ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಿದೆ. ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳ ಉಸ್ತುವಾರಿ ಜಿಲ್ಲೆಗಳು:ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಸ್ತುವಾರಿ ಜಿಲ್ಲೆ ಬೆಂಗಳೂರು ನಗರ, ಡಾ ಜಿ ಪರಮೇಶ್ವರ ತುಮಕೂರು, ಎಚ್ ಕೆ ಪಾಟೀಲ ಗದಗ, ಕೆ ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ, ರಾಮಲಿಂಗ ರೆಡ್ಡಿ ರಾಮನಗರ, ಕೆ ಜಿ ಜಾರ್ಜ್ […]
ಬೆಳ್ತಂಗಡಿ: ಕಾಂಗ್ರೆಸ್ ಸರ್ಕಾರದ ವಿದ್ಯುತ್ ಶುಲ್ಕ ಹೆಚ್ಚಳ ವಿರೋಧಿಸಿ ಬಿಜೆಪಿ ಬೆಳ್ತಂಗಡಿ ಮಂಡಲ
ಬೆಳ್ತಂಗಡಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿದ್ಯುತ್ ಶುಲ್ಕ ಹೆಚ್ಚಾಗಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಮಿನಿ ವಿಧಾನ ಸಭಾ ಮುಂಭಾಗ ಜೂನ್ 9 ರಂದು ಸಾರ್ವಜನಿಕ ಪ್ರತಿಭಟನೆ ನಡೆಯಿತು. ರಸ್ತೆಯ ಉದ್ದಕ್ಕೂ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಎಂ ಎಲ್ ಸಿ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಮೊದಲಾದವರು ಭಾಗಿಯಾಗಿದ್ದರುRead More
ಬೆಳ್ತಂಗಡಿ: ದ.ಕ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವರ ಕಚೇರಿ, ಆಸ್ಪತ್ರೆಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೇಲೆ ಬಿಹಾರದಲ್ಲಿ ದಾಳಿಯ ಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲೆಯಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆRead More
ಸರ್ಕಾರ ಬದಲಾದ ಬೆನ್ನಲ್ಲೇ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಗೆ ಅನುಕಂಪದ ಆಧಾರದ ಮೇಲೆ ನೀಡಿದ್ದ ನೌಕರಿಗೆ ಕುತ್ತು ಬಂದಿದೆ.ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ. ಹಿಂದಿನ ಸರ್ಕಾರ ಮಾಡಿದ ಎಲ್ಲ ತಾತ್ಕಾಲಿಕ ನೇಮಕಾತಿ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೂತನ ಕುಮಾರಿ ಅವರನ್ನು ಶುಕ್ರವಾರದಿಂದ ಜಾರಿಗೆ […]Read More
ಬೆಳ್ತಂಗಡಿ: ಹರೀಶ್ ಪೂಂಜರಿಗೆ ಪ್ರತ್ಯುತ್ತರ ನೀಡಿದ ಸತ್ಯಜಿತ್ ಸುರತ್ಕಲ್: ಕಾಜೂರಿನ ಮಸೀದಿಗೆ ಒಂದು
ಬೆಳ್ತಂಗಡಿ: ಬಿಜೆಪಿ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಅವರು ಸತ್ಯಜಿತ್ ಸುರತ್ಕಲ್ ಅವರ ಬಗ್ಗೆ ಹೇಳಿದ ಹೇಳಿಕೆಗೆ ಇಂದು ಸತ್ಯಜಿತ್ ಸುರತ್ಕಲ್ ಪ್ರತ್ಯುತ್ತರವನ್ನು ನೀಡಿದ್ದಾರೆ. ಅವರು ಇಂದು ಗುರುನಾರಾಯಣ ಸಭಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಹರೀಶ್ ಪೂಂಜರೇ ಶಾಸಕರಾದ ಮೇಲೆ ಮುಸಲ್ಮಾನರ ಮತ ಬೇಡ ಅಂದವರು ಇವತ್ತು ಎಲ್ಲರಲ್ಲೂ ಮತ ಕೇಳ್ತಿಲ್ವ. ಹರೀಶ್ ಪೂಂಜರ ಹಿಂದುತ್ವದ ಬಗ್ಗೆ ಈ ಮೊದಲೇ ಹೇಳುತ್ತಿದ್ದೆ. ಇವತ್ತು ನೀವು ಯಾವ ಯಾವ ಹಿಂದುತ್ವದ ಹೋರಾಟದಲ್ಲಿ ಇದ್ದೀರಿ? ನೀವು ಯಾವತ್ತಾದರೂ […]Read More
