ಬಂದಾರು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ ಯಲ್ಲಿ ಕಳೆದ 15 ವರ್ಷಗಳಿಂದ ಕರ್ತವ್ಯ ಸಲ್ಲಿಸುತ್ತಿದ್ದ ಶಿಕ್ಷಕರಾದ ಸುರೇಶ್ ಮಾಚಾರ್ ಈ ಬಾರಿಯ ಶಿಕ್ಷಕರ ಸಾರ್ವತ್ರಿಕ ವರ್ಗಾವಣೆಯಲ್ಲಿ ವರ್ಗಾವಣೆ ಹೊಂದಿದ್ದು,ತಮ್ಮ ಕರ್ತವ್ಯದ ನೆನಪಿಗಾಗಿ ಶಾಲೆಗೆ ಧ್ವಜ ಸ್ಥಂಭದ ಕೊಡುಗೆ ನೀಡಿದರು. ಇದನ್ನು 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಸದಸ್ಯರಾದ ಶ್ರೀನಿವಾಸ ಗೌಡರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಬಾಲಕೃಷ್ಣ ಗೌಡ, ಶಾಲಾ ಶಿಕ್ಷಕ ವೃಂದ,ಪೋಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Feature Post
ಮಚ್ಚಿನ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುತ್ತಿನ,ದಲ್ಲಿ ಶಾಲಾಭಿವೃದ್ಧಿ ಸಮಿತಿ,ಪೋಷಕರು,ಹಳೇ ವಿದ್ಯಾರ್ಥಿ ಸಂಘ, ಸ್ಥಳೀಯ ಸ್ವಸಹಾಯ ಸಂಘಗಳ ಸದಸ್ಯರು, ಸಿದ್ಧಿ ವಿನಾಯಕ ಭಜನಾ ಮಂಡಳಿ ಮತ್ತು ಊರಿನ ಮಹನೀಯರ ಪಾಲ್ಗೊಳ್ವಿಕೆಯಿಂದ ಸ್ವಾತಂತ್ರ್ಯ ದಿನಾಚರಣೆಯ ನ್ನು ಆಚರಿಸಲಾಯಿತು. ಹಳೇ ವಿದ್ಯಾರ್ಥಿ ಸಂಘದವರಿಂದ ಮೆರವಣಿಗೆ ಆಯೋಜಿಸಲಾಗಿತ್ತು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು.ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಗಂಗಾಧರ ಸಾಲಿಯಾನ್ ವಹಿಸಿದ್ದರು. ವೇದಿಕೆಯಲ್ಲಿ ಸ್ಥಳೀಯ ಪಂಚಾಯತ್ ಸದಸ್ಯರಾದ ಚಂದ್ರಶೇಖರ ಬಿ. ಎಸ್.ಹಾಗೂ ಸ್ಥಳೀಯ ದುರ್ಗಾ ಕ್ಲಿನಿಕ್ ವೈದ್ಯಾಧಿಕಾರಿಗಳಾದ […]Read More
ಮೊಗ್ರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರು ಇಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆಯು ಜರುಗಿತು. ಈ ವೇಳೆ ಬಂದಾರು ಗ್ರಾ.ಪಂ ನಿಕಟ ಪೂರ್ವ ಉಪಾಧ್ಯಕ್ಷ ರಾದ ಗಂಗಾಧರ ಪೂಜಾರಿ, ಗ್ರಾ.ಪಂ ಸದಸ್ಯರಾದ ಬಾಲಕೃಷ್ಣ ಮತ್ತು ಎಸ್ ಡಿಎಂಸಿ ಅಧ್ಯಕ್ಷರಾದ ಶೀನಪ್ಪ ಗೌಡ ಉಪಸ್ಥಿತರಿದ್ದರು. ಪೋಷಕರು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದು ಸಹಕರಿಸಿದರುRead More
ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ.25 ರಂದು ದ.ಕ ಜಿಲ್ಲಾ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ & ಪ್ರೌಢ, ಪದವಿ ಪೂಋವ, ಪದವಿ ಶಿಕ್ಷಣ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.Read More
ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ.
