• November 21, 2024

ಡಿ.ಕೆ. ಆರ್.ಡಿ.ಎಸ್ (ರಿ)ಬೆಳ್ತಂಗಡಿ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ

 ಡಿ.ಕೆ. ಆರ್.ಡಿ.ಎಸ್ (ರಿ)ಬೆಳ್ತಂಗಡಿ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ

 


ಬೆಳ್ತಂಗಡಿ: ಡಿ.ಕೆ‌.ಆರ್.ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಕಾರಿತಾಸ್ ಇಂಡಿಯಾ-ಸ್ಪರ್ಶ ಕಾರ್ಯಕ್ರಮ ಹಾಗೂ ಕಾನ್ಫರೆನ್ಸಾ ಎಪಿಸ್ಕೋಪಾಲೆ ಇಟಾಲಿಯಾನ ಇವರ ಆಶ್ರಯದಲ್ಲಿ ಸೆ.16 ರಂದು ಪೌಷ್ಟಿಕ ಆಹಾರ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮವು ಬೈಂದೂರು ತಾಲೂಕಿನ ಜಡ್ಕಲ್ ಅಂಗನವಾಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಡ್ಕಲ್, ಮುದೂರು ಅಂಗನವಾಡಿ ಹಾಗೂ ಮುದೂರು ಭಾರತ್ ಮಾತಾ ಅನುದಾನಿತ ಪ್ರೌಢಶಾಲೆಯಲ್ಲಿ ಆಯೋಜಿಸಲಾಯಿತು

ಈ ಕಾರ್ಯಕ್ರಮದಲ್ಲಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ಪ್ರಾತ್ಯಕ್ಷಿಕೆ ಹಾಗೂ ಉತ್ತಮ ಪೌಷ್ಟಿಕ ಆಹಾರ ತಯಾರಿಸಿದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಗುರುವಂದನಾ ಕಾರ್ಯಕ್ರಮದ ಅಂಗವಾಗಿ ಶಾಲೆ ಹಾಗೂ ಅಂಗನವಾಡಿಯ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ರೇವತಿ ಹಾಗೂ ಮುದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಕುಮಾರಿ ಸುನೀತಾ ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಜಡ್ಕಲ್ ಹಾಗೂ ಮುದೂರು ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ. ತೋಮಸ್ ಪಾರೆಕ್ಕಾಟ್ಟೀಲ್ ಹಾಗೂ ವಂದನೀಯ ಫಾ. ಆಗಸ್ಟಿನ್ ಪೊಟ್ಟಂಕುಲಂಗರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಜಡ್ಕಲ್ ಗ್ರಾಮ ಪಂಚಾಯತ್ ಸದಸ್ಯರುಗಳಾದ ಶ್ರೀ. ದೇವದಾಸ್, ಶ್ರೀಮತಿ ಮಂಜು, ಶ್ರೀಮತಿ ರೇಹಾ, ಶ್ರೀಮತಿ ಪಾರ್ವತಿ, ಬಾಲವಿಕಾಸ ಹಾಗೂ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸ್ವ- ಸಹಾಯ ಸಂಘಗಳ ಮಹಿಳೆಯರು, ಮಕ್ಕಳ ಪೋಷಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಡಿ.ಕೆ.ಆರ್. ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ಮುಖ್ಯ ಅತಿಥಿಯಾಗಿ ಈ ಕಾರ್ಯಕ್ರಮ ಹಮ್ಮಿಕೊಂಡ ಉದ್ದೇಶದ ಬಗ್ಗೆ ವಿವರಿಸಿದರು.

ಸಂಸ್ಥೆಯ ಕಾರ್ಯಕರ್ತೆಯರಾದ ಶ್ರೀಮತಿ ಪುಷ್ಪಲತಾ ಹಾಗೂ ಶ್ರೀಮತಿ ಸೋನಿಯಾ ನಿಕ್ಸನ್ ರವರು ಈ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಡಿ.ಕೆ.ಆರ್. ಡಿ.ಎಸ್ ಸಂಸ್ಥೆಯ ಸಂಯೋಜಕರಾದ ಶ್ರೀ. ಸುನಿಲ್ ಗೊನ್ಸಾಲ್ವಿಸ್ ಕಾರ್ಯಕ್ರಮ ನಿರೂಪಿಸಿದರು. ಒಟ್ಟು 320 ಮಂದಿ ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!