ಖ್ಯಾತ ಯಕ್ಷಗಾನ ಹಾಗೂ ತಾಳ ಮದ್ದಲೆ ಕಲಾವಿದ ಕುಂಬ್ಳೆ ಸುಂದರ್ ರಾವ್ (88) ಇಂದು( ನ.30) ರಂದು ಮುಂಜಾನೆ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕುಂಬ್ಳೆ ಸುಂದರ್ ರಾವ್ ಅವರು, ಮಂಗಳೂರಿನ ಪಂಪ್ವೆಲ್ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಂದರ್ ರಾವ್ ಅವರು ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಅದ್ಭುತ ವಾಕ್ ಚಾತುರ್ಯದಿಂದ ಪ್ರಸಿದ್ಧವಾಗಿದ್ದ ಕುಂಬ್ಳೆ ಸುಂದರ್ ರಾವ್ ಅವರು, ಪ್ರಾಸಬದ್ಧ ಸಂಭಾಷಣೆಯಿಂದಲೆ ಹೆಸರುವಾಸಿಯಾಗಿದ್ದರು. ಯಕ್ಷಗಾನದ ತೆಂಕುತಿಟ್ಟು ಕಲಾವಿದರಾಗಿದ್ದ ಅವರು, ಧರ್ಮಸ್ಥಳ […]
ಪುದುವೆಟ್ಟು: ಪುದುವೆಟ್ಟು ಗ್ರಾಮದ ಕೇರಿಮಾರು ಎಂಬಲ್ಲಿ ತಂದೆ ಮಗ ವಿಷಕಾರಿ ಅಣಬೆ ಪದಾರ್ಥ ಸೇವಿಸಿ ಸಾವನ್ನಪ್ಪಿದ ಘಟನೆ ನ.22ರಂದು ವರದಿಯಾಗಿದೆ. ವಿಷಕಾರಿ ಅಣಬೆ ಎಂದು ತಿಳಿಯದೆ ಪದಾರ್ಥವನ್ನು ಮಾಡಿ ಸೇವಿಸಿದ್ದು ಈ ಸಾವಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ತಂದೆ ಗುರುವ(85), ಪುತ್ರ ಓಡಿ(45) ಮೃತಪಟ್ಟ ದುರ್ದೈವಿಗಳು. ತೀರ ಬಡ ಕುಟುಂಬದ ಮನೆಯಲ್ಲಿ ಗುರುವ ಸಹಿತ ಇಬ್ಬರು ಮಕ್ಕಳು ವಾಸವಾಗಿದ್ದರು. ಮಂಗಳವಾರ ಇವರ ಇಬ್ಬರ ಮೃತದೇಹ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು ಕಂಡು ಆತಂಕಕ್ಕೀಡಾಗಿದ್ದರು. ಪರಿಶೀಲಿಸಿದಾಗ ಸೋಮವಾರ […]Read More
ಬೆಳ್ತಂಗಡಿ; ಸಾಲ ಬಾದೆಗೊಳಗಾಗಿದ್ದ ಕಿಲ್ಲೂರು ಮಸ್ಜಿದ್ ಮಾಜಿ ಅಧ್ಯಕ್ಷ ಬಿ.ಹೆಚ್ ಅಬ್ದುಲ್ ಹಮೀದ್ (64) ಅವರು ನ.5 ರಂದು ವಿಷ ಸೇವಿಸಿದ್ದವರು ನ.16 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನ.5 ರಂದು ಸಂಜೆಯವರೆಗೆ ಮನೆಯಲ್ಲಿಯೇ ಇದ್ದ ಅವರು ಇಳಿ ಸಂಜೆ ಮನೆಯ ಪಕ್ಕದ ನೇತ್ರಾವತಿ ನದಿ ಕಿನಾರೆಯ ಅಲಂಜಿಕಟ್ಟ ಎಂಬಲ್ಲಿಗೆ ತೆರಳಿ ವಿಷ ಸೇವಿಸಿ ತೀವ್ರ ಅಸ್ವಸ್ಥರಾಗಿ ಬಿದ್ದಿದ್ದರು. ಗಂಭೀರಾವಸ್ಥೆಯಲ್ಲಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಹಮೀದ್ ಅವರು ಕಿಲ್ಲೂರು ಮಸ್ಜಿದ್ನ […]Read More
ಓಡಿಲ್ನಾಳ: ತೋಟದಲ್ಲಿ ಅಡಿಕೆ ಕೀಳುವ ವೇಳೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವು
