ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಕಂದಕಕ್ಕೆ ಉರುಳಿಗಾಯಗೊಂಡಿದ್ದ ಗಾಯಾಳುಗಳ ಪೈಕಿ ಸರೋಜಿನಿ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ.ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಶೃಂಗೇರಿಯ ಕೊಪ್ಪ ಎಂಬಲ್ಲಿ ಮರಣದ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ವೇಳೆ ಎ.10 ರಂದು ರಾತ್ರಿ ಈ ಅವಘಡ ನಡೆದಿತ್ತು. ಕಾರಿನಲ್ಲಿ ಪ್ರಯಣಿಸುತ್ತಿದ್ದ ಪುಷ್ಪಾವತಿ ಆರ್.ಶೆಟ್ಟಿ, ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್ಧ್, ಸಾಕ್ಷಿ, ಸಂಬಂಧಿಕ […]
ಬೆಳ್ತಂಗಡಿ: ಕಕ್ಕಿಂಜೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಂಗಡಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಎ.7 ರಂದು ಮುಂಜಾನೆ 3 ಗಂಟೆ ವೇಳೆಗೆ ಲಾಯಿಲ ಟಿಬಿ ಕ್ರಾಸ್ ಬಳಿ ಸಂಭವಿಸಿದೆ. ರಾತ್ರಿ ಬಂದ ಸ್ವಲ್ಪ ಮಳೆಯಿಂದಾಗಿ ಈ ಘಟನೆ ಸಂಭವಿಸಿದೆ. ವಾಹನದಲ್ಲಿ ಮೂವರಿದ್ದು ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೂಡ್ಸ್ ವಾಹನ ಸವಾರ ಗಿರೀಶ್ ಎಂದು ಗುರುತಿಸಲಾಗಿದೆRead More
ಧರ್ಮಸ್ಥಳ ಕಡೆ ಬರುತ್ತಿದ್ದ ಸ್ಕೂಟರ್ ಹಾಗೂ ಧರ್ಮಸ್ಥಳ ದಿಂದ ಮುಂಡ್ರುಪ್ಪಾಡಿ ಕಡೆ ಸಾಗುತ್ತಿದ್ದ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ ಘಟನೆ ಎ.5 ರಂದು ವರದಿಯಾಗಿದೆ. ಅಪಘಾತದಲ್ಲಿ ಸ್ಕೂಟರ್ ಸವಾರ ಕೂಟದ ಕಲ್ಲು ನಿವಾಸಿ ಸುಧಾಕರ್ ಗುಡಿಗಾರ್ ರವರ ಕಾಲಿಗೆ ಪೆಟ್ಟಾಗಿದ್ದು, ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.Read More
ಶಿಬಾಜೆ: ಬೆಳ್ತಂಗಡಿ ತಾಲೂಕಿನ ಶಿಬಾಜೆ ಪರಿಸರಸಲ್ಲಿ ಸುಮಾರು 2 ವರ್ಷಗಳಿಂದ ಹಸಿ ಮೀನು ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾ. 31 ರಂದು ರಾತ್ರಿ ವೇಳೆ ನಡೆದಿದೆ. ಇವರು ವಿಕಲಚೇತನರಾಗಿದ್ದು ಸರಕಾರದಿಂದ ದೊರೆತ ಸ್ಕೂಟಿಯಲ್ಲಿ ನಿಷ್ಠೆ ಯಿಂದ ಹಸಿ ಮೀನು ವ್ಯಾಪಾರ ಮಾಡುತ್ತಿದ್ದರು. ಆದರೆ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದುಬರಬೇಕಾಗಿದೆ. ಮೃತರು ಪತ್ನಿ ಮಂಜುಳಾ, ಪುತ್ರರಾದ ಅಭಿಷೇಕ್, ನಿರಂಜನ್ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆRead More
ಧರ್ಮಸ್ಥಳ – ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಓರ್ವ ಸವಾರನಿಗೆ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಮುಂಡ್ರುಪ್ಪಾಡಿ ರಸ್ತೆ ಸಮೀಪ ಮಾ.29 ರಂದು ಸಂಜೆ ವೇಳೆ ನಡೆದಿದೆ. ಬೈಕ್ ಸವಾರ ಗುರುವಾಯನಕೆರೆ ನಿವಾಸಿ ಎಂದು ತಿಳಿದುಬಂದಿದೆ. ಧರ್ಮಸ್ಥಳದಿಂದ ಮುಂಡ್ರುಪ್ಪಾಡಿ ಕಡೆ ಸಾಗುತ್ತಿದ್ದ ಲಾರಿ ಹಾಗೂ ಮುಂಡ್ರುಪ್ಪಾಡಿ ಕಡೆಯಿಂದ ಧರ್ಮಸ್ಥಳದತ್ತ ಸಾಗುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಹೆಚ್ಚಿನ […]Read More