ಬೆಳ್ತಂಗಡಿ: ಭಾರತೀಯ ಸೇನೆಗೆ ಅಗ್ನಿವೀರ್ ನೇಮಕಾತಿಯಲ್ಲಿ ಬೆಳ್ತಂಗಡಿ ತಾಲೂಕಿನಿಂದ ಅಗ್ನಿವೀರರಾಗಿ ನಾಲ್ಕು ಜನ ಆಯ್ಕೆಗೊಂಡಿರುವುದು ಶ್ಲಾಘನೀಯ. ಭಾರತೀಯ ಭೂ ಸೇನೆ ತಾಂತ್ರಿ ವಿಭಾಗಕ್ಕೆ ಬೆಳ್ತಂಗಡಿ ತಾಲೂಕಿನ ಧನುಷ್ ಗೌಡ, ಭಾರತೀಯ ನೌಕಾ ಸೇನೆಗೆ ಸೂರಜ್ ಶೆಟ್ಟಿ, ಭಾರತೀಯ ಭೂ ಸೇನೆಗೆ ರಜನೀಶ್ ಹಾಗೂ ವಿಜೇತ್ ಆಯ್ಕೆಗೊಂಡಿದ್ದಾರೆ. ಇವರಿಗೆ ಬೆಳ್ತಂಗಡಿ ತಾಲೂಕಿನ ಜನತೆಯ ಪರವಾಗಿ ಬೆಳ್ತಂಗಡಿ ಶಾಸಕರು ಹರೀಶ್ ಪೂಂಜ ಅಭಿನಂದನೆಯನ್ನು ತಿಳಿಸಿದ್ದಾರೆ.
ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರಿಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿಗಳ ವಿಭಿನ್ನ ತೀರ್ಪಿನಿಂದ ಈ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ. ಹಾಗಾಗಿ ಸುಪ್ರಿಕೋರ್ಟ್ ತೀರ್ಪು ಬರುವವರೆಗೆ ಹೈಕೋರ್ಟ್ ತೀರ್ಪು ಯಥಾಸ್ಥಿತಿ ಮುಂದುವರೆಯಲಿದೆ. ಹಾಗಾಗಿ ಶಾಲಾ ಕಾಲೇಜುಗಳಿಗೆ ಹಿಜಾಬ್ ಧರಿಸಿ ಬರಲು ಅವಕಾಶವಿಲ್ಲ. ನ್ಯಾಯಾಲಯದಲ್ಲಿ ನ್ಯಾಯಮೂರ್ತಿಗಳಲ್ಲಿ ಒಬ್ಬರು ಪರ ಹಾಗೂ ಇನ್ನೊಬ್ಬರು ವಿರೋಧ ತೀರ್ಪು ನೀಡಿದ್ದರಿಂದ ಇದನ್ನು ಸಿಜೆಐ ಗೆ […]Read More
ದೆಹಲಿ: ಕಾರನ್ನು ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಎರಡು ವರ್ಷದ ಕಂದಮ್ಮ ಚಕ್ರಕ್ಕೆ ಸಿಲುಕಿ ಸಾವಿಗೀಡಾದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ವಾಹನ ಚಲಾಯಿಸುವಾಗ ಮೈಯೆಲ್ಲಾ ಕಣ್ಣಾಗಿರಬೇಕು ಎಂದು ಹೇಳುತ್ತಾರೆ. ಏಕೆಂದರೆ ಸ್ವಲ್ಪ ಯಾಮಾರಿದ್ರು ಏನೆಲ್ಲಾ ಅನಾಹುತಗಳು ಆಗುತ್ತದೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿ. ಕಾರು ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಪುಟ್ಟ ಕಂದಮ್ಮ ಸಾವಿಗೀಡಾಗಿದೆ ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ದುರ್ಘಟನೆ ಅ.10 ರಂದು ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಡೆದಿದೆ. ಎರಡು […]Read More
ಬೆಳ್ತಂಗಡಿ: ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ 75ನೇ ವರ್ಷದ ಅಮೃತ ಮಹೋತ್ಸವದ ಸ್ವಾತಂತ್ರ್ಯ ದಿನಾಚರಣೆಯನ್ನು ಮುಳಿಯ ಜ್ಯುವೆಲ್ಸ್ ಮುಂಭಾಗದಲ್ಲಿ ಇಂದು ಆಚರಿಸಲಾಯಿತು. ಧ್ವಜಾರೋಹಣವನ್ನು ಪ್ರಸಕ್ತ ಭೂಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ತೋಮಸ್ ಫಿಲಿಪ್ ಅವರು ನೆರವೇರಿಸಿ ಶುಭವನ್ನು ಹಾರೈಸಿದರು.ಈ ಸಂದರ್ಭದಲ್ಲಿ ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.Read More
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ‘ಕ್ಲಬ್ ಹೌಸ್’ ಇತಿಹಾಸದಲ್ಲೇ ಮೊದಲ ಬಾರಿಗೆ 75
