• December 3, 2024

ಡಿ.ಕೆ.ಆರ್. ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ

 ಡಿ.ಕೆ.ಆರ್. ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ

 

ಮುಂಡಾಜೆ: ಉತ್ತಮ ಜೀವನ ಶೈಲಿ, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಹಾಗೂ ಕಾಲ ಕಾಲಕ್ಕೆ ಸರಿಯಾಗಿ ಸೂಕ್ತ ವೈದ್ಯರಿಂದ ತಪಾಸಣೆ ನಡೆಸಿದಾಗ ಕ್ಯಾನ್ಸರ್ ರೋಗವನ್ನು ಸಂಪೂರ್ಣವಾಗಿ ನಿವಾರಿಸಬಹುದು ಎಂದು ಮುಂಡಾಜೆ ಸಂತ ಮೇರಿಸ್ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ. ಸೆಬಾಸ್ಟಿಯನ್ ಪುನ್ನತ್ತಾನತ್ ನುಡಿದರು.

ಅವರು ಸೆ. 26 ರಂದು ಡಿ.ಕೆ.ಆರ್. ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ, ಕಾರಿತಾಸ್ ಇಂಡಿಯಾ ನವದೆಹಲಿ-ಸ್ಪರ್ಶ ಕಾರ್ಯಕ್ರಮ, ಗ್ರಾಮ ಪಂಚಾಯತ್ ಮುಂಡಾಜೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಡಾಜೆ, ಸಂತ ಮೇರಿಸ್ ಚರ್ಚ್ ಮುಂಡಾಜೆ, ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ, ಸ್ನೇಹ ಕಿರಣ್ ಜಿಲ್ಲಾ ಒಕ್ಕೂಟ ಬೆಳ್ತಂಗಡಿ, ಇವುಗಳ ಆಶ್ರಯದಲ್ಲಿ ಮುಂಡಾಜೆ ಸೋಮಂತ್ತಡ್ಕ ಪೇಟೆಯಲ್ಲಿ ನಡೆದ ಕ್ಯಾನ್ಸರ್ ರೋಗದ ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಕುಮಾರಿ ರಂಜಿತಾ ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ ನೀಡಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾಗಿರುವ ವಂದನೀಯ ಫಾ. ಬಿನೋಯಿ ಎ. ಜೆ. ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಮೂಲಕ ನಡೆಸಲ್ಪಡುವ ಸ್ಪರ್ಶ- ಕ್ಯಾನ್ಸರ್ ರೋಗದ ವಿರುದ್ಧ ನಡೆಸುವ ಅಭಿಯಾನದ ಬಗ್ಗೆ ವಿವರಿಸಿದರು. ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಂಜನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ(ರಿ) ಬೆಳ್ತಂಗಡಿ ಇದರ ಅಧ್ಯಕ್ಷೆ ಶ್ರೀಮತಿ ಏಲಿಯಮ್ಮ ತೋಮಸ್ ಶುಭ ಹಾರೈಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸ್ಪರ್ಶ ಕಾರ್ಯಕ್ರಮದ ಸಂಯೋಜಕ ಸುನಿಲ್ ಗೊನ್ಸಾಲ್ವಿಸ್ ಸ್ವಾಗತಿಸಿ, ಡಿ.ಕೆ.ಆರ್.ಡಿ.ಎಸ್. ಸಂಸ್ಥೆಯ ಕಾರ್ಯಕರ್ತರಾದ ಶ್ರೀ. ಜೋನ್ಸನ್ ಧನ್ಯವಾದವಿತ್ತರು. ಸ್ನೇಹ ಕಿರಣ್ ಜಿಲ್ಲಾ ಒಕ್ಕೂಟ ಬೆಳ್ತಂಗಡಿ ಇದರ ಅಧ್ಯಕ್ಷೆ ಶ್ರೀಮತಿ ಮಂಜುಳಾ ಜೋನ್ ಉಪಸ್ಥಿತರಿದ್ದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕಾರ್ಯಕರ್ತರಾದ ಶ್ರೀ. ಮಾರ್ಕ್ ಡಿ’ಸೋಜಾರವರು ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮುಂಡಾಜೆ ಪೇಟೆಯಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ಮೈಕ್ ಉದ್ಘೋಷಣೆ ಮಾಡಿ ಕ್ಯಾನ್ಸರ್ ರೋಗದ ಬಗ್ಗೆ ಸಾರ್ವಜನಿಕರಿಗೆ ಕರಪತ್ರ ವಿತರಿಸಲಾಯಿತು. ಆರ್ಥಿಕವಾಗಿ ಹಿಂದುಳಿದ ಕ್ಯಾನ್ಸರ್ ರೋಗ ಪೀಡಿತ ವ್ಯಕ್ತಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಹಾಗೂ ಅಂಗಡಿ ಮುಂಗಟ್ಟುಗಳ ವರ್ತಕರಿಂದ ಧನ ಸಹಾಯ ಸಂಗ್ರಹಣೆ ಮಾಡಲಾಯಿತು. ಮುಂಡಾಜೆಯ ರಿಕ್ಷಾ ಚಾಲಕರು ಸಹಕರಿಸಿದರು.

Related post

Leave a Reply

Your email address will not be published. Required fields are marked *

error: Content is protected !!