ಹೆಣ್ಣುಮಗುವಿಗೆ ಜನ್ಮ ನೀಡಿ ರಕ್ತಸ್ರಾವದಿಂದ ಪ್ರಾಣಬಿಟ್ಟ ತಾಯಿ
ಬೆಳ್ತಂಗಡಿ ತಾಲೂಕಿನ ಮುಂಡಾಜಿ ಗ್ರಾಮದ ಕಾಪು ನಿವಾಸಿ ಸುಜಾತ ಎಂಬ ಗರ್ಭಿಣಿ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ ಘಟನೆ ನಡೆದಿದೆ ಬದ್ಯಾರು ಖಾಸಗಿ ಆಸ್ಪತ್ರೆಯಲ್ಲಿ ಎರಡನೇ ಹೆರಿಗೆಗೆ ದಾಖಲಾಗಿದ್ದ ಸುಜಾತ ರವರಿಗೆ ವೈದ್ಯರು ಆಪರೇಷನ್ ಮಾಡಿದ್ದು ನಂತರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ ಸುಜಾತರಿಗೆ ವಿಪರೀತ ರಕ್ತಸ್ರಾವ ಉಂಟಾಗಿದೆ ತಕ್ಷಣ ವೈದ್ಯರು ಮಂಗಳೂರು ಆಸ್ಪತ್ರೆಗೆ ಸಾಗಿಸಲು ಸಲಹೆ ನೀಡಿದ್ದಾರೆ
ಅದರಂತೆ ಮನೆಯವರು ಆಂಬುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸಿದ ವೇಳೆ ಬಾಣಂತಿ ಸಾವನ್ನಪ್ಪಿದ್ದಾರೆ .ಬಾಣಂತಿ ಸಾವಿಗೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಎಂಬ ಆರೋಪ ಕೇಳಿ ಬರುತ್ತಿದೆ. ಪತಿ ಉದಯ್ ನಾಯಕ ಮತ್ತು ಸುಜಾತಾ ದಂಪತಿಗೆ ಒಂದು ಗಂಡು ಮಗುವಿದ್ದು ಇದೀಗ ಎರಡನೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಮಗು ಬದ್ಯಾರು ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯವಾಗಿದೆ.