ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರಿಯ ಸಂಸದರಾದ ಬ್ರಿಜೇಶ್ ಚೌಟ ಅವರೊಂದಿಗೆ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ “ಪ್ರಸಾದಂ”ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಾದ ಬೆಳ್ತಂಗಡಿ ತಾಲ್ಲೂಕಿನ ಶ್ರೀ ನಂದಿಕೆಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿ, ಬೆಳ್ತಂಗಡಿ ತಾಲ್ಲೂಕಿನ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಬೆಳ್ತಂಗಡಿ ತಾಲ್ಲೂಕಿನ ಶ್ರೀ ಶಿಶಿಲೇಶ್ವರ ದೇವಸ್ಥಾನ ಶಿಶಿಲ, ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿ ಹಾಗೂ ಶ್ರೀ ತೋಡಿಕ್ಕಾನ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೊಧ್ಯಮ ಸಚಿವರಾದ […]
ಸ್ಪೈಡರ್ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಜ್ಯೋತಿರಾಜ್ ಬೆಳ್ತಂಗಡಿ ಶ್ರಮಿಕ ಕಚೇರಿಗೆ ಭೇಟಿ:
ಕರ್ನಾಟಕದ ಸ್ಪೈಡರ್ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಇಂದು ಶಾಸಕರ ಕಚೇರಿ ಶ್ರಮಿಕಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜರವರು ಸನ್ಮಾನಿಸಿ ಗೌರವಿಸಿದರು.Read More
ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಸೌಕರ್ಯ ಸುಧಾರಣೆ ಅದರಲ್ಲೂ ಪ್ರಮುಖವಾಗಿ ಶಿರಾಡಿ ಘಾಟ್ ಬೈಪಾಸ್ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಕೋರಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ. ಈ ಮಹತ್ವದ ಹೆದ್ದಾರಿ ಯೋಜನೆಯನ್ನು ಮುಂದುವರಿಸಲು ಅರಣ್ಯ ಇಲಾಖೆ ಸಹಿತ ಅಗತ್ಯ ಅನುಮತಿಗಳಿಗೆ ಇರುವ ಆಡಳಿತಾತ್ಮಕ ಅಡೆ-ತಡೆಗಳನ್ನು ನಿವಾರಿಸಲು ಹಾಗೂ ಕೆಲ ಅಧಿಕಾರಶಾಹಿ ಅಡೆ-ತಡೆ ನಿವಾರಣೆಗೆ ರಾಜ್ಯ ಸರ್ಕಾರಕ್ಕೆ ತುರ್ತಾಗಿ ಕ್ರಮ ಕೈಗೊಳ್ಳುವಂತೆ […]Read More
ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜರವರ ಮುತುವರ್ಜಿಯಲ್ಲಿ ಗರ್ಡಾಡಿ- ಬಳೆಂಜ ರಸ್ತೆಗೆ ರೂ. 2 ಕೋಟಿ ಅನುದಾನ ಬಿಡುಗಡೆಗೊಂಡಿದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುದಾನ ಬಿಡುಗಡೆಗೊಂಡು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿತ್ತು ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಅವಧಿಯಲ್ಲಿ ಆರ್ಥಿಕ ಅನುಮೋದನೆ ನೀಡದಂತೆ ಎಲ್ಲಾ ಇಲಾಖೆಗೆ ಸೂಚಿಸಿದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯವೂ ಸ್ಥಗಿತಗೊಂಡಿತ್ತು. ಆದರೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಇದೀಗ ಆರ್ಥಿಕ ಅನುಮೋದನೆಯೂ ದೊರಕಿದ್ದು ಶೀಘ್ರದಲ್ಲಿಯೇ ರಸ್ತೆ ಕಾಮಗಾರಿ ಪ್ರಾರಂಭಗೊಳ್ಳಲಿದೆ.Read More
ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ : ಮಾರ್ಚ್ 7: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇಂದು ಮಂಡಿಸಿದ 2025- 26ರ ಸಾಲಿನ ಮುಂಗಡ ಪತ್ರ ನಕ್ಸಲರಿಗೆ ಶರಣಾಗಿ ಶ್ರೀಸಾಮಾನ್ಯರ ಪಾಲಿಗೆ ಸಂಪೂರ್ಣ ನಿರಾಶದಾಯಕವಾಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬೇಸರ ವ್ಯಕ್ತಪಡಿಸಿದ್ದಾರೆ.ಕಾಂಗ್ರೆಸ್ ಸರ್ಕಾರಕ್ಕೆ ನಕ್ಸಲ್ ಚಟುವಟಿಕೆ ಬಗ್ಗೆ ಪೂರ್ಣ ಅರಿವಿದ್ದಂತೆ ಕೇವಲ ಆರು ಜನರ ನಕ್ಸಲರ ಶರಣಗಾತಿಯಿಂದ ನಕ್ಸಲ್ ನಿಗ್ರಹ ಪಡೆಯನ್ನೇ ವಿಸರ್ಜಿಸಿ 10 ಕೋಟಿ ವಿಶೇಷ ಪ್ಯಾಕೇಜ್ ನೀಡಿದ್ದನ್ನು ಗಮನಿಸಿದರೆ ನಕ್ಸಲರು ಸರ್ಕಾರಕ್ಕೆ ಶರಣಾಗಿದ್ದರೋ ಅಥವಾ ಸರ್ಕಾರವೇ ನಕ್ಸಲರಿಗೆ ಶರಣಾಯಿತೋ […]Read More
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ದರೋಜಿ ಗ್ರಾಮದಲ್ಲಿ ಆಯೋಜಿಸಿದ್ದ ಮತದಾರರ ಬೃಹತ್ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೊಂದಿಗೆ ಭಾಗವಹಿಸಿದರು.ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಸೇರಿದಂತೆ ಭ್ರಷ್ಟಾಚಾರದಲ್ಲಿ ಮುಳುಗಿ ಜನಕಲ್ಯಾಣ ಮರೆತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕಪಾಠ ಕಲಿಸುವ ಸದಾವಕಾಶ ಬಂದೊದಗಿದ್ದು ಸಂಡೂರಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಎನ್.ಡಿ.ಎ ನೇತೃತ್ವದ ಬಿಜೆಪಿ ಅಭ್ಯರ್ಥಿ ಶ್ರೀ ಬಂಗಾರು ಹನುಮಂತು ಅವರನ್ನು […]Read More
ಬೆಳ್ತಂಗಡಿ(ನ -4): ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಮುಂಬರುವ ಗ್ರಾಮ ಪಂಚಾಯತ್ ಉಪಚುನಾವಣೆ ಪೂರ್ವತಯಾರಿ ಸಭೆಯು ಕ್ಷೇತ್ರಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಭಾನುವಾರ ಪಕ್ಷದ ಕಚೇರಿಯಲ್ಲಿ ನಡೆಯಿತು.ಎಸ್ಡಿಪಿಐ ಜಿಲ್ಲಾ ಚುನಾವಣೆ ಉಸ್ತುವಾರಿಯಾದ ಬಂಟ್ವಾಳ ಪುರಸಭೆ ಉಪಾಧ್ಯಕ್ಷರಾದ ಮೂನಿಷ್ ಆಲಿ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಆಗಮಿಸಿದ್ದರು. ಉಜಿರೆ ಹಾಗೂ ಕುವೆಟ್ಟು ಗ್ರಾಮ ಪಂಚಾಯಿತಿಗೆ ನಡೆಯುವ ಉಪಚುನಾವಣೆಯಲ್ಲಿ ಕುವೆಟ್ಟು ಎಸ್ಡಿಪಿಐ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಅಂತಿಮವಾಗಿದ್ದು, […]Read More
ಭಜಕ ಸಹೋದರಿಯರ ಕುರಿತು ಅವಹೇಳನಕಾರಿ ಹೇಳಿಕೆಯನ್ನು ನೀಡಿ ಭಜನ ಸಂಘಟನೆಯನ್ನು ವಿಭಜಿಸಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ತಾಲೂಕು ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಹಾಗೂ ಬೆಳ್ತಂಗಡಿ ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಿಸುವ ಬಗ್ಗೆ ಮನವಿಯನ್ನು ಮಾಡಲಾಯಿತು. ಈ ವೇಳೆ ಹಿಂದೂ ಭಜಕರು ಜೊತೆಗಿದ್ದರುRead More
ವಕ್ಫ್ ಬೋರ್ಡ್ ನಡೆಸಿದ ದೊರನೆಯನ್ನು ಖಂಡಿಸಿ ಪ್ರವಾಸಿ ಮಂದಿರ ಬೆಳ್ತಂಗಡಿಯಲ್ಲಿ ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ ನಡೆಸಿದರು. ವಕ್ಫ್ ಬೋರ್ಡ್ ಹೆಸರಿನಲ್ಲಿ ನಡೆಸಿದ ಆಸ್ಥಿಯನ್ನು ಪಡೆದುಕೊಳ್ಳುವುದು ಸರ್ಕಾರಕ್ಕೆ ಮತ್ತು ಜನರಿಗೆ ಮಾಡಿದ ಅನ್ಯಾಯ ಈ ವಿಷಯದ ಬಗ್ಗೆ ಮುಖ್ಯಮಂತ್ರಿಗಳು ಏನು ಆಗಿಲ್ಲ ಅನ್ನುವಂತೆ ರೀತಿಯಲ್ಲಿ ಇರುವುದು ಶೋಚನೀಯ ಸ್ಥಿತಿ ಎಲ್ಲಾ ಕಡೆಯಲ್ಲಿ ಮಂಗಳೂರಿನಲ್ಲಿಯೂ ಇಂತಹದ್ದೇ ಘಟನೆ ನಡೆಯುತ್ತಿದೆ ಏರ್ಪೋರ್ಟ್ ನಲ್ಲೂ ಪಕ್ಕದಲ್ಲಿರುವ ಜಾಗವನ್ನು ವಕ್ಫ್ ಬೋರ್ಡಿಗೆ ಬದಲಾಯಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಕ್ಫ್ ಹೆಸರಿನಲ್ಲಿ ಸಾವಿರಾರು […]Read More