ಓಡಿಲ್ನಾಳ: ತೋಟದಲ್ಲಿ ಅಡಿಕೆ ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕ ಮೃತಪಟ್ಟ ಘಟನೆ ಓಡಿಲ್ನಾಳ ಗ್ರಾಮದ ರೇಷ್ಮೆ ರಸ್ತೆಯ ಹತ್ತಿರ ನಡೆದಿದೆ. ಮೃತಪಟ್ಟ ಕಾರ್ಮಿಕ ಜಾರ್ಖಂಡ್ ರಾಜ್ಯದ ರಿತೇಶ್ ಕಿರ್ಕೆಟ್ಟಾ(22)ಎಂದು ತಿಳಿದುಬಂದಿದೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ಮೃತ ಸಂಬಂಧಿ ಲುಕಾಸ್ ದೂರಿನಲ್ಲಿ ತಿಳಿಸಿದ್ದಾರೆ.Read More
ಬೆಳ್ತಂಗಡಿ: ಶಿಸ್ತಿನ ಸಿಪಾಯಿ, ರಾಷ್ಟ್ರೀಯ ಹಬ್ಬಗಳಲ್ಲಿ ಭಾಗವಹಿಸಿ, ಪಥಸಂಚಲನಕ್ಕೆ ಮಾರ್ಗದರ್ಶನ ನೀಡುತ್ತಿದ್ದ ಎಂ.ಆರ್
ಬೆಳ್ತಂಗಡಿ: ನಿವೃತ್ತ ಯೋಧ, ಶಿಸ್ತಿನ ಸಿಪಾಯಿ, ಬೆಳ್ತಂಗಡಿ ಜೈನ್ ಪೇಟೆ ನಿವಾಸಿ, ವೇಣೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ಯ ನೇಮಕಾತಿ ಅಧಿಕಾರಿ ಎಂ.ಆರ್ ಜೈನ್(77) ಅಲ್ಪಕಾಲದ ಅಸೌಖ್ಯದಿಂದ ನ.12ರಂದು ವಿಧಿವಶರಾದರು. ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದ ಇವರು 1986ರಲ್ಲಿ ವೇಣೂರಿನ ಕೈಗಾರಿಕಾ ತರಬೇತಿ ಸಂಸ್ತೆಯ ಸ್ಥಾಪಕ ಪ್ರಾಚಾರ್ಯರಾಗಿ ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿದ್ದರು. ನಿವೃತ್ತಿಯ ಬಳಿಕ ಇದುವರೆಗೂ ಸಂಸ್ತೆಯ ನೇಮಕಾತಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಸೇನೆಯಿಂದ ನಿವೃತ್ತಿಯ ಬಳಿಕ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ನಡೆಯುತ್ತಿರುವ ಸ್ವಾತಂತ್ರೋತ್ಸವ, […]Read More
ಮದ್ದಡ್ಕ: ವಿಪರೀತ ಜ್ವರದಿಂದ ಸಹೋದರರಿಬ್ಬರು 24 ಗಂಟೆಗಳ ಅವಧಿಯಲ್ಲಿ ಮರಣ ಹೊಂದಿದ ಹೃದಯ ವಿದ್ರಾವಕ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದ ಲಾಡಿ ಎಂಬಲ್ಲಿ ನಡೆದಿದೆ. ಸಫ್ವಾನ್ ಮತ್ತು ಸಿನಾನ್ ಮೃತ ಮಕ್ಕಳು. ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮಕ್ಕಳಿಗೆ ಮನೆಯಲ್ಲೇ ಇದ್ದ ಮದ್ದು ನೀಡುತ್ತಿದ್ದು, ಎಷ್ಟೇ ಔಷಧಿ ಕೊಟ್ಟರೂ ಜ್ವರ ಕಡಿಮೆಯಾಗಿರಲಿಲ್ಲ. ಜ್ವರ ಉಲ್ಬಣಗೊಂಡ ಬಳಿಕ ಮಂಗಳೂರು ಆಸ್ಪತ್ರೆಗೆ ಕರೆತರಲಾಗಿದೆ. ಒಂದು ಮಗು ನಿನ್ನೆ ಮಧ್ಯಾಹ್ನ ಮೃತಪಟ್ಟರೆ ಮತ್ತೊಂದು ಮಗು ಮಂಗಳವಾರ ಬೆಳಗ್ಗೆ ಮೃತಪಟ್ಟಿದೆ. […]Read More
ಕನ್ಯಾಡಿ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಸಂಭವಿಸಿದೆ. ಸುಂದರ ಮೃತ ದುರ್ದೈವಿ. ಇವರು ವಿಪರೀತ ಮದ್ಯದ ಚಟ ಹೊಂದಿದ್ದು ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದರು. ಇವರಿಗಾಗಿ ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇದೀಗ ಇವರ ಮೃತದೇಹ ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಮತ್ತಿಲ ಎಂಬಲ್ಲಿನ ನಿವಾಸಿ ಅಚ್ಚುತರಾವ್ ಎಂಬವರ ಅಡಿಕೆ ತೋಟದಲ್ಲಿನ ತೆರೆದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಡಿದು […]Read More
