ಬೆಳ್ತಂಗಡಿ: ಕ್ಯಾನ್ಸರ್ ಎಂದರೆ ಸಾವಲ್ಲ, ಉತ್ತಮ ಚಿಕಿತ್ಸೆ, ಜೀವನ ಶೈಲಿಯ ಬದಲಾವಣೆ, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡಿದಾಗ ಕ್ಯಾನ್ಸರ್ ರೋಗವನ್ನು ನಿವಾರಿಸಬಹುದು ಎಂದು ಬಿಳಿನೆಲೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶಾರದಾ ದಿನೇಶ್ ಅಭಿಪ್ರಾಯಪಟ್ಟರು. ಅವರು ಫೆ 15 ರಂದು ಡಿ.ಕೆ.ಆರ್. ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ, ಕಾರಿತಾಸ್ ಇಂಡಿಯಾ ನವದೆಹಲಿ-ಸ್ಪರ್ಶ ಕಾರ್ಯಕ್ರಮ, ಗ್ರಾಮ ಪಂಚಾಯತ್ ಬಿಳಿನೆಲೆ ಹಾಗೂ ಉಪ ಆರೋಗ್ಯ ಕೇಂದ್ರ ಬಿಳಿನೆಲೆ ಇವುಗಳ ಆಶ್ರಯದಲ್ಲಿ ಕಡಬ ತಾಲೂಕಿನ ನೆಟ್ಟಣ ಪೇಟೆಯಲ್ಲಿ ನಡೆದ ಕ್ಯಾನ್ಸರ್ ರೋಗದ […]
ಪುತ್ತೂರು: ಬರೆಪ್ಪಾಡಿ ಪಂಚಲಿಂಗೇಶ್ವರ ಮತ್ತು ಕೇಪುಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಆರಿಕೋಡಿ ಕ್ಷೇತ್ರದ
ಪುತ್ತೂರು: ಪುತ್ತೂರು ತಾಲೂಕಿನ ಬರೆಪ್ಪಾಡಿ ಪಂಚಲಿಂಗೇಶ್ವರ ಮತ್ತು ಕೇಪುಲೇಶ್ವರ ದೇವಸ್ಥಾನದ ಅನುಜ್ಞ ಕಲಶ ಮತ್ತು ಬಾಲಾಲಯ ಪ್ರತಿಷ್ಠೆ ಸಮಾರಂಭಕ್ಕೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಅವರು ಭೇಟಿ ನೀಡಿ ಶುಭಹಾರೈಸಿದರು. ಈ ವೇಳೆ ಆಡಳಿತ ಮಂಡಳಿ , ಊರವರು ಭಾಗಿಯಾಗಿದ್ದರುRead More
ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ
ಕಲ್ಮಂಜ: ಬೆಳ್ತಂಗಡಿ ತಾಲೂಕಿನ ಸಂಗಮ ಕ್ಷೇತ್ರವಾದ ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಪುನರ್ ಪ್ರತಿಷ್ಠ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಹಾಗೂ ಮೊಕ್ತೇಸರರು, ಆಡಳಿತ ಮಂಡಳಿ ಅಧ್ಯಕ್ಷರು ಭೇಟಿ ನೀಡಿದರು. ಈ ವೇಳೆ ಆಡಳಿತ ಮಂಡಳಿ ಹಾಗೂ ಊರವರು ಇವರನ್ನು ಸ್ವಾಗತಿಸಿದರು.Read More
ಜ.23 -27 ರವರೆಗೆ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವರ
ಬಂಗಾಡಿ: ಬೆಳ್ತಂಗಡಿ ತಾಲೂಕಿನ ಬಂಗಾಡಿಯಲ್ಲಿ ಬ್ರಹ್ಮಶ್ರೀ ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ ಹಾಗೂ ಶ್ರೀ ವರದರಾಜ ವಾಸುಕೀವನ ಬಂಟ್ವಾಳ ಇವರ ಉಪಸ್ಥಿತಿ ಯಲ್ಲಿ ಸ್ಥಾಪಿತಗೊಂಡಿರುವ ಸಹಸ್ರ ನಾಗಬನದ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವರ ಪ್ರತಿಷ್ಠಾಬ್ರಹ್ಮಕಲಶಾಭಿಷೇಕ , ಮಹಾಗಣಪತಿ ದೇವರ ಅಷ್ಟಬಂಧ ಪವಿತ್ರ ಬ್ರಹ್ಮಕಲಶೋತ್ಸವ, ಹಾಗೂ ನಾಗಮಂಡಲೋತ್ಸವ ಕಾರ್ಯಕ್ರಮಗಳು ಜನವರಿ 23 ರಿಂದ ಜನವರಿ 27 ರವರೆಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರು ಡಾ|| ಪ್ರದೀಪ್ ಎ ತಿಳಿಸಿದರು. ಅವರು ಜ.21 ರಂದು ಶ್ರೀ […]Read More
