ಬೆಳ್ತಂಗಡಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿದ್ಯುತ್ ಶುಲ್ಕ ಹೆಚ್ಚಾಗಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಮಿನಿ ವಿಧಾನ ಸಭಾ ಮುಂಭಾಗ ಜೂನ್ 9 ರಂದು ಸಾರ್ವಜನಿಕ ಪ್ರತಿಭಟನೆ ನಡೆಯಿತು. ರಸ್ತೆಯ ಉದ್ದಕ್ಕೂ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಎಂ ಎಲ್ ಸಿ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಮೊದಲಾದವರು ಭಾಗಿಯಾಗಿದ್ದರು
ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಭೇಟಿ ನೀಡಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ
ಬೆಳಾಲು: ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿರುವ ಅರುಣ್ ಕುಮಾರ್ ಪುತ್ತಿಲ ಇವರು ಏ.26 ರಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರಆರಿಕೋಡಿಗೆ ಬಂದು ಶ್ರೀದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಧರ್ಮದರ್ಶಿಗಳ ಆಶೀರ್ವಾದವನ್ನು ಪಡೆದುಕೊಂಡರು.Read More
ಬೆಳ್ತಂಗಡಿ; 2023 ರ ಕರ್ನಾಟಕ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಜನತಾದಾಳ ಪಕ್ಷದಲ್ಲಿ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಾಲೂಕಿನ ಹಿರಿಯ ಗ್ರಾಮೀಣ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರಿಗೆ ಅವಕಾಶ ಲಭಿಸಿದೆ. ಏ.20 ರಂದು ಪಕ್ಷದ ಹಿರಿಯರ ಸಮ್ಮುಖ ಅವರಿಗೆ ಅಧಿಕೃರ ‘ಬಿ ಫಾರ್ಮ್’ ಹಸ್ತಾಂತರಿಸಲಾಯಿತು. ಕಳೆದ 23 ವರ್ಷಗಳಿಂದ ಗ್ರಾಮೀಣ ಪತ್ರಕರ್ತರಾಗಿ, ಅಭಿವೃದ್ಧಿಪರ ಮತ್ತು ಮಾನವೀಯ ಪತ್ರಿಕೋಧ್ಯಮದ ಮೂಲಕ ಅಪಾರ ಜನಮನ್ನಣೆ ಗಳಿಸಿಕೊಂಡಿದ್ದಾರೆ.ಅತ್ಯುತ್ತಮ ಸಂಘಟಕರೂ ಆಗಿರುವ ಅವರು ಬೆಳ್ತಂಗಡಿ ತಾಲೂಕು ಪತ್ರಕರ್ತರ […]Read More
ದ.ಕ, ಉಡುಪಿ ಯಲ್ಲಿಂದು ಬಿಜೆಪಿ, ಕಾಂಗ್ರೆಸ್, ಎಸ್ ಡಿ ಪಿಐ, ಇನ್ನಿತರ ಪಕ್ಷದ ಅಭ್ಯರ್ಥಿಗಳು ಇಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಮಾಜಿ ಸಚಿವ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕ್ಕೆ ಅವರು ಸಾವಿರಾರು ಕಾರ್ಯಕರ್ತರೊಂದಿಗೆ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಮಂಗಳೂರು ನಗರ ಉತ್ತರ ಕ್ಷೇತ್ರದ ಹಾಲಿ ಶಾಸಕ ಡಾ ಭರತ್ ಶೆಟ್ಟಿ ಮಂಗಳೂರು ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ ಕಾರ್ಕಳ: ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀ […]Read More
ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ಕಾರ್ಯಕರ್ತರೊಂದಿಗೆ ಆಗಮಿಸಿ ಏ.18 ರಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಬೆಳ್ತಂಗಡಿ ಸಂತೆಕಟ್ಟೆಯಿಂದ ಮಿನಿ ವಿಧಾನಸೌಧವರೆಗೆ ಕಾಲ್ನಡಿಗೆ ಜಾಥಾದಲ್ಲಿ ಹಲವಾರು ಕಾರ್ಯಕರ್ತರುಭಾಗವಹಿಸಿ, ಬಳಿಕ ಅಕ್ಬರ್ ಬೆಳ್ತಂಗಡಿಯವರು ಚುನಾವಣಾಧಿಕಾರಿಗೆ ನಾಮ ಪತ್ರ ಸಲ್ಲಿಸಲಿದ್ದಾರೆ. ಎಸ್ ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ಉಪಸ್ಥಿತರಿದ್ದರು.Read More
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮ ಪತ್ರ ಸಲ್ಲಿಸಿದರು. ಮಾಜಿ ಶಾಸಕ ಕೆ ವಸಂತ ಬಂಗೇರ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್, ವಕೀಲ ಸಂತೋಷ್ ಕುಮಾರ್ ಉಪಸ್ಥಿತರಿದ್ದರು. ಸಾವಿರಾರು ಮಂದಿಯ ಸಮ್ಮುಖದಲ್ಲಿ ರಕ್ಷಿತ್ ಶಿವರಾಂ ರವರು ಚುನಾವಣಾಧಿಕಾರಿ ಕಚೇರಿಯವರೆಗೆ ಮೆರವಣಿಗೆಯಲ್ಲಿ ಬಂದು ಬಳಿಕ ನಾಮಪತ್ರ ಸಲ್ಲಿಸಿದರು.Read More
