ರಕ್ಷಿತ್ ಶಿವರಾಂ ಪರ ರಾಜ್ಯ, ಜಿಲ್ಲೆ ಮತ್ತು ತಾಲೂಕು ಮಟ್ಟದ ಎಲ್ಲಾ ಪದಾಧಿಕಾರಿಗಳು ನಾಳೆ ಮನೆಮನೆಗೆ ಭೇಟಿ ನೀಡಿ ಪ್ರಚಾರ ನಡೆಸುವಂತೆ ವಸಂತ ಬಂಗೇರ ಕರೆ
ಬೆಳ್ತಂಗಡಿ: ಕರ್ನಾಟಕ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಬೆಳ್ತಂಗಡಿ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಕ್ಷಿತ್ ಶಿವರಾಂ ರವರ ಪರವಾಗಿ ರಾಜ್ಯ, ಜಿಲ್ಲೆ ಮತ್ತು ತಾಲೂಕು ಮಟ್ಟದ ಎಲ್ಲಾ ಪದಾಧಿಕಾರಿಗಳು ಮೇ.5 ರಂದು ತಮ್ಮ ತಮ್ಮ ಸ್ಥಳೀಯ ಬೂತ್ ಗಳಲ್ಲಿ ಮನೆಮನೆ ಭೇಟಿ ನೀಡಿ ಪ್ರಚಾರ ನಡೆಸುವಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ ವಸಂತ ಬಂಗೇರ ಕರೆ ನೀಡಿದ್ದಾರೆ.