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ‘ಕ್ಲಬ್ ಹೌಸ್’ ಇತಿಹಾಸದಲ್ಲೇ ಮೊದಲ ಬಾರಿಗೆ 75 ಗಂಟೆಗಳ ಮ್ಯಾರಥಾನ್ ಕಾರ್ಯಕ್ರಮ ಆಗಸ್ಟ್ 12 ರ ಸಂಜೆ 6 ಗಂಟೆಯಿಂದ ಆ. 15 ರ ರಾತ್ರಿ 9 ರವರೆಗೆ ನಡೆಯಲಿದ್ದು, 75 ಗಂಟೆಗಳ ನಿರಂತರ ಕಾರ್ಯಕ್ರಮದಲ್ಲಿ ಪ್ರತಿ ಗಂಟೆಗೊಮ್ಮೆ ಒಬ್ಬ ಮಹನೀಯರಂತೆ ಒಟ್ಟು 75 ಅವಿಖ್ಯಾತ(ಇದುವರೆಗೆ ಹೆಚ್ಚು ಪರಿಚಯಿಸಲ್ಪಡದ) ಸ್ವಾತಂತ್ರ್ಯ ಕಲಿಗಳ ಪರಿಚಯ ಹಾಗೂ ಇನ್ನೂ ಅನೇಕ ಕಾರ್ಯಕ್ರಮಗಳು ಜರುಗಲಿದೆ. ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಈ ಸುಸಂದರ್ಭದಲ್ಲಿ ಉಪನಿಷತ್ತಿನಿಂದ […]Read More
ಬಂದಾರು:75 ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ವಿಶೇಷವಾಗಿ ದೇಶದಾದ್ಯಂತ ಆಚರಿಸುತ್ತಿರುವ ಹಿನ್ನಲೆಯಲ್ಲಿ ಬಂದಾರು ಪಂಚಾಯತ್ ನಲ್ಲಿ ನಡೆಯಲಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯು ಕೂಡ ಅತ್ಯಂತ ವಿಶಿಷ್ಟ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಅವಿಸ್ಮರಣೀಯ ಸ್ವಾತಂತ್ರೋತ್ಸವದ ಕಾರ್ಯಕ್ರಮಕ್ಕೆ ಬಂದಾರು,ಮೊಗ್ರು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಅಧ್ಯಕ್ಷರು,ಉಪಾಧ್ಯಕ್ಷರು ಅಭಿವೃದ್ಧಿ ಅಧಿಕಾರಿ ಸರ್ವಸದಸ್ಯರು, ಸಿಬ್ಬಂದಿ ವರ್ಗ ತಿಳಿಸಿದ್ದಾರೆ.Read More
ಬೆಳ್ತಂಗಡಿ: ರಾಜ್ಯ ಸಭಾ ಸದಸ್ಯರಾಗಿ ನಾಮನಿದೇ೯ಶನಗೊಂಡ ಧಮ೯ಸ್ಥಳದ ಧಮಾ೯ಸ್ಥಳದ ಧಮಾ೯ಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರ ಸಂಸದರ ಕಾರ್ಯಾಲಯ ಉದ್ಘಾಟನಾ ಸಮಾರಂಭಆ. 11 ರಂದು ಧಮ೯ಸ್ಥಳದ ಮಂಜೂಷಾ ವಸ್ತುಸಂಗ್ರಹಾಲಯದ ಬಳಿಯ ಕಟ್ಟಡದಲ್ಲಿ ಜರುಗಿತು. ಅಧ್ಯಕ್ಷತೆಯನ್ನು ಧರ್ಮಾಧಿಕಾರಿಗಳು ಹಾಗೂ ಸಂಸದರು (ರಾಜ್ಯ ಸಭೆ) ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು. ಶಾಸಕ ಹರೀಶ್ ಪೂಂಜ ಕಾಯಾ೯ಲಯವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರುಗಳಾದಪ್ರತಾಪಸಿಂಹ ನಾಯಕ್ ,ಕೆ. ಹರೀಶ್ ಕುಮಾರ್ ಹಾಗೂಎಸ್.ಡಿ.ಎಂ. […]Read More
ಉಜಿರೆಯ ವಿವಿಧ ಸಂಘದ ಪದಾಧಿಕಾರಿಗಳಿಂದ ಉಜಿರೆಯ ಶರತ್ ಕೃಷ್ಣ ಪಡ್ವೆಟ್ನಾಯರ ನೇತೃತ್ವದಲ್ಲಿ ಗೌರವರ್ಪಣೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಭಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಸಂದರ್ಭದಲ್ಲಿ ಉಜಿರೆಯ ವಿವಿಧ ಸಂಘದ ಪದಾಧಿಕಾರಿಗಳು ಉಜಿರೆಯ ಶರತ್ ಕೃಷ್ಣ ಪಡ್ವೆಟ್ನಾಯರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಮಾಡಿ ಫಲಪುಷ್ಪಾವನ್ನು ನೀಡಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಉಜಿರೆ ವರ್ತಕರ ಸಂಘದ ಪದಾಧಿಕಾರಿಗಳು,ಉಜಿರೆ ಮಹಿಳಾ ಮಂಡಲದ ಅಧ್ಯಕ್ಷರಾದ ಜಯಶ್ರೀ ಗೌಡ ಅಪ್ರಮೇಯ ಮತ್ತು ಸದಸ್ಯರು,ಉಜಿರೆ ಗ್ಯಾರೇಜ್ ಮಾಲಕರ ಸಂಘದ ಪದಾಧಿಕಾರಿಗಳು, […]Read More