ಅಂಡಿಂಜೆ: ಮಂಗಳೂರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿ ಭೇಟಿ ಹಿನ್ನೆಲೆ ನಾರಾವಿ ಮಹಾಶಕ್ತಿಕೇಂದ್ರ ಮಟ್ಟದ ಪೂರ್ವಭಾವಿ ಸಭೆಯು ಅಂಡಿಂಜೆ ಶ್ರೀ ವಿನಾಯಕ ಶ್ರೀ ರಾಮ ಭಜನಾ ಮಂದಿರಲ್ಲಿ ಜರುಗಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಭಾ.ಜ.ಪ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಮತ್ತಿತರರು ಭಾಗಿಯಾಗಿದ್ದರು.
ಬೆಳ್ತಂಗಡಿ: ಸಾವಿರಾರು ಭಕ್ತರ ಪುಣ್ಯ ಕ್ಷೇತ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು. ಈ ಕುರಿತು ಸಿಎಂ ಹಾಗೂ ಸಂಬಂಧಪಟ್ಟ ಇಲಾಖೆಗಳ ಜೊತೆ ಚರ್ಚಿಸಲಾಗುವುದು ಎಂದು ವಸತಿ ಸಚಿವ ಸೋಮಣ್ಣ ಹೇಳಿದರು. ಅವರು ಬಸವ ವಸತಿ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಯ 1640 ಮಂದಿ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣ ಕಾಮಗಾರಿ ಆದೇಶ ಪತ್ರವನ್ನು ಆ.27 ರಂದು ವಿತರಿಸಿ ಮಾತನಾಡಿದರು. ಮಿನಿ ವಿಮಾನ ನಿಲ್ದಾಣ ನಿರ್ಮಿಸಲು 100 ಎಕರೆ ಜಾಗ […]Read More
ಕನ್ಯಾಡಿ: ಚಾತುರ್ಮಾಸ್ಯ ವೃತಾಚರಣೆಯಲ್ಲಿ ಭಾಗಿಯಾಗಿ ಸ್ವಾಮೀಜಿಯ ಆಶೀರ್ವಾದ ಪಡೆದ ಸಚಿವ ವಿ.ಸೋಮಣ್ಣ
ಕನ್ಯಾಡಿ: ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆಯ 47ನೇ ದಿನವಾದ ಆ.27 ರಂದು ವಸತಿ ಸಚಿವ ವಿ.ಸೋಮಣ್ಣರವರು ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಮಂಗಳೂರು ದಕ್ಷಿಣದ ಶಾಸಕರು ವೇದವ್ಯಾಸ್ ಕಾಮತ್, ಮಿಜಾರು ಮೂಡ ಅಧ್ಯಕ್ಷರು ರವಿಶಂಕರ್, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಬಿಜೆಪಿ ಮುಖಂಡ ವಸಂತ ಜಿ ಪೂಜಾರಿ, ಯುವ ಮೋರ್ಚಾ ಉಪಾಧ್ಯಕ್ಷ ಪ್ರಕಾಶ್ ಪೂಜಾರಿ, ವಸಂತ ಸಾಲ್ಯಾನ್ ಕಾಪಿನಡ್ಕ ಮತ್ತು ಮನೆಯವರು, […]Read More
ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಸದಸ್ಯರು ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ. ಜೋನ್ ಟ್ರೈನಿಂಗ್ ವರ್ಕಶಾಪ್ ಸೆಮಿನರ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಕಾರ್ಯದರ್ಶಿ ಶಂಕರ್ ರಾವ್, ಉಪಾಧ್ಯಕ್ಷರುಗಳಾದ ರಂಜಿತ್ ಹೆಚ್.ಡಿ, ಸುಧೀರ್ ಕೆ ಎನ್ , ಹೇಮಾವತಿ,ಸದಸ್ಯೆ ಸುಭಾಷಿಣಿ ಇವರು ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ. ವಲಯಾಧ್ಯಕ್ಷ ರೋಯನ್ ಕ್ರಾಸ್ತ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ಪ್ರಸಾದ್ ಬಿ.ಎಸ್,ವಲಯ ಉಪಾಧ್ಯಕ್ಷ ಪ್ರಶಾಂತ್ ಲಾಯಿಲ, ವಲಯಾಧಿಕಾರಿಗಳಾದ ಅಭಿನಂದನ್ ಹರೀಶ್ ಕುಮಾರ್,ಸ್ವರೂಪ್ ಶೇಖರ್ ಅಭಿನಂದಿಸಿ ಗೌರವಿಸಿದರು.Read More
ಬೆಳ್ತಂಗಡಿ: ರಾಜೀವ ಗಾಂಧಿ ವಸತಿ ನಿಗಮ ಬೆಂಗಳೂರು, ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ 2021- 22ನೇ ಸಾಲಿನ ಬಸವ ವಸತಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಯಲ್ಲಿ 48 ಗ್ರಾಮ ಪಂಚಾಯತ್ ಗಳು 1640 ಮಂದಿ ಅಹ೯ ಫಲಾನುಭವಿಗಳಿಗೆ ಮನೆ ನಿರ್ಮಾಣ ಕಾಮಗಾರಿ ಆದೇಶ ಪತ್ರ ವಿತರಣಾ ಕಾರ್ಯಕ್ರಮ ಆ.27ರಂದು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನ ಗುರುವಾಯನಕೆರೆಯಲ್ಲಿ ಜರುಗಿತು. ರಾಜ್ಯ ಸರ್ಕಾರದ ವಸತಿ […]Read More
