ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ವಿಶ್ವ ಏಡ್ಸ್ ದಿನಾಚರಣೆ
ಬೆಳ್ತಂಗಡಿ: ಏಡ್ಸ್ ಎಂದರೆ ಶಾಪವಲ್ಲ, ಏಡ್ಸ್ ಸೋಂಕಿತರಿಗೂ ಈ ಸಮಾಜದಲ್ಲಿ ಬದುಕುವ ಹಕ್ಕಿದೆ. ಅವರಿಗೆ ತಾರತಮ್ಯ ಮಾಡುವುದು ಸರಿಯಲ್ಲ. ಹೆಚ್.ಐ.ವಿ. / ಏಡ್ಸ್ ಸೋಂಕಿತ ಹಾಗೂ ಪೀಡಿತರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಈ ನಿಟ್ಟಿನಲ್ಲಿ ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕಾರ್ಯ ಪ್ರಶಂಸನೀಯ ಎಂದು ಜಡ್ಕಲ್ ಸಂತ ಜೋರ್ಜ್ ಚರ್ಚಿನ ಧರ್ಮಗುರುಗಳಾದ ವಂದನೀಯ ಸ್ವಾಮಿ ತೋಮಸ್ ಪಾರೆಕ್ಕಾಟ್ಟೀಲ್ ಅಭಿಪ್ರಾಯಪಟ್ಟರು.
ಅವರು ಡಿಸೆಂಬರ್ 2 ರಂದು ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಸ್ನೇಹಾಂಜಲಿ ಮಹಾಸಂಘ ಜಡ್ಕಲ್, ಸೌಪರ್ಣಿಕಾ ಮಹಾ ಸಂಘ ಬೀಸಿನಪಾರೆ ಹಾಗೂ ಸ್ನೇಹಜ್ಯೋತಿ ಮಹಾಸಂಘ ಮುದೂರು ಇವುಗಳ ಸಹಭಾಗಿತ್ವದಲ್ಲಿ ಜಡ್ಕಲ್ ಸಂತ ಜೋರ್ಜ್ ಚರ್ಚ್ ಸಭಾಭವನದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯು ಆಯೋಜಿಸಿದ ವಿಶ್ವ ಏಡ್ಸ್ ದಿನಾಚರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
. ಜಡ್ಕಲ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವನಜಾಕ್ಷಿ ಎಸ್. ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು
. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಸ್ವಾಮಿ ಬಿನೋಯಿ ಎ.ಜೆ. ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಡ್ಕಲಿನ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ಶ್ರೀಮತಿ ರೇವತಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಹೆಚ್.ಐ.ವಿ./ ಏಡ್ಸ್ ಬಗ್ಗೆ ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಡ್ಕಲ್ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ. ದೇವದಾಸ್ ವಿ.ಜೆ.ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಜಡ್ಕಲ್ ಸ್ನೇಹಾಂಜಲಿ ಮಹಾ ಸಂಘ ದ ಅಧ್ಯಕ್ಷೆ ಶ್ರೀಮತಿ ಮಿನಿ ಜೇಕಬ್, ಬೀಸಿನಪಾರ ಸೌಪರ್ಣಿಕಾ ಮಹಾ ಸಂಘದ ಅಧ್ಯಕ್ಷೆ ಶ್ರೀಮತಿ ನರ್ಮದಾ ಹಾಗೂ ಮುದೂರು ಸ್ನೇಹಜ್ಯೋತಿ ಮಹಾಸಂಘದ ಅಧ್ಯಕ್ಷೆ ಶ್ರೀಮತಿ ಉಷಾ ತಂಗಚ್ಚನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಡ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ 6 ಮಂದಿ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ವಂದನಾ ಸಂಘದ ಸದಸ್ಯರು ಹೆಚ್.ಐ.ವಿ./ ಏಡ್ಸ್ ಬಗ್ಗೆ ಅರಿವಿನ ಹಾಡು ಹಾಡಿದರು.
ಕ್ಯಾನ್ಸರ್ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಈ ಕಾರ್ಯಕ್ರಮದಲ್ಲಿ ಹಾಜರಿದ್ದ ಸದಸ್ಯರಿಂದ ಧನ ಸಹಾಯ ಸಂಗ್ರಹಣೆ ಮಾಡಲಾಯಿತು.
ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕರಾದ ಶ್ರೀ. ಸುನಿಲ್ ಗೊನ್ಸಾಲ್ವಿಸ್ ಕಾರ್ಯಕ್ರಮ ನಿರೂಪಿಸಿ, ಅಂಜಲಿ ಸಂಘದ ಸದಸ್ಯೆ
ಶ್ರೀಮತಿ ಸ್ಮಿತಾ ಧನ್ಯವಾದವಿತ್ತರು. ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿದ್ಯಾರ್ಥಿಗಳಾದ ಕುಮಾರಿ ಜಯಶ್ರೀ, ಕುಮಾರಿ ಮನುಶ್ರೀ, ಶ್ರೀ. ಪ್ರಣಿತ್ ಹಾಗೂ ಶ್ರೀ. ಅಭಿಶ್ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.