ರಾಮ ನಾಮ ಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ ಎನ್ನುವಂತೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭ್ಯವ ಪ್ರಭು ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀ ರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ. ಶಿಲ್ಪಿಗಳ ತವರೂರು ಎಂದೇ ಖ್ಯಾತವಾಗಿರುವ ಕಾರ್ಕಳದ ಈದು ಗ್ರಾಮದ ತುಂಗ ಪೂಜಾರಿಯವರ ಭೂಮಿಯಲ್ಲಿದ್ದ ಶಿಲೆ ಆಯ್ಕೆಯಾಗಿದ್ದು, ಪೂರ್ತಿ ವಿಶ್ವವೇ ಈ ಶಿಲೆಯಿಂದ ರೂಪುಗೊಳ್ಳಲಿರುವ ಭಗವಾನ್ ಶ್ರೀ ರಾಮನ ದರ್ಶನ ಪಡೆಯಲಿದೆ ಎಂಬುದು ನಮ್ಮನ್ನು ಪುಳಕಿತರನ್ನಾಗಿ ಹಾಗೂ ಪುನೀತರನ್ನಾಗಿಸುವಂತಹದಾಗಿದೆ.
ಬೆಳ್ತಂಗಡಿ: ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 18 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮಾರ್ಚ್ 16 ರಿಂದ ಮಾರ್ಚ್ 18 ರವರೆಗೆ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.Read More
ಬೆಳ್ತಂಗಡಿ: ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಬಳಿಕ ಬೆಳ್ತಂಗಡಿ ನೂತನ ತಹಶೀಲ್ದಾರ್ ಹುದ್ದೆಗೆ ಸುರೇಶ್ ಕುಮಾರ್ ಟಿಎಸ್ ಅವರನ್ನು ಬೆಳ್ತಂಗಡಿ ತಹಶೀಲ್ದಾರ್ ಆಗಿ ರಾಜ್ಯ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಜಿ.ಎನ್ ಸುಶೀಲ ಅವರು ಆದೇಶ ಹೊರಡಿಸಿದ್ದಾರೆ. ಇವರು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ತಹಶೀಲ್ದಾರ್ ಆಗಿದ್ದು, ಇದೀಗ ಸುರೇಶ್ ಕುಮಾರ್ ಟಿ.ಎಸ್ ಅವರನ್ನು ವರ್ಗಾವಣೆ ಮಾಡಿದ್ದಾರೆ.Read More
ಪುಂಜಾಲಕಟ್ಟೆ: ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ಪ್ರಕರಣ: ಪುಂಜಾಲಕಟ್ಟೆ ಪೊಲೀಸರ
ಪುಂಜಾಲಕಟ್ಟೆ: ಸಿವಿಲ್ ವ್ಯಾಜ್ಯ ಸಂಬಂಧ ವಕೀಲರೊಬ್ಬರ ಮೇಲೆ ಕೇಸ್ ದಾಖಲಿಸಿ ಹಲ್ಲೆ ನಡೆಸಿದ ಪುಂಜಾಕಟ್ಟೆಯ ಪೊಲೀಸರ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಮುಂದೆ ಇಂತಹ ಪ್ರಕರಣಗಳು ಕಂಡುಬಂದರೆ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ ಮಾಡಲಾಗುವುದು ಎಂದು ಕೋರ್ಟ್ ಎಚ್ಚರಿಕೆ ನೀಡಿದೆ. ಪೊಲೀಸರು ಸಿವಿಲ್ ದಾವೆಗಳಲ್ಲಿ ಮಧ್ಯಪ್ರವೇಶ ಮಾಡಬಾರದು ಎಂಬುದಾಗಿ ಪೊಲೀಸ್ ಮಹಾನಿರ್ದೇಶಕರು ಹೊರಡಿಸಿರುವ ನಿರ್ದೇಶನವು ಕೇವಲ ಕಾಗದಕ್ಕೆ ಸೀಮಿತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆಯ ಸಬ್ಇನ್ಸ್ಪೆಕ್ಟರ್ ಕೆ.ಪಿ. ಸುತೇಶ್ ಅವರು ತಮ್ಮ ಮೇಲೆ ಕಾನೂನುಬಾಹಿರವಾಗಿ […]Read More
