ಲೋಕನಾಡು ಶ್ರೀ ಲೋಕನಾಥೇಶ್ವರ ಸನ್ನಿಧಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ
ನಿಡಿಗಲ್: ತುಳುನಾಡಿನ ಸತ್ಯನಾಪುರದ ಸತ್ಯದ ಸಿರಿಗಳ ಮೂಲ ಆಲಡೆ ಕ್ಷೇತ್ರ, ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ , ಸಿರಿ ಜಾತ್ರಾ ಮಹೋತ್ಸವ ವೈಭವದಿಂದ ಜರುಗುತಿದ್ದು, ಇಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ದೇವಸ್ಥಾನಕ್ಕೆ ಭೇಟಿನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ, ಆಡಳಿತ ಮಂಡಳಿ ಅಧ್ಯಕ್ಷರು, ಅರ್ಚಕ ವೃಂದದವರು ಅವರನ್ನು ಶಾಲು ಹೊದಿಸಿ ಫಲಪುಷ್ಪಗಳನ್ನು ನೀಡಿ ಸ್ವಾಗತಿಸಿದರು.