ಧರ್ಮಸ್ಥಳ: ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿಯನ್ನು ಇಂದು ಶಾಲಾ ವಠಾರದಲ್ಲಿ ಆಯೋಜಿಸಲಾಯಿತು. ಈ ಸ್ಪರ್ಧೆಯನ್ನು ಶಂಕರ ರಾಮ ಕಾರಂತ,ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಇಲ್ಲಿನ ಶಿಕ್ಷಕರಾದ ರವಿಚಂದ್ರ ಹಾಗೂ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರಾಥಮಿಕ ಶಾಲೆ, ಧರ್ಮಸ್ಥಳ ಇಲ್ಲಿನ ನಿವೃತ್ತ ಶಿಕ್ಷಕಿ ಮನೋರಮಾ ತೊಳ್ಪಾಡಿತ್ತಾಯ ಜೊತೆಗೂಡಿ ದೀಪ ಪ್ರಜ್ವಲನೆಯೊಂದಿಗೆ ಉದ್ಘಾಟಿಸಿ ಶುಭ ಹಾರೈಸಿದರು. ಶಾಲೆಯ ವಿವಿಧ ವರ್ಗ ಕೋಣೆಗಳಲ್ಲಿ ಪ್ರತಿಭಾ ಕಾರಂಜಿಯಲ್ಲಿ ಇರುವಂತಹ […]Read More
ಬಂದಾರು :ರಾಷ್ಟ್ರಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ಗುರುತಿಸಿಕೊಂಡಿರುವ ಹೆಮ್ಮೆಯ ಸರಕಾರಿ ಉನ್ನತಿಸಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಲ್ಲಿ ಅಡಿಕೆ ತೋಟ ನಿರ್ಮಾಣವಾಗಿದೆ. ಈ ತೋಟದಲ್ಲಿ ಕಳೆ ಕೀಳುವುದು, ಅಡಿಕೆ ಗಿಡಕ್ಕೆ ಸೊಪ್ಪು ಹಾಕುವ ಕೆಲಸವೂ ಶ್ರಮದಾನದ ಮೂಲಕ ಶಾಲಾಭಿವೃದ್ಧಿ ಸಮಿತಿ, ಪೋಷಕ ವೃಂದ ಹಾಗೂ ಹಳೇವಿದ್ಯಾರ್ಥಿ ಸಂಘದ ಒಗ್ಗೂಡುವಿಕೆಯಲ್ಲಿ ಜುಲೈ.13 ರಂದು ನೆರವೇರಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಉಮೇಶ್ ಗೌಡ ಪೋಯ್ಯೋಲೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುಂದರ […]Read More
ಬೆಳ್ತಂಗಡಿ : ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ – ಬೆಳ್ತಂಗಡಿ 2023-24 ಸಾಲಿನ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ ಜುಲೈ.12 ರಂದು ನೆರವೇರಿತು. ವಾಣಿ ಶಿಕ್ಷಣ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ನಾರಾಯಣ ಗೌಡ ಇವರು ದೀಪವನ್ನು ಬೆಳಗಿಸಿ ವಿದ್ಯಾರ್ಥಿಗಳಿಗೆ ಎಳವೆಯಲ್ಲಿಯೇ ಪ್ರಜಾಪ್ರಭುತ್ವ ವ್ಯವಸ್ಥೆಯ ಅರಿವನ್ನು ನೀಡುವುದರಿಂದ ಪ್ರಜಾಪ್ರಭುತ್ವದ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಲು ಸಹಕಾರಿಯಾಗಬಲ್ಲದು, ಶಿಸ್ತು, ಕಠಿಣ ಪರಿಶ್ರಮ, ನಿರ್ದಿಷ್ಟ ಗುರಿ ವಿದ್ಯಾರ್ಥಿ ಜೀವನದಲ್ಲಿ ಸಾಗುವಂತಾಗಬೇಕು ಎಂದು ತಿಳಿಸಿದರು . […]Read More
