ತಣ್ಣೀರುಪಂಥ: ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ಇತ್ತೀಚೆಗೆ ಆಕಸ್ಮಿಕ ಬಿದ್ದ ಬೆಂಕಿಯಿಂದ ಸಂಪೂರ್ಣ ಸುಟ್ಟು ಹೋದ ಭವಾನಿ ಎಂಬವರ ಮನೆಗೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿದರು. ಘಟನೆ ನಡೆದ ದಿನವೇ ರಾತ್ರಿ ಶಾಸಕರು ದೂರವಾಣಿ ಮೂಲಕ ಅಧಿಕಾರಿಗಳ ಸಂಪರ್ಕಿಸಿ ಕಂದಾಯ ಇಲಾಖೆಯಲ್ಲಿ ಸಂಪರ್ಕಿಸಿ ಸೂಕ್ತ ರೀತಿಯಲ್ಲಿ ಪರಿಹಾರ ನೀಡುವ ಭರವಸೆ ನೀಡಿ,ತಮ್ಮಿಂದಾಗುವ ಸಹಾಯಹಸ್ತ ನೀಡಿ ಮನೆಯವರಿಗೆ ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡಿದ್ದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ ಕೋಟ್ಯಾನ್,ಕಣಿಯೂರು ಮಹಾಶಕ್ತಿ […]
ತಣ್ಣಿರುಪಂತ: ತಣ್ಣೀರುಪಂತ ಗ್ರಾಮದ ಅಳಕ್ಕೆ ಭವಾನಿ ಗೌಡ ರವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಹಾನಿಗೊಳಗಾಗಿದ್ದು ಇಂದು ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ,ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಭೇಟಿ ನೀಡಿದರು . ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಲಿ ಸದಸ್ಯರಾದ ಜಯಾವಿಕ್ರಮ್ ಉಪಾಧ್ಯಕ್ಷರಾದ ಐಯೂಬ್ ಡಿ.ಕೆ ಸದಸ್ಯರಾದ ನವೀನ್ ಕುಮಾರ್ ತಾಜುದ್ದೀನ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಕೇಶವತಿ ಪಾಲೇದು, ಮಾಜಿ ಪಂಚಾಯತ್ ಸದಸ್ಯರಾದ ಅಬ್ದುಲ್ ರಹಿಮ್ಮಾನ್,ಯೋಗಿಶ್ […]Read More
ಮಂಗಳೂರು: ಅಕ್ಷರ ಸಂತ ಹರೇಕಳ ಹಾಜಬ್ಬ ಅವರ ಬೇಡಿಕೆ ಕೊನೆಗೂ ಈಡೇರಿದೆ. ಹಾಜಬ್ಬ ಮನವಿಗೆ ಕೊನೆಗೂ ಸರ್ಕಾರ ಅಸ್ತು ಎಂದಿದೆ. ಹಾಜಬ್ಬ ಅವರಿಗೆ ರಾಜ್ಯ ಸರಕಾರ ಪಿಯು ಕಾಲೇಜು ಮಂಜೂರುಗೊಳಿಸಿ ಆದೇಶ ಹೊರಡಿಸಿದೆ. ಇಂಗ್ಲಿಷ್ ಬಾರದೆ ಶಾಲೆ ಆರಂಭಿಸಲು ಕನಸು ಕಂಡು ಹರೇಕಳ ಹಾಜಬ್ಬ ತಾನು ಅನುಭವಿಸಿದ ಕಷ್ಟ ನನ್ನ ಊರಿನ ಮಕ್ಕಳು ಪಡಬಾರದು ಎಂದು ಶಾಲೆ ಕಟ್ಟಲು ಪಣ ತೊಟ್ಟರು. ಹಾಜಬ್ಬ ನಿರ್ಮಿಸಿದ ಹರೇಕಳದ ನ್ಯೂಪಡು ಸರಕಾರಿ ಶಾಲೆ ಇಂದು ಅದೆಷ್ಟೋ ವಿದ್ಯಾರ್ಥಿಗಳು ವಿದ್ಯಾರ್ಜನೆ […]Read More
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಾಂತಾರ ಸಿನೆಮಾ ನಿರ್ದೇಶಕ, ನಟ ರಿಷಭ್ ಶೆಟ್ಟಿ ಹಾಗೂ ಅವರ ಕುಟುಂಬ ನ.2 ರಂದು ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿವಿಧ ಬಗೆಯ ಸೇವೆಯನ್ನು ಸಲ್ಲಿಸಿದರು. ನಂತರ ಅಣ್ಣಪ್ಪ ಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿ ಅಣ್ಣಪ್ಪ ಸ್ವಾಮಿಗೆ ವಿಶೇಷ ಬಲಿವಾಡ ಸೇವೆಯನ್ನು ಸಲ್ಲಿಸಿದರು.Read More
ಮಿತ್ತಬಾಗಿಲು: ಅನಾರೋಗ್ಯದಿಂದ ಬಳಲುತ್ತಿದ್ದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ ದಿಡುಪೆ ಗುಡ್ಡದಲ್ಲಿ ಆತ್ಮಹತ್ಯೆ
ಮಿತ್ತಬಾಗಿಲು: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವಕನೊಬ್ಬ ದಿಡುಪೆ ಗುಡ್ಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿತ್ತಬಾಗಿಲಿನಲ್ಲಿ ನಡೆದಿದೆ . ಬೆಳ್ತಂಗಡಿ ತಾಲೂಕಿನ ಮಿತ್ತ ಬಾಗಿಲು ಗ್ರಾಮದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಈತ ದಿಡುಪೆ ಗುಡ್ಡದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಾಸಿಕೊಂಡಿದ್ದಾರೆ.Read More
