ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಯೋಗ ಶಿಬಿರ ಉದ್ಘಾಟನೆ
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಒಂದಲ್ಲ ಒಂದು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ವಿಶ್ವ ಯೋಗ ದಿನದ ತಯಾರಿಯ ಸಲುವಾಗಿ ಪೂರ್ವಭಾವಿಯಾಗಿ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿದೆ. ಇಂದು ಈ ಶಾಲೆಯಲ್ಲಿ ಯೋಗ ಶಿಬಿರದ ಉದ್ಘಾಟನೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಕಾಲೇಜಿನ ಮುಖ್ಯಸ್ಥರಾಗಿರುವ ಡಾ.ಶಿವಪ್ರಸಾದ್ ಶೆಟ್ಟಿ ಇವರು ಉದ್ಘಾಟಿಸಿದರು.
ತದನಂತರ ಮಾತನಾಡುತ್ತಾ ಜೀವನದಲ್ಲಿ ಯೋಗ ಶಿಕ್ಷಣದ ಮಹತ್ವ ಉತ್ತಮ ಆರೋಗ್ಯಕ್ಕಾಗಿ ಯೋಗ, ಪ್ರಾಣಾಯಾಮ, ಹೃದಯ ಸಂಬಂಧಿ ವಿಚಾರಗಳಿಗೆ ಯೋಗದ ಉಪಯೋಗ ಇತ್ಯಾದಿ ಹಲವು ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿ ವಿದ್ಯಾರ್ಥಿಗಳಲ್ಲಿ ಯೋಗದ ಅಗತ್ಯ ಹಾಗೂ ಮನಸ್ಸಿನ ಕೇಂದ್ರೀಕರಣಕ್ಕೆ ಬೇಕಾದಂತಹ ಹಲವು ಆಸನಗಳನ್ನು ಕುರಿತು ಇಲ್ಲಿ ವಿವರಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಶಾಲೆಯಲ್ಲಿ ಯೋಗ ಶಿಬಿರದ ಉದ್ದೇಶ ಹಾಗೂ ಶಿಬಿರದ ರೂಪುರೇಷೆಗಳ ಕುರಿತು ಅವುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳುವ ಕುರಿತು ವಿವರಿಸಿ ಎಲ್ಲರನ್ನು ಸ್ವಾಗತಿಸಿದರು. ಯೋಗ ನೃತ್ಯದ ಮುಖಾಂತರ ಕಾರ್ಯಕ್ರಮವು ಪ್ರಾರಂಭಗೊಂಡದ್ದು ಈ ಕಾರ್ಯಕ್ರಮದ ವಿಶೇಷವಾಗಿತ್ತು.ಕುಮಾರಿ ಚಿನ್ಮಯಿ ರೈ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿನಿ ಕುಮಾರಿ ಅನ್ವಿತಾ ಹೆಬ್ಬಾರ್ ಅತಿಥಿಗಳ ಕಿರುಪರಿಚಯವನ್ನು ನೀಡಿ, ಕುಮಾರಿ ಅನಿಕ ಧನ್ಯವಾದ ಇತ್ತರು.
ಉದ್ಘಾಟನಾ ಸಮಾರಂಭದ ಬಳಿಕ ದಿಶಾ ಹಾಗೂ ಕುಮಾರಿ ಚಿನ್ಮಯ್ ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ನೀಡಿದರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.