ಸರಕಾರಿ ಪ್ರೌಢಶಾಲೆ ಹಳೆಪೇಟೆ ಉಜಿರೆ ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿದಿದ್ದು ಸ್ಥಳಕ್ಕೆ ಶಾಸಕರಾದ ಶ್ರೀ ಹರೀಶ್ ಪೂಜರವರು ಭೇಟಿ ನೀಡಿ ತಕ್ಷಣವೇ ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಷಾ ಕಾರಂತ್, ಉಪಾಧ್ಯಕ್ಷರಾದ ರವಿ ಕುಮಾರ್ ಬರಮೇಲು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೋಚ್ಚ ಜಿಲ್ಲಾ ಪಂಚಾಯತ್ ಇಂಜಿನಿಯರ್ ಹರ್ಷಿತ್ , ಶಾಲಾ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು
ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಖಂಡಿಸಿ ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ
ಬೆಳ್ತಂಗಡಿ: ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ, ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂನ್ 18 ರಂದು ಸಂತೆಕಟ್ಟೆ ಅಯ್ಯಪ್ಪ ಗುಡಿಯಿಂದ ತಾಲೂಕು ಆಡಳಿತದ ಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯುವುದಾಗಿ ತಿಳಿಸಲಾಗಿದೆRead More
ಬೆಳಾಲು: ಮಾಯ ಪುಚ್ಚೆಹಿತ್ತಿಲು ನಿವಾಸಿ, ವೃತ್ತಿಪರ ಆಟೋ ಚಾಲಕ ವಿಶ್ವನಾಥ್ ಗೌಡ ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಿನಗೂಲಿ ಕಾರ್ಮಿಕನಾಗಿ ದುಡಿಯುತ್ತಾ ಕುಟುಂಬಕ್ಕೆ ಆಸರೆಯಾಗಿದ್ದ ಗೆಳೆಯನ ಚಿಕಿತ್ಸಾ ವೆಚ್ಚವು ಬರೋಬ್ಬರಿ 5 ಲಕ್ಷ ರೂಪಾಯಿಯಷ್ಟಾಗಿದೆ. ಈ ದುಬಾರಿ ವೆಚ್ಚವು ಕುಟುಂಬಕ್ಕೆ ಭರಿಸಲು ತುಂಬಾ ಕಷ್ಟಕರವಾದ ಈ ಸಂದರ್ಭದಲ್ಲಿ ದಾನಿಗಳ, ಸಂಘ ಸಂಸ್ಥೆಗಳ ನಮ್ಮೆಲ್ಲರ ಸಹಾಯ ಅಗತ್ಯವಿದೆRead More
ಹುಣ್ಸೆಕಟ್ಟೆ: ಬೆಳ್ತಂಗಡಿ ಪೇಟೆಯಿಂದ ಮೆಸ್ಕಂ- ಹುಣ್ಸೆಕಟ್ಟೆಗೆ ಸಾಗುವ ರಸ್ತೆಗಳಲ್ಲಿ ಅಲ್ಲಲ್ಲಿ ಗುಂಡಿಗಳು ಬಿದ್ದು ಮಳೆ ನೀರು ನಿಂತು, ದ್ವಿಚಕ್ರ ವಾಹನಗಳು ಗುಂಡಿಯ ಅರಿವೇ ಇಲ್ಲದೆ ರಸ್ತೆಯೆಂದು ಸಾಗಿ ಅವಾಂತರಕ್ಕೆ ಸಿಲುಕಿದ ಘಟನೆಗಳು ನಡೆಯುತ್ತಲೇ ಇದೆ. ಆ ಗುಂಡಿಗಳಿಗೆ ತಾತ್ಕಾಲಿಕವಾಗಿ ಮುಕ್ತಿಯನ್ನು ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಲು ಮುಂದಾಗಿದ್ದು ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ(ರಿ) ಹುಣ್ಸೆಕಟ್ಟೆಯ ಯುವಕರು. ನಮ್ಮ ರಸ್ತೆ ನಮ್ಮ ಹೆಮ್ಮೆ ಎಂಬ ಘೋಷಣೆಯ ಸೇವೆಯಡಿ ಸುಮಾರು 25 ಕ್ಕೂ ಹೆಚ್ಚಿನ ಯುವಕರೆಲ್ಲ […]Read More
ಬಂಟ್ವಾಳ: ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಇದೀಗ ಮಳೆಯಿಂದ ರಸ್ತೆಯೆಲ್ಲಾ ಕೆಸರು ಮಯವಾಗಿ ಸಂಚಾರ ಅಸ್ತವ್ಯಸ್ತಗೊಂಡ ಹಿನ್ನೆಲೆಯಲ್ಲಿ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ರಸ್ತೆಯ ಅವಸ್ಥೆಯನ್ನು ಕಂಡ ಜಿಲ್ಲಾಧಿಕಾರಿ ಅವರು ರಸ್ತೆ ನಿರ್ಮಾಣದ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡ ಗುತ್ತಿಗೆದಾರರು ಮತ್ತು ಇಲಾಖೆಯ ಅಭಿಯಂತರರನ್ನು ತರಾಟೆಗೆ ತೆಗೆದುಕೊಂಡರು. ಸ್ಥಳೀಯ ವರ್ತಕರನ್ನು ಕರೆಸಿ ರಸ್ತೆ ಕಾಮಗಾರಿಯಿಂದ ಅವರಿಗೆ ಉಂಟಾದ ಸಮಸ್ಯೆಗಳ ಬಗ್ಗೆ […]Read More