ಬೆಳಾಲು: ಬೆಳಾಲು ಗ್ರಾಮದ ಶಿವಪ್ರಿಯ ಉಪ್ಪಾರು ಮನೆ ನಿವಾಸಿ, ಕೊಡುಗೈ ದಾನಿ, ಪ್ರಗತಿಪರ ಕೃಷಿಕ, ಅನಂತ ಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರು, ದೇವಸ್ಥಾನ ದ ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷರಾದ ದಿನೇಶ್( 56 ವ) ಇವರು ಆ.26 ರಂದು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಇವರು ಧಾರ್ಮಿಕ ಕ್ಷೇತ್ರದಲ್ಲಿ ದೇವಸ್ಥಾನದ ಎಲ್ಲಾ ಕಾರ್ಯ ಚಟುವಟಿಕೆಗಳಲ್ಲಿಯೂ ನಿರಂತರವಾಗಿ ಮುಂದಿದ್ದರು. ಮಹಾದಾನಿಗಳು , ಅನ್ನದಾತರು ಹೌದು.ನಾರಾಯಣ ಗುರು ಸೇವಾ ಸಂಘ(ರಿ) ಬೆಳಾಲು ಇದರ ನಾರಾಯಣ ಗುರು ಮಂದಿರದ ಜೀರ್ಣೋದ್ಧಾರ […]Read More
ಬೆಳ್ತಂಗಡಿ ತಾಲೂಕಿನ ಮುಂಡಾಜಿ ಗ್ರಾಮದ ಕಾಪು ನಿವಾಸಿ ಸುಜಾತ ಎಂಬ ಗರ್ಭಿಣಿ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ ಘಟನೆ ನಡೆದಿದೆ ಬದ್ಯಾರು ಖಾಸಗಿ ಆಸ್ಪತ್ರೆಯಲ್ಲಿ ಎರಡನೇ ಹೆರಿಗೆಗೆ ದಾಖಲಾಗಿದ್ದ ಸುಜಾತ ರವರಿಗೆ ವೈದ್ಯರು ಆಪರೇಷನ್ ಮಾಡಿದ್ದು ನಂತರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ ಸುಜಾತರಿಗೆ ವಿಪರೀತ ರಕ್ತಸ್ರಾವ ಉಂಟಾಗಿದೆ ತಕ್ಷಣ ವೈದ್ಯರು ಮಂಗಳೂರು ಆಸ್ಪತ್ರೆಗೆ ಸಾಗಿಸಲು ಸಲಹೆ ನೀಡಿದ್ದಾರೆ ಅದರಂತೆ ಮನೆಯವರು ಆಂಬುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ […]Read More
ಹಿರಿಯ ನಾಟಕಕಾರ, ನಿರ್ದೇಶಕ, ವಜ್ರನೇತ್ರ ಪತ್ರಿಕೆ ಸಂಪಾದಕ, ರತ್ನಾಕರ ರಾವ್ ಕಾವೂರುರವರು (81) ಇಂದು ಬೆಳಿಗ್ಗೆ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಸಾಮಾಜಿಕ, ಪೌರಾಣಿಕ, ಆಧ್ಯಾತ್ಮಿಕ, ನವ್ಯ ಮತ್ತು ಐತಿಹಾಸಿಕ ಹೀಗೆ ಐದು ಬಗೆಯ ನಾಟಕ ರಚನೆಯಲ್ಲಿ ಅವರದ್ದು ಗಮನಾರ್ಹ ಸಾಧನೆಯಾಗಿತ್ತು. ವಜ್ರನೇತ್ರ ಎಂಬ ಕನ್ನಡ ಪತ್ರಿಕೆಯ ಮೂಲಕ ಸಾಮಾಜಿಕ ಸಮಸ್ಯೆಗಳನ್ನು ಬಿಂಬಿಸಿ ಸರಕಾರದ ಗಮನ ಸೆಳೆಯುತ್ತಿದ್ದ ಅವರು ಸುಧೀರ್ಘ 60 ವರ್ಷಗಳ ಕಾಲ ಸರಸ್ವತಿಯ ಸೇವೆಗೈದಿದ್ದರು. ‘ನಾಟಕ ಕಲಾ ರತ್ನ’ ಬಿರುದಾಂಕಿತ ರತ್ನಾಕರ ರಾವ್ […]Read More