ಮಿತ್ತಬಾಗಿಲು: ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ದಿಡುಪೆ ಬಸ್ ನಿಲ್ದಾಣದ ಹಿಂಬಂಧಿಯಲ್ಲಿರುವ ಮರಕ್ಕೆ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.26 ರಂದು ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಜಯಂತ ಗೌಡ(45)ಎಂದು ಗುರುತಿಸಲಾಗಿದೆ. ದಿಡುಪೆಯ ಶ್ರೀಧರ್ ಗೌಡ ಎಂಬವರ ಮನೆಗೆ ಸಂಬಂಧಿಯಾಗಿರುವ ಇವರು ಗುರುವಾರ ಬಂದಿದ್ದು, ಶುಕ್ರವಾರ ವಾಪಸ್ ಮಂಗಳೂರಿಗೆ ಕೆಲಸಕ್ಕೆ ಹೋಗುವುದಾಗಿ ಮನೆಯವರಲ್ಲಿ ಹೇಳಿ ಹೋಗಿದ್ದಾರೆ. ಆದರೆ ದಿಡುಪೆ ಬಸ್ […]Read More
ಕನ್ಯಾಡಿ ಚಾತುರ್ಮಾಸ್ಯ ವೃತಾಚರಣೆಯಲ್ಲಿ ಪಾದುಕ ಪೂಜೆ ನೆರವೇರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್
ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಗುರು ದೇವ ಮಠದಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ 45ನೇ ಚಾತುರ್ಮಾಸ್ಯ ವ್ರತಾಚರಣೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯಕ್ ಉಳಿಪ್ಪಾಡಿಯವರು ಗುರುಗಳ ಪಾದುಕ ಪೂಜೆ ನೆರವೇರಿಸಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಬಂಟ್ವಾಳ ಮಂಡಲ ಪ್ರ. ಕಾರ್ಯದರ್ಶಿ ಡೊಂಬಯ್ಯ ಅರಳ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಪ್ರಣಾಮ್ ರಾಜ್ ಅಜ್ಜಿಬೆಟ್ಟು ಉಪಸ್ಥಿತರಿದ್ದರು.Read More
ಸಾರ್ವಜನಿಕ ಗಣೇಶೋತ್ಸದ ವಿಸರ್ಜನೆಯ ವ್ಯವಸ್ಥೆಯನ್ನು ಆದರ್ಶ ರೀತಿಯಲ್ಲಿ ಮಾಡುವಂತೆ ಬೆಳ್ತಂಗಡಿ ಪುರಸಭೆಗೆ ಹಿಂದೂ
ಬೆಳ್ತಂಗಡಿ : ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು ಬಹುದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುತ್ತಿದ್ದು, ಸಡಗರ ಸಂಭ್ರಮದಿಂದ ಆಚರಣೆಯನ್ನು ಮಾಡುವ ಈ ಉತ್ಸವದಲ್ಲಿ, ಗಣೇಶ ವಿಸರ್ಜನೆಗೆ ಉತ್ತಮ ಮತ್ತು ಸುರಕ್ಷಿತ ವ್ಯವಸ್ಥೆ ಮಾಡಿಕೊಡಬೇಕೆಂದು ಉದ್ದೇಶಿಸಿ ಬೆಳ್ತಂಗಡಿ ತಾಲೂಕಿನ ಉಪ ತಹಶೀಲ್ದಾರ್ ಕೆ. ಜಯ ಹಾಗೂ ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಸಂಘಟನಾ ಸಂಯೋಜಕಿ ಮಿಟಿಲ್ಡ ಡಿ ಕೋಸ್ತ ಇವರಿಗೆ ಆ.25 ರಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು. ಹಿಂದೂ ಧರ್ಮಶಾಸ್ತ್ರದಂತೆ ಗಣೇಶನ ಮೂರ್ತಿಯ ವಿಸರ್ಜನೆಯನ್ನು […]Read More
ಕನ್ಯಾಡಿ: ಚಾತುರ್ಮಾಸ್ಯ ವೃತಾಚರಣೆಯಲ್ಲಿ ಭಾಗಿಯಾದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ವೈ
ಕನ್ಯಾಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆಯಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ವೈ ಭರತ್ ಶೆಟ್ಟಿ ಇವರು ಪಾದುಕ ಪೂಜೆ ನೆರವೇರಿಸಿದರು . ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ರಾಜ್ಯ ಬಿಜೆಪಿ ವಕ್ತಾರರಾದ ವಿಕಾಸ್ ಪುತ್ತೂರು,ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಗಳಾದ ಕಿರಣ್ ಕುಮಾರ್, ವರುಣ್ ಚೌಟ, ಜಯಾನಂದ ಅಂಚನ್, ಮನೋಜ್ ಕುಮಾರ್ […]Read More