ಬೆಳ್ತಂಗಡಿ: ಸಾಮಾಜಿಕ, ಧಾರ್ಮಿಕ ಹಾಗೂ ಸಮಾಜ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಇವರನ್ನು ಗುರುತಿಸಿ ರಾಜ್ಯ ಸಭಾ ಸದಸ್ಯರು ಹಾಗೂ ಇತರ ನಾಯಕರ ಶಿಫಾರಸ್ಸಿನಂತೆ ಭಾರತ ಸರ್ಕಾರವು ಶ್ರೀ ರಾಜೇಶ್ ಪುದುಶೇರಿ ಇವರನ್ನು ನೈಋತ್ಯ ರೈಲ್ವೇಯ ಡಿಆರ್ಯುಸಿಸಿ ಸದಸ್ಯರಾಗಿ ನೇಮಕ ಮಾಡಿ ಆದೇಶ ಹೊರಡಿಸುತ್ತಾರೆ. ಇವರು ರಾಜ್ಯಾದ್ಯಂತ ಹಾಗೂ ಬೆಳ್ತಂಗಡಿ ಭಾಗದಲ್ಲಿ ನಡೆಸಿದ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಗುರುತಿಸಿ ರಾಜ್ಯಸಭಾ ಸದಸ್ಯರು ಹಾಗೂ ಇತರ ನಾಯಕರು ಶಿಫಾರಸ್ಸು ಮಾಡಿದರು. ರಾಜೇಶ್ ಪುದುಶೇರಿ ಇವರು ಬೆಂಗಳೂರು ರೈಲ್ವೆಯ ಕಚೇರಿಯಲ್ಲಿ […]Read More
ಉಚಿತ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಜನತೆಗೆ ಒದಗಿಸುವ ಭರವಸೆ ನೀಡುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಗೆ ಅದರ ಈಡೇರಿಕೆ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸವಾಲು ಹಾಕಿದ್ದಾರೆ. ಯಾರೂ ವಿದ್ಯುತ್ ಬಿಲ್ ಕಟ್ಬೇಡಿ, ಬಿಲ್ ಬಂದರೆ ಮುಖ್ಯಮಂತ್ರಿಗೆ ಕಳುಹಿಸಿ ಎಂದು ಅವರು ರಾಜ್ಯದ ಜನತೆಗೆ ಕರೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ದಿನಕ್ಕೆ ಕಾಂಗ್ರೆಸ್ನವರು ಬಣ್ಣ ಬದಲಾಯಿಸಿದ್ದಾರೆ. ಇನ್ನು ದಿನ ಕಳೆದಂತೆ ಯಾವೆಲ್ಲ ಬಣ್ಣ ಬದಲಾಯಿಸ್ತಾರೋ […]Read More
ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಭೇಟಿ ನೀಡಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ
ಬೆಳಾಲು: ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿರುವ ಅರುಣ್ ಕುಮಾರ್ ಪುತ್ತಿಲ ಇವರು ಏ.26 ರಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರಆರಿಕೋಡಿಗೆ ಬಂದು ಶ್ರೀದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಧರ್ಮದರ್ಶಿಗಳ ಆಶೀರ್ವಾದವನ್ನು ಪಡೆದುಕೊಂಡರು.Read More
ಮೇ ಎರಡನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್ ತಿಳಿಸಿದ್ದಾರೆ. ಮಾರ್ಚ್ 30 ರಿಂದ ಏಪ್ರಿಲ್ 15 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆದಿದ್ದು, ಸುಮಾರು ಎಂಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಶೀಘ್ರ ಅಧಿಕೃತ ಪ್ರಕಟನೆ ಹೊರಡಿಸಲಾಗುವುದು ಎಂದು ತಿಳಿಸಲಾಗಿದೆ.Read More