• November 22, 2024

ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂಬ ವಿವಾದಾದ್ಮಕ ಹೇಳಿಕೆ ಪ್ರಕರಣ: ಶಾಸಕ ಹರೀಶ್ ಪೂಂಜರಿಗೆ ಕರ್ನಾಟಕ ಹೈಕೋರ್ಟ್ ತಡೆ

 ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂಬ ವಿವಾದಾದ್ಮಕ ಹೇಳಿಕೆ ಪ್ರಕರಣ: ಶಾಸಕ ಹರೀಶ್ ಪೂಂಜರಿಗೆ ಕರ್ನಾಟಕ ಹೈಕೋರ್ಟ್ ತಡೆ

 

ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಹೇಳಿಕೆ ನೀಡಿದ್ದರು. ಈ ವಿವಾದಾತ್ಮಕ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿತ್ತು. ಇದಕ್ಕೆ ತಡೆ ನೀಡುವಂತೆ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ತನಿಖೆಗೆ ಮಧ್ಯಂತರ ತಡೆ ನೀಡಿ ಇಂದು ಆದೇಶ ಹೊರಡಿಸಿದೆ.
ಐಪಿಸಿ ಸೆ.153 ಎ ಅಡಿ ಕೇಸ್ ದಾಖಲಿಸಲು ಪ್ರಕರಣ ಯೋಗ್ಯವಾಗಿಲ್ಲ. ಹೇಳಿಕೆ ತರುವಾಯ ಯಾವುದೇ ಶಾಂತಿಭಂಗದ ಕೃತ್ಯ ನಡೆದಿಲ್ಲ. ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಎಂದು ಹರೀಶ್ ಪೂಂಜಾ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದರು.

Related post

Leave a Reply

Your email address will not be published. Required fields are marked *

error: Content is protected !!