ಧರ್ಮಸ್ಥಳ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ರಕ್ಷಿತ್ ಶಿವರಾಂ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾಗಿದ್ದು ಮಾ.26 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಯ ದಶ೯ನ ಪಡೆದು, ಧಮಾ೯ಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿ, ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ಬಿಜೆಪಿ ಜಿಲ್ಲಾ ಎಸ್ ಸಿ
ಬಿಜೆಪಿ ಕರ್ನಾಟಕ,ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ಮಾ.20 ರಂದು ಎಸ್ ಸಿ ಸಮಾವೇಶ ಕಾರ್ಯಕ್ರಮ ಜರುಗಿತು. ಈ ವೇಳೆ ಬಿಜೆಪಿ ಸರ್ಕಾರ ಎಸ್ ಸಿ ಸಮುದಾಯಕ್ಕೆ ನೀಡಿದ ಕೊಡುಗೆಗಳನ್ನು ಮೆಲುಕುಹಾಕಲಾಯಿತು. ಕಾರ್ಯಕ್ರಮವನ್ನು ಸಮಾವೇಶದ ರಾಜ್ಯ ಸಂಚಾಲಕ ಮಹೇಂದ್ರ ಕೊತ್ಪಾಲ ದೀಪ ಬೆಳಗಿಸಿ ಉದ್ಘಾಟಿಸಿ, ಅಧ್ಯಕ್ಷತೆಯನ್ನು ಬಿಜೆಪಿ ಎಸ್ ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ವಿನಯಚಂದ್ರ ವಹಿಸಿದ್ದರು. ಇದೆ ಸಂಧರ್ಭದಲ್ಲಿ ಪಕ್ಷದ ಸಿದ್ಧಾಂತ ಮತ್ತು ಅಭಿವೃದ್ಧಿಯ ರಾಜಕಾರಣವನ್ನು […]Read More
2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಹುತೇಕ ಫೈನಲ್ ಆಗಿದೆ ಎಂದು ಹೇಳಲಾಗುತ್ತಿದ್ದು, ಆ ಪಟ್ಟಿಯಲ್ಲಿ ಬೆಳ್ತಂಗಡಿಯಿಂದ ಕೆ ವಸಂತ ಬಂಗೇರ, ಮಂಗಳೂರಿನಿಂದ ಯು ಟಿ ಖಾದರ್, ಮೂಡಬಿದಿರೆಯಿಂದ ಮಿಥುನ್ ರೈ, ಬಂಟ್ವಾಳದಿಂದ ರಮಾನಾಥ ರೈ ಎಂದು ಅಂತಿಮ ಪಟ್ಟಿ ಹೇಳಲಾಗುತ್ತಿದ್ದು, ಅಧಿಕೃತವಾಗಿ ಪಟ್ಟಿ ರಿಲೀಸ್ ಆದ ಮೇಲೆ ಸತ್ಯಾಂಶ ಗೊತ್ತಾಗಲಿದೆRead More
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿದ್ದ ಹಳೆಯ ಪ್ರವಾಸಿ ಬಂಗಲೆಯನ್ನು ಕೆಡವಿ ಹೊಸ ಪ್ರವಾಸಿ ಬಂಗಲೆ ತಲೆ ಎತ್ತುತ್ತಿದ್ದು, ಇದರಲ್ಲಿ ಶಾಸಕ ಹರೀಶ್ ಪೂಂಜಾರವರು 40% ಕಮಿಷನ್ ಹಣ ಕೊಳ್ಳೆ ಹೊಡೆಯುವ ಸಲುವಾಗಿ ಟೆಂಡರ್ ಪ್ರಕ್ರಿಯೆಯನ್ನೇ ಹೈಜಾಕ್ ಮಾಡಿದ್ದಾರೆ. ಇತ್ತೀಚೆಗೆ ತಾಲೂಕಿನಾದ್ಯಂತ ಸುಮಾರು 411 ಕೋಟಿ ರೂಪಾಯಿಗಳ ಶಂಕುಸ್ಥಾಪನೆ ನಡೆಸಿದ್ದು, ಇದೊಂದು ರಾಜ್ಯದಲ್ಲಿಯೇ ವಿಚಿತ್ರವಾದ ಬೋಗಸ್ ಶಂಕುಸ್ಥಾಪನೆಯಾಗಿದ್ದು ಶಾಸಕರು ಆ ಮೂಲಕ ಬೆಳ್ತಂಗಡಿ ಕ್ಷೇತ್ರದ ಜನರ ಕಿವಿಗೆ ಹೂ ಇಡುವ ಕೆಲಸ ಮಾಡಿದ್ದಾರೆ. ಇಂತಹ ಅನಧಿಕೃತ ಕಾಮಗಾರಿಗಳನ್ನು ಅನುಷ್ಠಾನಿಸುವ ಮೊದಲು […]Read More