ದೆಹಲಿಯಿಂದ ಹಿಂದಿರುಗಿದ ತಕ್ಷಣವೇ ಹಲ್ಲೆಗೊಳಗಾದ ಕಾರ್ಯಕರ್ತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ ಸಂಸದರು
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಪದಗ್ರಹಣದ ಅಂಗವಾಗಿ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ನಡೆದ ಸಂಭ್ರಮಾಚರಣೆಯನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಬಿಜೆಪಿ ಕಾರ್ಯಕರ್ತರಾದ ಹರೀಶ್ ಅಂಚನ್ ಹಾಗೂ ವಿನೋದ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹರೀಶ್ ಮತ್ತು ವಿನೋದ್ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದಾರೆ ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ. ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಸರಣಿ ಹಲ್ಲೆಗಳು ನಡೆಯುತ್ತಿದ್ದು ಇದರ ಕುರಿತು ಸಮಗ್ರ […]Read More
ಬೆಳ್ತಂಗಡಿ: ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂನ್ 2 ರಂದು ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಖಂಡನೀಯ ಮರಾಠಿ ನಾಯ್ಕ ಸಮುದಾಯದ ಮೇಲೆ ಈ ರೀತಿಯ ಘಟನೆಗಳು ಮುಂದುವರೆದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಶೇಖರ್ ಲಾಯಿಲ ಅವರು ಹೆಳಿದರು. ಅವರು ಶ್ರೀ ಗುರುನಾರಾಯಣ ಸಭಾಭವನದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಾಚಾರು ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಹಲ್ಲೆ ನಡೆಸಿದ ಕರುಣಾಕರ ಗೌಡ ಭಾಗಿಯಾಗಿದ್ದ, […]Read More
ಕಳೆಂಜ: ಕಳೆಂಜ ಗ್ರಾಮದ ನಿವಾಸಿ , ತಾಲೂಕು ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್ ಕೆ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ನಡೆಸಿದ್ದು ಇದೀಗ ಕಾಂಗ್ರೆಸ್ ಮುಖಂಡ ಕುಶಾಲಪ್ಪ ನನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲಿಸರು ಯಶಸ್ವಿಯಾಗಿದ್ದಾರೆ. ಬಿಜೆಪಿ ಎಸ್ ಟಿ ಮೋರ್ಚಾ ಅಧ್ಯಕ್ಷನಾ ಮೇಲೆ ತಲವಾರು ದಾಳಿ ನಡೆಸಿ ಮಲ್ಲೇಶ್ವರಂ ಗೆ ಪರಾರಿಯಾಗಲು ಯತ್ನಿಸಿದ ಆರೋಪಿ ಕುಶಾಲಪ್ಪ ಕಜೆನನ್ನು ಘಟನೆ ನಡೆದ 24 ಗಂಟೆಯೊಳಗಡೆ ಬಂಧಿಸುವಲ್ಲಿ ಯಶಸ್ವಿಯಾದ ಧರ್ಮಸ್ಥಳ ಪೊಲೀಸರು. ದಕ್ಷಿಣ ಕನ್ನಡ […]Read More
ಕಳೆಂಜ: ಕಳೆಂಜ ಗ್ರಾಮದ ನಿವಾಸಿ , ತಾಲೂಕು ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್ ಕೆ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ನಡೆಸಿದ ಘಟನೆ ನೆನ್ನೆ ರಾತ್ರಿ ನಡೆದಿದ್ದುಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಯೋಗ ಕ್ಷೇಮ ವಿಚಾರಿಸಲು ಇಂದು ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದ್ದು, ಘಟನೆಯ ಬಗ್ಗೆ ರಾಜೇಶ್ ಅವರೊಂದಿಗೆ ಮಾಹಿತಿ ಕಲೆಹಾಕಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು ಇದರ ಬಗ್ಗೆ ಹೋರಾಟ ನಡೆಸಬೇಕು ಎಂದು […]Read More