ಮಂಗಳೂರಿನಲ್ಲಿ ಲವ್ ಜಿಹಾದ್ ತಡೆಯಲು ಸಹಾಯವಾಣಿ ಆರಂಭಿಸಿದ ಭಜರಂಗದಳ
ಮಂಗಳೂರಿನಲ್ಲಿ ಹೆಚ್ವುತ್ತಿರುವ ಲವ್ ಜಿಹಾದ್ ಪ್ರಕರಣಗಳಿಗೆ ಕಡಿವಾಣ ಹಾಕಲು ಹಿಂದೂ ಸಂಘಟನೆಗಳು ಸಹಾಯವಾಣಿಯನ್ನು ಆರಂಭಿಸಿವೆ.
ಮನೆಯಲ್ಲಿ, ನೆರೆಹೊರೆಗಳಲ್ಲಿ, ಊರು ಹಳ್ಳಿಗಳಲ್ಲಿ ಲವ್ ಜಿಹಾದ್ ಪ್ರಕರಣ ಕಂಡುಬಂದರೆ ತಕ್ಷಣ ಸಂಪರ್ಕಿಸಿ ಎಂದು ಎರಡು ವಾಟ್ಸ್ಆ್ಯಪ್ ಸಂಖ್ಯೆಗಳನ್ನು ನೀಡಲಾಗಿದೆ. ಅಲ್ಲದೆ ಇಮೇಲ್ ಐಡಿಯನ್ನು ನೀಡಲಾಗಿದೆ. ಮಾಹಿತಿಗಳನ್ನು ಗೌಪ್ಯವಾಗಿ ಇಡಲಾಗುತ್ತದೆ ಎಂದು ಹಿಂದೂ ಸಂಘಟನೆಗಳು ಕರೆ ನೀಡಿದೆ.
ಶಾಲೆ, ಕಾಲೇಜು ಕ್ಯಾಂಪಸ್, ಕೆಲಸ ಮಾಡುವ ಸ್ಥಳಗಳಲ್ಲಿ ಯುವತಿಯರು ಲವ್ ಜಿಹಾದ್ಗೆ ಬಲಿಯಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಆದ್ದರಿಂದ ಲವ್ ಜಿಹಾದ್ ಪ್ರಕರಣ ಕಂಡುಬಂದಲ್ಲಿ ಹೆಲ್ಪ್ ಲೈನ್ ನಂಬರ್ಗೆ ಸಂಪರ್ಕಿಸಿ. ಪೋಷಕರು ಲವ್ ಜಿಹಾದ್ ಬಗ್ಗೆ ಎಚ್ಚರ ವಹಿಸಿ, ಮಕ್ಕಳ ಬಗ್ಗೆ ಸಂಶಯವಿದ್ದಲ್ಲಿ ಸಂಕೋಚ ಪಡದೆ ಸಂಪರ್ಕಿಸಬಹುದು. ಅಗತ್ಯವಿದ್ದಲ್ಲಿ ಕಾನೂನಿನ ಸಲಹೆಗಳನ್ನು ನೀಡಲಾಗುತ್ತದೆ. ಲವ್ ಜಿಹಾದ್ ಮುಕ್ತವನ್ನಾಗಿ ಮಾಡುವುದೇ ನಮ್ಮ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.
ಹಾಗೆಯೇ “ಲವ್ ಜಿಹಾದ್ ಮುಕ್ತ ಹಿಂದೂ ಸಮಾಜ ನಮ್ಮ ಗುರಿ” ಎನ್ನುವ ಟ್ಯಾಗ್ ಲೈನ್ನ ಪೋಸ್ಟರ್ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.