ಪುತ್ತೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಅವರು ವಿವಾದಾದ್ಮಕ ಹೇಳಿಕೆ ನೀಡಿದ್ದಾರೆಂದು ಅವರ ವಿರುದ್ಧ ಇಂದು ಪುತ್ತೂರು ಕಾಂಗ್ರೆಸ್ ಮುಖಂಡರು ಪುತ್ತೂರು ನಗರ ಪೊಲೀಸ್ ಠಾಣೆಗೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಈ ಸಂದರ್ಭದಲ್ಲಿ ಪುತ್ತೂರು ನಗರಸಭಾ ಸದಸ್ಯ ಮಹಮ್ಮದ್ ರಿಯಾಝ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರೋಶನ್ ರೈ ಬನ್ನೂರು, ನಗರ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೋನು ಉಪಸ್ಥಿತರಿದ್ದರು.
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮೇ ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನ ಕಾರ್ಯಕ್ರಮದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆಂದು ಆರೋಪಿಸಿ ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಇಂದು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ನೀಡಿದರು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀಮತಿ ನಮಿತ ಕೆ […]Read More
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹೆಸರಿನಲ್ಲಿ ನಕಲಿ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು, ಈ ಬಗ್ಗೆ ಸಂದೇಶ ಸೃಷ್ಟಿ ಮಾಡಿದ ಮತ್ತು ಅದನ್ನು ಜಾಲತಾಣಗಳಲ್ಲಿ ಶೇರ್ ಮಾಡಿದ ವ್ಯಕ್ತಿಗಳ ವಿರುದ್ಧ ಇಂದು ಬೆಳ್ತಂಗಡಿ ನಗರ ಠಾಣೆಯಲ್ಲಿ ಶಾಸಕರ ಪರವಾಗಿ ದೂರು ದಾಖಲಿಸಲಾಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಪದಾಧಿಕಾರಿಗಳು, ತಾಲೂಕು ಯುವಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ದೂರು ಪಡೆದುಕೊಂಡ ಪೊಲೀಸರು ಸೂಕ್ತ ಕಾನೂನುಕ್ರಮ ಕೈಗೊಳ್ಳುವ ಭರವಸೆ ನೀಡಿದರು.Read More
ಪುತ್ತೂರು: ಬ್ಯಾನರ್ ಪ್ರಕರಣ: ಪೊಲೀಸರಿಂದ ಹಲ್ಲೆ:ಕಾರ್ಯಕರ್ತರನ್ನು ಭೇಟಿಯಾದ ವಿ.ಹಿಂ.ಪ .ಬಜರಂಗದಳ ಬೆಳ್ತಂಗಡಿ ಪ್ರಖಂಡ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಮತ್ತು ಶ್ರದ್ಧಾಂಜಲಿ ಕೋರಿ ಹಾಕಿದ್ದ ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಒಂಬತ್ತು ಮಂದಿಗೆ ಪೋಲಿಸರು ಥರ್ಡ್ ಗ್ರೇಡ್ ಟ್ರೀಟ್ಮೆಂಟ್ ನೀಡಿರುವ ಆಘಾತಕಾರಿ ವಿಚಾರ ಬಯಲಾಗಿದೆ.ಗಂಭೀರವಾಗಿ ಗಾಯಗೊಂಡಿರುವ ಕಾರ್ಯಕರ್ತರು ಆಸ್ಪತ್ರೆ ಸೇರಿದ್ದು, ಈ ಹಿನ್ನೆಲೆ ವಿಷಯ ತಿಳಿದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂಧರ್ಭದಲ್ಲಿ […]Read More
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಮತ್ತು ಶ್ರದ್ಧಾಂಜಲಿ ಕೋರಿ ಹಾಕಿದ್ದ ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಒಂಬತ್ತು ಮಂದಿಗೆ ಪೋಲಿಸರು ಥರ್ಡ್ ಗ್ರೇಡ್ ಟ್ರೀಟ್ಮೆಂಟ್ ನೀಡಿರುವ ಆಘಾತಕಾರಿ ವಿಚಾರ ಬಯಲಾಗಿದೆ. ಪೋಲಿಸರ ಹಲ್ಲೆಗೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳು ಭಾರೀ ವೈರಲ್ ಆಗಿದ್ದು, ಬಿಜೆಪಿಯ ಉನ್ನತ ನಾಯಕರುಗಳ ಒತ್ತಡ ಹಾಗೂ ಪುತ್ತೂರಿನ ಕೆಲ ಬಿಜೆಪಿಗರ ಒಳಸಂಚಿನ ಕರಾಳತೆಯನ್ನು ಈ […]Read More
