ಶೈಲೇಶ್ ಕುಮಾರ್ ಕುರ್ತೋಡಿ ಮತ್ತಿತರರು ಜೊತೆಗಿದ್ದರು.