ಮುಂಡಾಜೆ ಪ್ರಾ.ಕೃ.ಪ.ಸ ಸಂಘದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾರಾಯಣ ಫಡ್ಕೆ ಹಾಗೂ ಮಧುಕರ ರಾವ್
ಮುಂಡಾಜೆ: ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಛೇರಿ ಸಹಾಯಕರಾಗಿ ಕರ್ತವ್ಯವನ್ನು ಆರಂಭಿಸಿ ಮುಂದೆ ವಿವಿಧ ಹುದ್ದೆಗಳನ್ನು ಅಲಂಕರಿಸಿ ವಿವಿಧ ಶಾಖೆಗಳಲ್ಲಿ ಶಾಖಾ ವ್ಯವಸ್ಥಾಪಕರಾಗಿ ನಂತರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಸುಧೀರ್ಘ 44 ವರ್ಷಗಳಲ್ಲಿ ಕರ್ತವ್ಯ ನಿರ್ವಹಿಸಿದ ನಾರಾಯಣ ಫಡ್ಕೆ ಮತ್ತು ಮತ್ತು ಗುಮಾಸ್ತರಾಗಿ ಕರ್ತವ್ಯವನ್ನು ಆರಂಭಿಸಿ ನಂತರ ಭಡ್ತಿಗೊಂಡು ಶಾಖಾ ವ್ಯವಸ್ಥಾಪಕರಾಗಿ ವಿವಿಧ ಶಾಖೆಗಳಲ್ಲಿ 36 ವರ್ಷಗಳು ಕರ್ತವ್ಯ ನಿರ್ವಹಿಸಿದ ಮಧುಕರ ರಾವ್ ಅ.31 ರಂದು ನಿವೃತ್ತರಾದ ಇವರಿಗೆ ನ.1 ರಂದು ಮುಂಡಾಜೆ […]Read More
ನೆರಿಯ: ನೆರಿಯ ಗ್ರಾಮದ ನಕ್ಕರೆ ಶ್ರೀ ಈಶ್ವರ ಕಾಳಿಕಾಂಬ ದೇವಸ್ಥಾನದ ರಸ್ತೆ ಕಾಂಕ್ರಿಟೀಕರಣ ಶಿಲಾನ್ಯಾಸ ಕಾರ್ಯಕ್ರಮ ಹಾಗೂ 19 ಮನೆಯವರಿಗೆ 94 ಸಿ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ನ. 1ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ ವಹಿಸಿದ್ದರು. ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಆರ್.ಐ.ಪ್ರದೀಕ್ಷ್, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕುಶಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್, ಗ್ರಾಮ ಕರಣಿಕಾದ ಸೀದೇಶ್ […]Read More
ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಧರ್ಮಸ್ಥಳ: ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ನ.1 ರಂದು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಧರ್ಮಸ್ಥಳ ದೇವಳದ ಮುಖ್ಯ ಲೇಖಾಧಿಕಾರಿಯಾಗಿರುವ ಪುರಂದರ ಭಟ್ ಆಗಮಿಸಿ ವಿದ್ಯಾರ್ಥಿಗಳಿಗೆ ಕರ್ನಾಟಕದ ಏಕೀಕರಣ ಕನ್ನಡ ನಾಡು ನುಡಿಯ ವೈಭವ ಕುರಿತು ವಿಸ್ತಾರವಾಗಿ ವಿವರಿಸಿದರು. ಕನ್ನಡ ಕವಿಗಳ ಸಾಹಿತ್ಯವನ್ನು ಓದುವಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹವನ್ನು ನೀಡಿದರು. ತದನಂತರ ವಿದ್ಯಾರ್ಥಿಗಳು ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಹಾಡು ನೃತ್ಯಗಳ ಮುಖಾಂತರ ಅನಾವರಣಗೊಳಿಸಿದರು. ಶಾಲಾ ಮುಖ್ಯ ಉಪಾಧ್ಯಾಯಿನಿ […]Read More
ಸಿದ್ದಕಟ್ಟೆ: ಸಿದ್ದಕಟ್ಟೆ ಕರ್ಪೆ ನಿವಾಸಿ ಜಯ ನಾಯ್ಕ್ ಎಂಬವರು ಅಡಿಕೆ ಮರದಿಂದ ಬಿದ್ದು ಮೃತಪಟ್ಟ ಘಟನೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಿದ್ದಕಟ್ಟೆ ಎಂಬಲ್ಲಿ ನ.2 ರಂದು ನಡೆದಿದೆ. ಕಣಿಯೂರು ಸಿದ್ದಕಟ್ಟೆ ಎಂಬಲ್ಲಿ ಜಯ ನಾಯ್ಕ್ ಅಡಿಕೆ ಮರಕ್ಕೆ ಹತ್ತಿ ಅಡಿಕೆಯನ್ನು ಕೀಳುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರ ವಾಗಿ ಗಾಯಗೊಂಡಿದ್ದರು. ಗಾಯಗೊಂಡ ಅವರನ್ನು ಕೂಡಲೇ ಮೂಡುಬಿದಿರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆಯಾದರೂ ಅವರು ಚಿಕಿತ್ಸೆ ಗೆ ಸ್ಪಂದಿಸಿದೆ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.ಬಂಟ್ವಾಳ […]Read More