ತಣ್ಣೀರುಪಂತ ಗ್ರಾಮದ ರವಿ ಎಂಬವರ ಭೂಮಿಯಲ್ಲಿ ಜಲದ ಸಮಸ್ಯೆ: ಹಲವು ದೇವಾಲಯಗಳಿಗೆ ಹರಕೆ:
ತಣ್ಣೀರುಪಂತ: ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಪೊಸಂದೋಡಿ ಮನೆಯ ರವಿ ಎಂಬುವವರು ತನ್ನ ಭೂಮಿಯಲ್ಲಿ ಜಲದ ಸಮಸ್ಯೆ ಕಂಡುಬಂದಿದ್ದ ವೇಳೆ ಹಲವು ದೇವಾಲಯಗಳಿಗೆ ಹರಕೆ ನೀಡಿದರು ಏನೂ ಪ್ರಯೋಜನ ಆಗದೇ ಇದ್ದಾಗ, ಐತಿಹಾಸಿಕ ಪ್ರಸಿದ್ದ ಪುಣ್ಯಕ್ಷೇತ್ರವಾಗಿರುವ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಅನುಗ್ರಹದಿಂದ ನೀರಿನ ಸಮಸ್ಯೆಯು ಬಗೆಹರಿದ ಘಟನೆ ನಡೆದಿದೆ. ನೀರಿನ ಸಮಸ್ಯೆ ಕಂಡುಬಂದಾಗ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಅಭಯ ನುಡಿಯಲ್ಲಿ ತನ್ನ ಸಮಸ್ಯೆಯನ್ನು ಹೇಳಿಕೊಂಡಾಗ ಅಭಯ ನುಡಿಯಲ್ಲಿ ನಿಮ್ಮ ಭೂಮಿಯಲ್ಲಿದ್ದ ಸಮಸ್ಯೆಯನ್ನು ಪರಿಹಾರ ಮಾಡಿ ನೀರಿನ […]Read More
ಮಂಗಳೂರಿನಲ್ಲಿ ಹೆಚ್ವುತ್ತಿರುವ ಲವ್ ಜಿಹಾದ್ ಪ್ರಕರಣಗಳಿಗೆ ಕಡಿವಾಣ ಹಾಕಲು ಹಿಂದೂ ಸಂಘಟನೆಗಳು ಸಹಾಯವಾಣಿಯನ್ನು ಆರಂಭಿಸಿವೆ. ಮನೆಯಲ್ಲಿ, ನೆರೆಹೊರೆಗಳಲ್ಲಿ, ಊರು ಹಳ್ಳಿಗಳಲ್ಲಿ ಲವ್ ಜಿಹಾದ್ ಪ್ರಕರಣ ಕಂಡುಬಂದರೆ ತಕ್ಷಣ ಸಂಪರ್ಕಿಸಿ ಎಂದು ಎರಡು ವಾಟ್ಸ್ಆ್ಯಪ್ ಸಂಖ್ಯೆಗಳನ್ನು ನೀಡಲಾಗಿದೆ. ಅಲ್ಲದೆ ಇಮೇಲ್ ಐಡಿಯನ್ನು ನೀಡಲಾಗಿದೆ. ಮಾಹಿತಿಗಳನ್ನು ಗೌಪ್ಯವಾಗಿ ಇಡಲಾಗುತ್ತದೆ ಎಂದು ಹಿಂದೂ ಸಂಘಟನೆಗಳು ಕರೆ ನೀಡಿದೆ. ಶಾಲೆ, ಕಾಲೇಜು ಕ್ಯಾಂಪಸ್, ಕೆಲಸ ಮಾಡುವ ಸ್ಥಳಗಳಲ್ಲಿ ಯುವತಿಯರು ಲವ್ ಜಿಹಾದ್ಗೆ ಬಲಿಯಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಆದ್ದರಿಂದ ಲವ್ ಜಿಹಾದ್ ಪ್ರಕರಣ […]Read More
ಜಾಹೀರಾತು ಕ್ಷೇತ್ರದಲ್ಲಿ ಮಾಡೆಲ್ ಆಗಿ ಮಿಂಚಿದ ಕಂಬಳದ ದಾಖಲೆಯ ಓಟಗಾರ ಶ್ರೀನಿವಾಸ್ ಗೌಡ
ಕಂಬಳದ ದಾಖಲೆಯ ಓಟಗಾರ ಮಿಜಾರು ಅಶ್ವಥಪುರ ಶ್ರೀನಿವಾಸ್ ಗೌಡ ಚಿನ್ನಾಭರಣಗಳ ಜಾಹೀರಾತುವಿನ ಮಾಡೆಲ್ ಆಗಿ ಮಿಂಚಿದ್ದಾರೆ. ಚಿನ್ನಾಭರಣ ಕಂಪನಿ ತುಳುನಾಡಿನ ಜಾನಪದೀಯ ಆಚರಣೆ ಕಂಬಳ ಓಟಗಾರ ಶ್ರೀನಿವಾಸ್ ಗೌಡನನ್ನು ತಮ್ಮ ಬ್ರಾಂಡ್ನ ರಾಯಭಾರಿ ಆಗಿ ಗುರುತಿಸಿದ್ದು, ಕರಾವಳಿಯೆಲ್ಲೆಡೆ ಕಂಪೆನಿಯ ನೂತನ ಪ್ರಯೋಗಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಸಿರು ಕಾನನದ ನಡುವೆ ಕಟ್ಟುಮಸ್ತಾದ ದೇಹ ಹೊಂದಿರುವ ಕಂಬಳ ಓಟಗಾರ ಶ್ರೀನಿವಾಸ ಗೌಡ ಮೈ ತುಂಬಾ ಚಿನ್ನಾಭರಣ ಧರಿಸಿ ಕಂಬಳ ಕೋಣವನ್ನು ಹಿಡಿದಿರುವ ಫೋಟೋ ಇದೀಗ ಕರಾವಳಿಯೆಲ್ಲೆಡೆ ಜಾಹೀರಾತು ಫ್ಲೆಕ್ಸ್ಗಳಲ್ಲಿ […]Read More
ಕೋವಿಡ್ ಪ್ರಕರಣ ಹೆಚ್ಚಳ: ರಾಜ್ಯ ಸರ್ಕಾರ ಅಲರ್ಟ್: ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ಗೈಡ್ಲೈನ್ಸ್
ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ಗೈಡ್ಲೈನ್ಸ್ ಪ್ರಕಟಿಸಿದೆ. , ಕಾಲೇಜು, ಸಿನಿಮಾ ಮಂದಿರ, ಬಸ್, ರೈಲ್ವೇ, ವಿಮಾನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಶಾಲೆ, ಕಾಲೇಜು ತರಗತಿಗಳಲ್ಲಿ ವಿದ್ಯಾರ್ಥಿಗಳು ಪ್ರವೇಶಿಸುವ ಮೊದಲು ಸ್ಯಾನಿಟೈಸ್ ಮಾಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಮಾರ್ಗಸೂಚಿ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31ರಂದು ರಾತ್ರಿ 1 ಗಂಟೆಯವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶ. ಬಾರ್, ಪಬ್, […]Read More
ಬೆಳ್ತಂಗಡಿ (ಡಿ -24): ಮುಂಬರುವ ವಿಧಾನಸಭಾ ಕ್ಷೇತ್ರ ಚುನಾವಣೆಯ ಕಾವು ಎಲ್ಲೆಡೆಯೂ ಜೋರಾಗಿದ್ದು ಅದರಂತೆಯೇ ಎಲ್ಲಾ ಪಕ್ಷಗಳು ಅಭ್ಯರ್ಥಿಯನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ. ಅದರಂತೆಯೇ ಎಸ್ಡಿಪಿಐ ಪಕ್ಷವೂ ಈಗಾಗಲೇ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಕಡೆಗಳಲ್ಲಿ ಕಾರ್ಯಕರ್ತರ ಸಭೆ ನಡೆದಿದ್ದು, ಚುನಾವಣೆಗೆ ಸ್ಪರ್ಧಿಸಬೇಕೆಂಬ ಆಗ್ರಹ ಸ್ಥಳೀಯ ನಾಯಕರಿಂದ ಮತ್ತು ಕಾರ್ಯಕರ್ತರಿಂದ ಅಭಿಪ್ರಾಯ ಬಂದು ಸ್ಫರ್ದಿಸುವ ಬಗ್ಗೆ ಈ ಹಿಂದೆಯೇ ತೀರ್ಮಾನವಾಗಿತ್ತು. ಈಗಾಗಲೇ ಕ್ಷೇತ್ರ ಸಮಿತಿ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಯುವ ನಾಯಕ […]Read More
ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಉಲ್ಬಣವಾಗುತ್ತಿದ್ದು, ಕೊರೋನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆ ಬಿಎಂಟಿಸಿ ಹಾಗೂ ಮೆಟ್ರೋ ದಲ್ಲಿ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಈ ಮಹತ್ವದ ನಿರ್ಧಾರ ಇಂದಿನಿಂದ ( ಡಿಸೆಂಬರ್ 24) ಆರಂಭವಾಗಿದ್ದು, ಆರೋಗ್ಯ ಇಲಾಖೆ ನಿರ್ದೇಶನದಂತೆ ಈ ಕುರಿತು ಬಿಎಂಟಿಸಿ ಸುತ್ತೋಲೆ ಹೊರಡಿಸಿದ್ದು, ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಒಂದು ವೇಳೆ ಮಾಸ್ಕ್ ಧರಿಸದಿದ್ದರೆ ಬಸ್ ಹತ್ತುವಂತಿಲ್ಲ. ಬಿಎಂಟಿಸಿ ಬಸ್ ಸಿಬ್ಬಂದಿಗಳಿಗೂ ಮಾಸ್ಕ್ ಕಡ್ಡಾಯ […]Read More