ಬಂದಾರು: ಭಾ.ಜ.ಪಾ ಬಂದಾರು ಶಕ್ತಿ ಕೇಂದ್ರದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಬಿಜೆಪಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ,ಬೆಳ್ತಂಗಡಿ ಬಿ.ಜೆ.ಪಿ ಮಂಡಲಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ನಾವೂರು, ಜಿಲ್ಲಾ ಎಸ್. ಟಿ.ಮೋರ್ಚಾ ಅಧ್ಯಕ್ಷರು ಚೆನ್ನಕೇಶವ, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು, ಕೊರಗಪ್ಪ ಗೌಡ,ಕೃಷ್ಣಯ್ಯ ಆಚಾರ್ಯ,ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಜಯಾನಂದ ಕಲ್ಲಾಪು ,ಬಂದಾರು ಶಕ್ತಿ ಕೇಂದ್ರ ಪ್ರಮುಖ್ ಅಶೋಕ ಗೌಡ ಪಾಂಜಾಳ,ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ […]Read More
ಬೆಳ್ತಂಗಡಿ: 2023 ರ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿ ಯಾಗಿ ಅಭಿವೃದ್ಧಿ ಯ ಹರಿಕಾರ ಬೆಳ್ತಂಗಡಿ ತಾಲೂಕನ್ನು ಅಭಿವೃದ್ಧಿ ಯತ್ತ ಸಾಗಿಸುತ್ತಿರುವ ಹರೀಶ್ ಪೂಂಜ ಏ.17 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಏ.17 ರಂದು ಬೆಳಗ್ಗೆ ಪೂಜೆ ಸಲ್ಲಿಸಿ, ನಂತರ ಬೃಹತ್ ಮೆರವಣಿಗೆಯ ಮೂಲಕ ತಾಲೂಕು ಆಡಳಿತ ಸೌಧಕ್ಕೆ ತೆರಳಿ ನಾಮಪತ್ರವನ್ನು ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬೆಳ್ತಂಗಡಿ ತಾಲೂಕಿನ ಪ್ರತಿ ಗ್ರಾಮದಿಂದಲೂ ಸಾವಿರಾರೂ ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆ ಇದೆ ಎಂದು […]Read More
ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 8 ಕ್ಷೇತ್ರಗಳ ಪೈಕಿ ಎಲ್ಲಾ ಕ್ಷೇತ್ರದ ಅಭ್ಯರ್ಥಿಗಳಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗಿದೆ. ಬೆಳ್ತಂಗಡಿ ಕ್ಷೇತ್ರದಲ್ಲಿ ಹಾಲಿ ಶಾಸಕ ಹರೀಶ್ ಪೂಂಜಾ ಟಿಕೆಟ್ ಪಡೆದುಕೊಂಡಿದ್ದಾರೆ. ಬಂಟ್ವಾಳದಲ್ಲಿ ರಾಜೇಶ್ ನಾಯ್ಕ್, ಮಂಗಳೂರು ಉತ್ತರ ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ವೇದವ್ಯಾಸ ಕಾಮತ್, ಮೂಡಬಿದಿರೆ ಉಮಾನಾಥ ಕೋಟ್ಯಾನ್ , ಮಂಗಳೂರು ಕ್ಷೇತ್ರದಲ್ಲಿ ಸತೀಶ್ ಕುಂಪಳ, ಪುತ್ತೂರಿನಿಂದ ಆಶಾ ತಿಮ್ಮಪ್ಪ ಗೌಡ, ಸುಳ್ಯದಿಂದ ಭಾಗೀರಥಿ ಮುರುಳ್ಉ ಟಿಕೆಟ್ ಪಡೆದುಕೊಂಡಿದ್ದಾರೆ.Read More
ಚುನಾವಣೆ ದಿನಾಂಕ ಘೋಷಣೆಯೊಂದಿಗೆ ಚುನಾವಣಾ ಮಾದರಿ ನೀತಿ ಜಾರಿ: ಎಂಎಲ್ಎ ಬೋರ್ಡ್ ಗಳನ್ನು
ಕರ್ನಾಟಕ ವಿಧಾನಸಭೆಗೆ ಮೇ 10ರಂದು ಚುನಾವಣೆ ನಡೆಯಲಿದ್ದು, ಚುನಾವಣೆ ದಿನಾಂಕ ಘೋಷಣೆಯೊಂದಿಗೆ ಚುನಾವಣಾ ಮಾದರಿ ನೀತಿ ಸಂಹಿತೆಯೂ ಜಾರಿಗೊಂಡಿದೆ. ನೀತಿ ಸಂಹಿತೆ ಜಾರಿಯಲ್ಲಿರುವಾಗ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ನೆರವೇರಿಸುವಂತಿಲ್ಲ. ಹೀಗಾಗಿ ವಿವಿಧ ಯೋಜನೆಗಳ ಶಿಲಾನ್ಯಾಸ, ಹಕ್ಕುಪತ್ರ ವಿತರಣೆ, ಉದ್ಘಾಟನೆಯಂತಹ ಕಾರ್ಯಕ್ರಮಗಳನ್ನು ಚುನಾವಣೆ ಘೋಷಣೆಯಾದ ಬೆನ್ನಲ್ಲೇ ನಿಲ್ಲಿಸಲಾಗಿದೆ. ಜನಪ್ರತಿನಿಧಿಗಳ ಸಾಧನೆ ಸಂಬಂಧಿ ಪ್ರದರ್ಶನಗಳು, ಪೋಸ್ಟರ್, ಬ್ಯಾನರ್, ಕಟೌಟ್ಗಳ ತೆರವು ಕಾರ್ಯ ಕೂಡಾ ಆರಂಭಗೊಂಡಿದೆ. ಇನ್ನು ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಾಸಕರು, ಸಂಸದರ ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗಿದೆ. ಸರ್ಕಾರಿ […]Read More