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಅಭಿವೃದ್ಧಿ ಯತ್ತ ಹೆಜ್ಜೆ ಇಟ್ಟ ಶಾಸಕ ಹರೀಶ್ ಪೂಂಜರು ಅನೇಕ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ್ದು, ಇದೀಗ ಶಾಸಕರು ಮತ್ತೆ ಮಾ.7 ರಂದು ಒಂದೇ ದಿನ 35 ಕಡೆಗಳಲ್ಲಿ ಶಿಲಾನ್ಯಾಸ ನೆರವೇರಿಸಿ ಬೆಳ್ತಂಗಡಿಯನ್ನು ಅಭಿವೃದ್ಧಿ ಮಾಡುವಲ್ಲಿ ಯಶಸ್ವಿಯ ಹೆಜ್ಜೆಯನ್ನಿಟ್ಟಿದ್ದಾರೆ. ಹಳ್ಳಿ ಹಳ್ಳಿಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯದಿಂದ ವಂಚಿತವಾಗಿದ್ದ ಪ್ರದೇಶಗಳನ್ನು ಅಭಿವೃದ್ಧಿ ಮಾಡುತ್ತಾ ಬಂದಿರುವ ಶಾಸಕರು ಇಂದು ಬೆಳಗ್ಗೆ 7 ಗಂಟೆಯಿಂದಲೇ 400 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಾಗುತ್ತಿದೆ. […]Read More
ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆ
ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಯಕರನ್ನೊಳಗೊಂಡ ಚುನಾವಣಾ ಪೂರ್ವಭಾವಿ ಸಿದ್ಧತಾ ಸಭೆಯು ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆಯವರ ಅಧ್ಯಕ್ಷತೆಯಲ್ಲಿ ಜ.6 ರಂದು ಬೆಳ್ತಂಗಡಿ ಕಚೇರಿಯಲ್ಲಿ ನಡೆಯಿತು.Read More
ಬೆಳ್ತಂಗಡಿ: ಇತ್ತೀಚೆಗೆ ನಡೆದ ಕಾಟಿಪಳ್ಳದ ಜಲೀಲ್ ಹತ್ಯೆ ಪ್ರಕರಣವನ್ನು ಮಾಜಿ ಸಚಿವರಾದ ಕೆ. ಗಂಗಾಧರ ಗೌಡರವರು ತೀವ್ರವಾಗಿ ಖಂಡಿಸಿದ್ದಾರೆ. ಕೊಲ್ಲುವವನಿಗಿಂತ ಕಾಯುವವನು ದೊಡ್ಡವ. ಪ್ರೀತಿ,ವಿಶ್ವಾಸ ಮತ್ತು ದಯೆ ಸಾಮರಸ್ಯ ಮಾನವತೆಯ ಮೂಲವಾಗಿರುತ್ತದೆ. ಕೊಲೆ ಮಾಡುವಂತದ್ದು ಯಾವುದೇ ಮಾನವ ಧರ್ಮದಲ್ಲಿ ಖಂಡನೀಯವಾಗಿರುತ್ತದೆ. ನಾಡಿನ ಸೌಹಾರ್ದತೆಯನ್ನು ಕೆಡಿಸಿ ಕೇವಲ ರಾಜಕೀಯ ಲಾಭಕ್ಕಾಗಿ ಮಾಡುವಂತಹ ಗೂಂಡಾಗಿರಿ,ಕೊಲೆಗಳಂತಹ ಘೋರ ಅಪರಾಧ ಕೃತ್ಯಗಳು ಸಮಾಜವನ್ನು ವಿಭಜಿಸುವುದಲ್ಲದೇ, ಜನರ ನೆಮ್ಮದಿ, ಶಾಂತಿ-ಸೌಹಾರ್ದತೆಯನ್ನು ಕೆಡಿಸುತ್ತದೆ. ಸ್ವಸ್ಥ ಸಮಾಜಕ್ಕಾಗಿ ಮಾನವತಾ ವಾದಿಗಳಾದ ನಾವೆಲ್ಲರೂ ಇದನ್ನು ಕಠಿಣ ಶಬ್ಧಗಳಲ್ಲಿ […]Read More
ಬೆಳ್ತಂಗಡಿ (ಡಿ -24): ಮುಂಬರುವ ವಿಧಾನಸಭಾ ಕ್ಷೇತ್ರ ಚುನಾವಣೆಯ ಕಾವು ಎಲ್ಲೆಡೆಯೂ ಜೋರಾಗಿದ್ದು ಅದರಂತೆಯೇ ಎಲ್ಲಾ ಪಕ್ಷಗಳು ಅಭ್ಯರ್ಥಿಯನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ. ಅದರಂತೆಯೇ ಎಸ್ಡಿಪಿಐ ಪಕ್ಷವೂ ಈಗಾಗಲೇ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಕಡೆಗಳಲ್ಲಿ ಕಾರ್ಯಕರ್ತರ ಸಭೆ ನಡೆದಿದ್ದು, ಚುನಾವಣೆಗೆ ಸ್ಪರ್ಧಿಸಬೇಕೆಂಬ ಆಗ್ರಹ ಸ್ಥಳೀಯ ನಾಯಕರಿಂದ ಮತ್ತು ಕಾರ್ಯಕರ್ತರಿಂದ ಅಭಿಪ್ರಾಯ ಬಂದು ಸ್ಫರ್ದಿಸುವ ಬಗ್ಗೆ ಈ ಹಿಂದೆಯೇ ತೀರ್ಮಾನವಾಗಿತ್ತು. ಈಗಾಗಲೇ ಕ್ಷೇತ್ರ ಸಮಿತಿ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಯುವ ನಾಯಕ […]Read More