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಒಂದರಿಂದ ಆರನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆ ಇಂದು ನಡೆಯಿತು. ಈ ಸಭೆಗೆ ಮುಖ್ಯ ಅತಿಥಿಗಳಾಗಿ ಮಕ್ಕಳ ತಜ್ಞೆ ಡಾಕ್ಟರ್ ಅನನ್ಯ ಲಕ್ಷ್ಮಿ ಇವರು ಆಗಮಿಸಿದ್ದರು. ಪೋಷಕರು ಮಗುವಿನ ಕನ್ನಡಿ ಇದ್ದಂತೆ. ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಬೇಕು. ಮಗುವಿನ ಸಮಸ್ಯೆಯನ್ನು ಬುದ್ಧಿವಂತಿಕೆಯಿಂದ ಪರಿಹರಿಸಬೇಕು. ಮಗು ಅಮೂಲ್ಯವಾದ ಆಸ್ತಿ, ಅದನ್ನು ಸರಿಯಾಗಿ ಉಳಿಸಿ ಬೆಳೆಸಿ ಸಮಾಜಕ್ಕೆ ಉತ್ತಮ ಪ್ರಜೆಯನ್ನಾಗಿ ಮಾಡಿಸುವುದು ಎಲ್ಲ ಪೋಷಕರ ಆದ್ಯ […]Read More
ನಿಡ್ಲೆ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಡೆ ಬುಕ್ ಪೆನ್ ಪೆನ್ಸಿಲ್ ಹಣ್ಣು ಹಂಪಲು ಹಾಗೂ ಹೂವಿನ ಗಿಡ ಹಾಗೂ ಪುಸ್ತಕ ಹಾಗೂ ಸಿಹಿ ತಿಂಡಿ ವಿತರಣೆ ಕಾರ್ಯಕ್ರಮವು ಜು.10 ರಂದು ಸರಕಾರಿ ಹಿರಿಯ ಪ್ರೌಡ ಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆ ನಿಡ್ಲೆ ಹಾಗೂ ಅಂಗನವಾಡಿ ಕೇಂದ್ರ ನಿಡ್ಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಹೊಕ್ಕಾಡಿಗೊಳಿ ಹಾಗೂ ಅಂಗನವಾಡಿ ಕೇಂದ್ರಕ್ಕೆ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಆಯೋಜಕರಾದ ನಾಗೇಶ್ ಕುಮಾರ್, ಸುದಾ ನಾಗೇಶ್ […]Read More
ಧರ್ಮಸ್ಥಳ: ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಆರರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆ ಇಂದು ನಡೆಯಿತು. ಈ ಸಭೆಗೆ ಮುಖ್ಯ ಅತಿಥಿಗಳಾಗಿ ಬೋಧಿ ಕೌನ್ಸಿಲಿಂಗ್ ಸೆಂಟರ್ ಉಜಿರೆ ಇದರ ನಿರ್ದೇಶಕರಾಗಿರುವ, ಕೌನ್ಸಿಲರ್, ಯು ಟ್ಯೂಬರ್ ಮೋಟಿವೇಶನಲ್ ಸ್ಪೀಕರ್ ಸೈಕಾಲಜಿಸ್ಟ್ ,ಆರ್ಟಿಸ್ಟ್ ಆಗಿರುವ ಶ್ರೀಯುತ ಸ್ಮಿತೇಶ್ ಬಾರ್ಯ ಇವರು ಆಗಮಿಸಿದ್ದರು.ಹೆತ್ತವರು ಮಕ್ಕಳಿಗಾಗಿ ಬಹಳಷ್ಟು ತ್ಯಾಗಗಳನ್ನು ಮಾಡುತ್ತಾರೆ.ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ವಾತಾವರವನ್ನು ಸೃಷ್ಟಿ ಮಾಡಬೇಕು.ಅವರಿಗಾಗಿ ಆಸ್ತಿ ಮಾಡಬೇಡಿ ಅವರನ್ನೇ ಆಸ್ತಿಯನ್ನಾಗಿ ಮಾಡಿ.ಮಕ್ಕಳು ನಾವೇನು […]Read More