ಇಂದಬೆಟ್ಟು: ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವರ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ , ಮಹಾಗಣಪತಿ ದೇವರ ಅಷ್ಟಬಂಧ
ಧರ್ಮಸ್ಥಳ: ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಇದರ ಮುಂದಾತ್ವದಲ್ಲಿ ಜ.23 ರಿಂದ ಜ.27 ರವರೆಗೆ ಇಂದಬೆಟ್ಟುವಿನಲ್ಲಿ ನಡೆಯಲಿರುವ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವರ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ , ಮಹಾಗಣಪತಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಇದರ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಬ್ರಹ್ಮಕಲಶೋತ್ಸವದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.Read More
ತಲಾಪಡಿ ಶ್ರೀ ದುರ್ಗ ಪರಮೇಶ್ವರೀ ದೇವಸ್ಥಾನದ ಸಭಾ ಗೃಹದಲ್ಲಿ ಹಿಂದೂ ರಾಷ್ಟ್ರ ಜಾಗೃತಿ
ಮಂಗಳೂರು : ತಲಾಪಡಿ ಶ್ರೀ ದುರ್ಗ ಪರಮೇಶ್ವರೀ ದೇವಸ್ಥಾನದ ಸಭಾ ಗೃಹದಲ್ಲಿ ಜ.14 ರಂದು ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ, ಹಿಂದೂ ರಾಷ್ಟ್ರ ಜಾಗೃತಿ ಸಭೆಯು ನಡೆಯಿತು. ಈ ಸಭೆಗೆ ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲೆಯ ವಾಣಿಜ್ಯ ಹಾಗೂ ಪ್ರಕೋಸ್ಟ ದ ಸಹ ಸಂಚಾಲಕರಾದ ದಿನೇಶ್ ಜೈನ್, ದೇವಿಪುರ ದೇವಸ್ಥಾನದ ಆಡಳಿತ ವ್ಯವಸ್ಥಾಪಕರಾದ ನಾರಾಯಣ ಕಜೆ, ದೇವಿಪುರ ದೇವಸ್ಥಾನದ ಪ್ರಧಾನ ಅರ್ಚಕರಾದ ಗಣೇಶ್ ಭಟ್, ಸನಾತನ ಸಂಸ್ಥೆಯ ಆನಂದ ಗೌಡ ಹಾಗೂ ಹಿಂದೂ ಜನಜಾಗೃತಿ ಸಮಿತಿಯ […]Read More
ಫೆ.4-9 ರತನಕ ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು
ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾ ಅಷ್ಟ ಬಂಧ ಬ್ರಹ್ಮಕಲಶೋತ್ಸವವು ಫೆಬ್ರವರಿಯಲ್ಲಿ ನಡೆಯಲಿದ್ದು ಇದರ ಮೊದಲ ಅಂಗವಾಗಿ ಚಪ್ಪರ ಮುಹೂರ್ತವ ಹಾಗೂ ಕಾರ್ಯಾಲಯದ ಉದ್ಘಾಟನಾ ಸಮಾರಂಭ ನಡೆಯಿತು. ಬೆಂಗಳೂರು ಸಾನ್ವಿ ಗ್ರೂಪ್ ಆಫ್ ಕಂಪೆನಿ ಮತ್ತು ಅನ್ನಪೂರ್ಣ ಹಾಸ್ಪಿಟಲಿಟಿ ಸರ್ವಿಸಸ್ ಸಿ.ಇ.ಓ ಹರೀಶ್ ಶೆಟ್ಟಿ ಕಂರ್ಬಿತ್ತಿಲ್ ಇವರು ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಿ ಶುಭಕೋರಿದರು. ಕಾರ್ಯಾಲಯದ ಉದ್ಘಾಟನೆಯನ್ನು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ, ಸ್ವಾಗತ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಅಜಿಲ ನೇರವೇರಿಸಿ […]Read More
ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ
ಕಲ್ಮಂಜ: ಕಲ್ಮಂಜ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಜನವರಿ 31ರಿಂದ ಫೆಬ್ರವರಿ ೦6ರ ವರೆಗೆ ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದ್ದು, ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಜ.8ರಂದು ಬಿಡುಗಡೆಗೊಳಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೃಷ್ಣಪ್ಪ ಗುಡಿಗಾರ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ […]Read More
ಅಳದಂಗಡಿ: ಪುನರ್ನಿರ್ಮಾಣಗೊಳ್ಳುತ್ತಿರುವ ಅಳದಂಗಡಿ ಫಲ್ಗುಣಿ ತೀರದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಗರ್ಭಗುಡಿಯ ಮೇಲೆ ಪ್ರತಿಷ್ಠಾಪಿಸಲು ಮುಗುಳಿಯನ್ನು ಶ್ರೀಕ್ಷೇತ್ರದ ವತಿಯಿಂದ ಹಸ್ತಾಂತರಿಸಿದರು. ಈಗಾಗಲೇ ಅವರು ರೂ.10 ಲಕ್ಷದ ಧನಸಹಾಯವನ್ನು ನೀಡಿದ್ದಾರಲ್ಲದೆ, ಗಣಪತಿಯ ನೂತನ ವಿಗ್ರಹವನ್ನೂ ಮಾಡಿಸಿಕೊಟ್ಟಿರುತ್ತಾರೆ. ವಿಗ್ರಹವನ್ನು ಜನವರಿ 29 ರಂದು ಕಾರ್ಕಳದಿಂದ ಮೆರವಣಿಗೆಯ ಮೂಲಕ ತರುವುದೆಂದು ತೀರ್ಮಾನಿಸಲಾಗಿದೆ. ಹೆಗ್ಗಡೆಯವರು ಫೆಬ್ರುವರಿ 4 ರಂದು ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಆಶೀರ್ವದಿಸಲಿದ್ದಾರೆ. ಈ ಸಂದರ್ಭದಲ್ಲಿ ಹಿರಿಯರಾದ ವಸಂತ ಸಾಲಿಯಾನ್ ಕಾಪಿನಡ್ಕ, ಜೀರ್ಣೋದ್ಧಾರ ಸಮಿತಿ […]Read More
ಧರ್ಮಸ್ಥಳ: ಸಿನಿಮಾವೊಂದರಲ್ಲಿ ಅತಿಥಿ ಪಾತ್ರವಾಗಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು ನಟಿಸುತ್ತಿದ್ದಾರೆ. ವೀರಕಂಬಳ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆಯವರು ನಟಿಸಲಿದ್ದು ಈ ಚಿತ್ರವನ್ನು ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸಿದ್ದಾರೆ. ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿಬರುತ್ತಿರುವ ಈ ಸಿನಿಮಾ ಕನ್ನಡ , ತುಳು, ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬರಲಿದೆRead More