ಜು.18 ರಂದು ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಭರ್ಜರಿ ಗೆಲುವು ಕಂಡಿದ್ದಾರೆ. ಇಂದು ಬೆಳಿಗ್ಗೆ 11ಕ್ಕೆ ಸಂಸತ್ ಭವನದ 63 ನೇ ಕೊಠಡಿಯಲ್ಲಿ ಮುಖ್ಯ ಚುನಾವಣಾ ಅಧಿಕಾರಿ ಹಾಗೂ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಆಗಿರುವ ಪಿ ಸಿ ಮೋದಿ ಅವರು ಮತ ಎಣಿಕೆ ಪ್ರಕ್ರಿಯೆ ಮಾಡಿದ್ದರು. ಯುಪಿಎ ಅಭ್ಯರ್ಥಿ ಯಶವಂತ್ ಸಿನ್ಹಾ ಗೆ ಸೋಲಾಗಿದ್ದು, ಇದೀಗ ದ್ರೌಪದಿ ಮುರ್ಮು ಹೊಸ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಮೊದಲ ಆದಿವಾಸಿ ಮಹಿಳೆಗೆ ರಾಷ್ಟ್ರಪತಿ […]
ಧರ್ಮಸ್ಥಳ: ನಾಮ ನಿರ್ದೇಶಿತ ಸದಸ್ಯರಾಗಿ ನೇಮಕಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ ವೀರೇಂದ್ರ ಹೆಗ್ಗಡೆಯವರು ಇಂದು ದೆಹಲಿಯ ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಿ ಮೋದಿಯವರನ್ನು ಭೇಟಿಯಾದರು.ಈ ಸಂದರ್ಭದಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ ಇನ್ನಿತರರು ಉಪಸ್ಥಿತರಿದ್ದರುAttachments areaRead More
ದೆಹಲಿ: ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಡೆಯವರು ಜುಲೈ 21ರಂದು ದೆಹಲಿಯ ಸಂಸತ್ ಭವನದಲ್ಲಿ ದೇವರ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ತಮ್ಮ 20ನೇ ವಯಸ್ಸಿನಲ್ಲಿ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾದ ಹೆಗ್ಗಡೆಯವರು ಶಿಕ್ಷಣ ಕ್ಷೇತ್ರ, ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗಕ್ಕಾಗಿ ಇವರು ಯುವಕರನ್ನು ಪ್ರೇರೇಪಿಸಿದ ಬಗೆ ಅಮೋಘ. ಡಾ. ಡಿ ವೀರೇಂದ್ರ ಹೆಗ್ಗಡೆ, ಸಂಗೀತ ನಿರ್ದೇಶಕ ಇಳಯರಾಜ ಅಥೇಟ್ ಉಷಾ ಹಾಗೂ ಚಲನಚಿತ್ರ ಕಥೆಗಾರ […]Read More
ದೆಹಲಿ: ರಾಜ್ಯ ಸಭೆಯ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ| ಡಿ ವೀರೇಂದ್ರ ಹೆಗ್ಗಡೆಯವರು ನಾಳೆ ಪ್ರಮಾಣ ವಚನ ಸ್ವೀಕರಿಸಲು ಇಂದು ದೆಹಲಿಗೆ ತೆರಳಿದ್ದು, ದೆಹಲಿಗೆ ರಾತ್ರಿ 9 ಗಂಟೆಗೆ ತಲುಪುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್,ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರ್, ಶ್ರೀನಿವಾಸ ರಾವ್ ಧರ್ಮಸ್ಥಳ ಅವರು ಜೊತೆಗಿದ್ದರು. ಹೆಗ್ಗಡೆಯವರು […]Read More
ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ಭಾರಿ ಆತಂಕ ಸೃಷ್ಟಿಸಿದ ಮಂಕಿ ಪಾಕ್ಸ್ ಕೇರಳದ ಮೂಲಕ ಭಾರತಕ್ಕೂ ಕಾಲಿಟ್ಟಿದೆ. ವಿದೇಶದಿಂದ ಕೇರಳಕ್ಕೆ ಬಂದ 35 ವರ್ಷದ ವ್ಯಕ್ತಿ ಒಬ್ಬನಲ್ಲಿ ಮಂಕಿ ಪಾಕ್ಸ್ ಗುರುವಾರ ದೃಢಪಟ್ಟಿದೆ. ಈ ಹಿಂದೆ ದೇಶದ ಕೋವಿಡ್ ಮೊದಲ ಪ್ರಕರಣ ಕೂಡ ಕೇರಳದಲ್ಲಿ ಧೃಢಪಟ್ಟಿತ್ತು. ಈಗ ಮತ್ತೆ ದೇಶದ ಮೊದಲ ಮಂಕಿ ಪಾಕ್ಸ್ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದೆ ಎಂಬುವುದು ಗಮನಾರ್ಹ. ಸೋಂಕಿತ ವ್ಯಕ್ತಿಯು ಆಸ್ಪತ್ರೆಗೆ ದಾಖಲಾಗಿದ್ದು, ಆತನ ಆರೋಗ್ಯ ಸ್ಥಿರವಾಗಿದೆ. ಸೋಂಕಿತನ ನಿಕಟ ಸಂಪರ್ಕದಲ್ಲಿರುವವರ ಪತ್ತೆಗೆ […]Read More
ಸ್ಪೆಷಲ್ ಒಲಂಪಿಕ್ ಭಾರತ್ ಪವರ್ ಲಿಫ್ಟಿಂಗ್ ಕ್ರೀಡಾ ಕೂಟದಲ್ಲಿ ಭಾಗವಹಿಸಲಿರುವಸ್ಪೂರ್ತಿ ವಿಶೇಷ ಶಾಲೆಯ
ಸ್ಪೆಷಲ್ ಒಲಂಪಿಕ್ ಭಾರತ್ ಪವರ್ ಲಿಫ್ಟಿಂಗ್ ಕ್ರೀಡಾ ಕೂಟದಲ್ಲಿ ಕರ್ನಾಟಕದಿಂದ ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಲು ಸ್ಪೂರ್ತಿ ವಿಶೇಷ ಶಾಲೆಯ ವಿದ್ಯಾರ್ಥಿನಿ ರಫಿಯಾ ಹಾಗೂ ಶಿಕ್ಷಕಿ ಸುಚಿತ್ರ ಕೋಚ್ ಆಗಿ ಬೆಂಗಳೂರಿನಿಂದ ಗುಜರಾತ್ ಗೆ ಇಂದು ತೆರಳಿದ್ದಾರೆ.Read More
ಧರ್ಮಸ್ಥಳ: ರಾಜ್ಯ ಸಭಾ ಸದಸ್ಯರಾಗಿ ಧರ್ಮಸ್ಥಳ ದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರನ್ನು ನಾಮನಿರ್ದೇಶನ ಮಾಡಲಾಗಿದೆ. ರಾಜ್ಯಸಭಾ ನಾಮನಿರ್ದೇಶಿತ ಸದಸ್ಯರಾಗಿ ಪಿಟಿ ಉಷಾ, ಇಳಯರಾಜ, ವೀರೇಂದ್ರ ಹೆಗ್ಗಡೆ, ಕೆವಿ ವಿಜಯೇಂದ್ರ ಪ್ರಸಾದ್, ಅವರನ್ನು ಆಯ್ಕೆ ಮಾಡಲಾಗಿದೆ. ನಾಲ್ಕು ನಾಮನಿರ್ದೇಶಿತ ಸದಸ್ಯರು ತಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಾಗಿದ್ದು, ಅವರ ಕೊಡುಗೆಗಳಿಗೆ ರಾಷ್ಟ್ರೀಯ ಮತ್ತು ಜಾಗತೀಕ ಮನ್ನಣೆಯನ್ನು ಪಡೆದಿದ್ದಾರೆ.Read More
ಬೆಳ್ತಂಗಡಿ: ರಾಜಸ್ಥಾನದ ಉದಯಪುರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಅಮಾಯಕ ಹಿಂದೂ ಕನ್ಹಯ್ಯಲಾಲ್ ಎಂಬ ಟೈಲರನನ್ನು ಭಯೋತ್ಪಾದಕರು ಶಿರಚ್ಛೇದ ಮಾಡಿ ಇಸ್ಲಾಮಿನ ಹೆಸರಿನಲ್ಲಿ ಹತ್ಯೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಸಾರ ಮಾಡಿದ ಜಿಹಾದಿ ಮತಾಂಧರ ಈ ಹತ್ಯೆಯ ಕೃತ್ಯವನ್ನು ಖಂಡಿಸಿ, ಆರೋಪಿಗಳನ್ನು ಕೂಡಲೆ ನೇಣಿಗೇರಿಸಬೇಕೆಂದು ಆಗ್ರಹಿಸಿ ರಾಮ್ ಸೇನಾ ಕರ್ನಾಟಕದ ಗೋಕಾಕ್ ಸಂಘಟನೆ ವತಿಯಿಂದ ಸಂತೋಷ್ ಚಂದನವಾಲೆ ಹಾಗೂ ಸಂತೋಷ್ ಸಾಳುಂಕೆ ಅವರ ನೇತೃತ್ವದಲ್ಲಿ ತಾಲೂಕು ಕಚೇರಿಯ ಮುಂಭಾಗ ಜು.5 ರಂದು ಬೃಹತ್ ಪ್ರತಿಭಟನೆಯನ್ನು ಮಾಡಲಾಯಿತು. […]Read More
ಹೊಸದಿಲ್ಲಿ: ಬಿಜೆಪಿಯ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸಬಹುದು ಎಂಬ ಊಹಾಪೋಹ ಕೇಳಿ ಬಂದ ನಡುವೆ ಇಂದು ತಮ್ಮ ಕೇಂದ್ರ ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ನಖ್ವಿ ಅವರ ರಾಜ್ಯಸಭಾ ಅವಧಿ ನಾಳೆ ಕೊನೆಗೊಳ್ಳಲಿದೆ. ಇಂದು ಬೆಳಗ್ಗೆ ನಖ್ವಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.Read More