ಪುತ್ತೂರು: ಬಿಜೆಪಿ ನಾಯಕರ ಬ್ಯಾನರ್ ಹಾಕಿದವರಿಗೆ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿದ್ದನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಳಿನ್ ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ. ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ. ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.Read More
ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಕೆಲ್ಲಗುತ್ತು ಎಂಬಲ್ಲಿ ವಿಧಾನಸಭಾ ಚುನಾವಣೆಯ ಮುನ್ನ ತಡ ರಾತ್ರಿ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ಘಟನೆಗೆ ಸಂಬಧಿಸಿ ನ್ಯಾಯಾಲಯದ ಅನುಮತಿಯಂತೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಚುನಾವಣಾ ಕಾರ್ಯಕ್ಕೆ ನೇಮಿಸಲಾಗಿದ್ದ ಫ್ಲೈಯಿಂಗ್ ಸ್ಕ್ಯಾಡ್ ಅಧಿಕಾರಿ ಚಂದ್ರಕುಮಾರ್ ನೀಡಿರುವ ದೂರಿನಂತೆ ಬೆಳ್ತಂಗಡಿ ಪ.ಪಂ ಉಪಾಧ್ಯಕ್ಷ ಜಯಾನಂದ ಗೌಡ ಸಹಿತ ಮೂವರ ವಿರುದ್ಧ ಕೇಸು ದಾಖಲಿಸಿಕೊಳ್ಳಲಾಗಿದೆ.Read More
ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ತಂಡ ಹಲ್ಲೆ ನಡೆಸಿರುವುದಾಗಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ಆರೋಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಕಾಂಗ್ರೆಸ್ ಕಾರ್ಯಕರ್ತ ಆರೋಪಿಸಿದ್ದಾರೆ. ಹಲ್ಲೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇವರನ್ನು ಮಾಜಿ ಶಾಸಕರಾದ ಕೆ ವಸಂತ ಬಂಗೇರ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಬೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೆ […]Read More
ಚಾರ್ಮಾಡಿ: ರಾತ್ರಿ 12 ಗಂಟೆಯಾದರೂ ಮತಯಂತ್ರವನ್ನು ರವಾನಿಸದ ಚುನಾವಣಾಧಿಕಾರಿಗಳು: ಕಾರ್ಯಕರ್ತರಿಂದ ಆಕ್ರೋಶ: ಪೊಲೀಸರಿಂದ
ಚಾರ್ಮಾಡಿ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯಲ್ಲಿ ರಾತ್ರಿ 12 ಗಂಟೆಯಾದರೂ ಮತಯಂತ್ರ ಕೊಂಡುಹೋಗದೇ ಇದ್ದ ಹಿನ್ನೆಲೆ, ಚಾರ್ಮಾಡಿ ಬೂತ್ ಸಂಖ್ಯೆ 21,22,23,24 ಮತಯಂತ್ರ ಕೆಟ್ಟುಹೋಗಿದ್ದ ಹಿನ್ನೆಲೆ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಗಲಾಟೆಯನ್ನು ಮಾಡಿದ ಘಟನೆ ಮೇ.10 ರಂದು ನಡೆದಿದೆ. ಕಾರ್ಯಕರ್ತರು ಚುನಾವಣಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಕರೆಂಟ್ ಇಲ್ಲದ ಕಾರಣ ತೆಗೆದುಕೊಂಡು ಹೋಗಲು ಆಗಲಿಲ್ಲ ಎಂದು ಚುನಾವಣಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪರಿಶೀಲನೆ ಬಳಿಕ ರಾತ್ರಿ 12ಗಂಟೆಗೆ ಮತಯಂತ್ರ ರವಾನೆ ಮಾಡಲಾಗಿದ್ದು, ಕಾರ್ಯಕರ್ತರನ್ನು ನಿಯಂತ್ರಣಕ್ಕೆ ತರಲಾಗದೇ ಪೊಲೀಸರು ಲಾಠಿ […]Read More