• December 3, 2024

ಚುನಾವಣೆಯಲ್ಲಿ ಗೆಲ್ಲಬೇಕೆಂದು ಹಿಂದೂಗಳ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿರುವ ಕಾಂಗ್ರೆಸ್‍ಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ವಿರುದ್ದ ಕಿಡಿ

 ಚುನಾವಣೆಯಲ್ಲಿ ಗೆಲ್ಲಬೇಕೆಂದು ಹಿಂದೂಗಳ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿರುವ ಕಾಂಗ್ರೆಸ್‍ಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ವಿರುದ್ದ ಕಿಡಿ

 

ಚುನಾವಣೆಯಲ್ಲಿ ಗೆಲ್ಲಬೇಕೆಂದು ಹಿಂದೂಗಳ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿರುವ ಕಾಂಗ್ರೆಸ್‍ಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ವಿರುದ್ದ ಕಿಡಿಕಾರಿದರು

ಬಿಜೆಪಿ, ಬಜರಂಗದಳದವರಿಗೆ ಹನುಮಾನ್ ಚಾಲಿಸಾ ಪಠಿಸಲು ಬರುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೇವಾಲ ಹುಡುಗಾಟದ ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆ. ಅವರ ಈ ಸವಾಲನ್ನು ಸ್ವೀಕರಿಸಿ ಬಿಜೆಪಿ ಕಾರ್ಯರ್ತರ ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸ ಪಠಿಸಲಿದ್ದಾರೆ. ತಾವು ಸಹ ಇಂದು ಮಲ್ಲೇಶ್ವರನ ಶ್ರೀರಾಮ ಮಂದಿರಲ್ಲಿ ಹನುಮಾನ್ ಚಾಲಿಸಾ ಪಠಿಸಲಿದ್ದು, ಸುರ್ಜೆವಾಲ ಮತ್ತು ಕಾಂಗ್ರೆಸ್‍ನವರು ದೇವಸ್ಥಾನಗಳಿಗೆ ಬಂದು ಕೇಳಲಿ ಎಂದು ಆಹ್ವಾನಿಸಿದರು.

ಹನುಮನನ್ನು ನಾವು ನಂಬಿರುವುದು ಮತ್ತು ಹನುಮನ ಶಕ್ತಿ ಬಗ್ಗೆ ವಿಶ್ವಕ್ಕೇ ಗೊತ್ತು. ಕರ್ನಾಟಕ, ಹನುಮ ಉದಯಿಸಿದ ನಾಡು. ಅಂಜನಾದ್ರಿ ಬೆಟ್ಟ, ಹಂಪಿ ಪ್ರದೇಶಗಳಲ್ಲಿ ಓಡಾಡಿದವರು. ಹನುಮಂತನ ಮೇಲೆ ಕನ್ನಡಿಗರಿಗಿರುವ ಭಕ್ತಿ, ಹೆಮ್ಮೆ, ಗೌರವವನ್ನು ಕದ್ದೊಯ್ಯುವ ಪ್ರಯತ್ನವನ್ನು ಕಾಂಗ್ರೆಸ್ ನವರು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

Related post

Leave a Reply

Your email address will not be published. Required fields are marked *

error: Content is protected !!