ಶಾಸಕ ಹರೀಶ್ ಪೂಂಜರಿಗೆ ತಲವಾರು ತೋರಿಸಿ ಜೀವಬೆದರಿಕೆಯೊಡ್ಡಿದ ಆರೋಪಿ ಪೋಲಿಸರ ಬಲೆಗೆ
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಕಾರಿಗೆ ಯಾರೊ ಕಿಡಿಗೇಡಿಗಳು ಅಡ್ಡಗಟ್ಟಿ ತಲವಾರು ತೋರಿಸಿ ಜೀವ ಬೆದರಿಕೆ ಒಡ್ಡಿದ ಘಟನೆ ಮಂಗಳೂರು ನಗರ ಹೊರ ವಲಯದ ಪರಂಗಿಪೇಟೆ ಎಂಬಲ್ಲಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ಶಾಸಕರ ಕಾರು ಚಾಲಕ ನವೀನ್ ದೂರು ನೀಡಿದ್ದು ದೂರು ದಾರರು ಆರೋಪಿ ಮತ್ತು ವಾಹನವನ್ನು ಗುರುತಿಸಿದ್ದು ಈ ಹಿನ್ನೆಲೆ ಆರೊಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಓವರ್ ಟೇಕ್ ವಿಷಯದಲ್ಲಿ ಘಟನೆ ನಡೆದಿದೆ ಎಂದು ತನಿಖೆ ವೇಳೆ ತಿಳಿದುಬಂದಿದ್ದು ಸ್ಕಾರ್ಪಿಯೋ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯ ವಿರುದ್ದ ಯಾವುದೇ ಕ್ರಿಮಿನಲ್ ಪ್ರಕರಣ ದಾಖಲಾಗಿಲ್ಲ. ಮತ್ತು ಆತನಲ್ಲಿ ಯಾವುದೇ ಆಯುಧ ಪತ್ತೆಯಾಗಿಲ್ಲ ಎಂದು ಮಾಹಿತಿ ತಿಳಿದುಬಂದಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ.