ಮಾಚಾರು: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯ ಹಿರಿಯ ವಿದ್ಯಾರ್ಥಿ ಸಂಘವನ್ನು ಮಾರ್ಚ್ 3 ರಂದು ನಡೆದ ಶಾಲೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಪುನಾರಚನೆ ಮಾಡಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ರಾಮಯ್ಯ ಗೌಡ ಮಾಚಾರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ಸುರೇಶ್ ಮಾಚಾರ್,ಕೋಶಾಧಿಕಾರಿಯಾಗಿ ರೋಶನ್ ಡಿಸೋಜ, ಉಪಾಧ್ಯಕ್ಷರಾಗಿ ಶ್ರೀಮತಿ ನಾಗವೇಣಿ,ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ್ಚಂದ್ರ ನಾಯ್ಕ ಆಯ್ಕೆಯಾದರು. ಇದೇ ಸಂದರ್ಭದಲ್ಲಿ ಹಿರಿಯರಾದ ನಿವೃತ್ತ ಶಿಕ್ಷಕರಾದ ಶ್ರೀ ಬಾಬುಗೌಡ ಬಾಜಿಮಾರು ರವರನ್ನು ಸಂಘದ ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಾರ್ಯಕಾರಿ […]
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಎಸ್ಟಿ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೆಶಕರು ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಉಮನಾಥ್ ಧರ್ಮಸ್ಥಳರವರನ್ನು ಹಾಗೂ ಕೋಶಾಧಿಕಾರಿಯಾಗಿ ಭೂ ನ್ಯಾಯ ಮಂಡಳಿಯ ನಿಕಟಪೂರ್ವ ಸದಸ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಹರೀಶ್ ಎಳನೀರ್ ರವರನ್ನು ಆಯ್ಕೆ ಮಾಡಲಾಗಿದೆ.Read More
ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ
ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆಯಾಗಿದ್ದಾರೆ. ಇವರು ಸ್ವಯಂ ಸೇವಕ ಯುವ ಮೋರ್ಚಾ ಬೂತ್ ಸಹ ಸಂಚಾಲಕ, ಮಂಡಲ ಉಪಾಧ್ಯಕ್ಷ, ಸಂಘಟನಕಾರ, ಚುನಾವಣಾ ಪ್ರಭಾರಿ, ಚುನಾವಣಾ ಪ್ರಕೋಷ್ಟ ಸಹ ಸಂಚಾಲಕರಾಗಿ ಉತ್ತಮ ಸಂಘಟಕರಾಗಿ ಇದೀಗ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.Read More
ರಾಯಚೂರು: ಫೆ.18 ರಂದು ರಾಯಚೂರಿನ ರಂಗಮಂದಿರದಲ್ಲಿ ಬೆಳಕು ಸಾಹಿತ್ಯ ಶೈಕ್ಷಣಿಕ , ಸಾಂಸ್ಕೃತಿಕ ಟ್ರಸ್ಟ್(ರಿ) ವತಿಯಿಂದ ನಡೆದ ಅಂತರ್ ರಾಜ್ಯಮಟ್ಟದ ಬೆಳಕು ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಕಡಬದ ಸುರೇಶ್ ಕುಮಾರ್ ಜಿ ಚಾರ್ವಾಕ ಪಾಲ್ತಿಲ ಅವರು “ಸಾಧನ ಶ್ರೀ ಪ್ರಶಸ್ತಿ” ಯನ್ನು ಮುಡಿಗೇರಿಸಿಕೊಂಡಿದ್ದಾರೆ. ಇವರು ಸಾಹಿತ್ಯ ಕ್ಷೇತ್ರದಲ್ಲಿ ಮಾಡುತ್ತಿರುವ ಸಾಧನೆಗಾಗಿ ಹಾಗೂ ಬೆಳಕು ಸಾಹಿತ್ಯ ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್(ರಿ) ಆಯೋಜಿಸಲಾಗಿದ್ದ ಪುಸ್ತಕ ಕೊಂಡು ಓದಿ ಅಭಿಯಾನದ ” ಬೆಳಕು ತೋರಣ” ಕವನ ಸಂಕಲನದಲ್ಲಿ ಇವರ ಕವನ […]Read More
ಬೆಳ್ತಂಗಡಿ: ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರ ನೇತೃತ್ವದಲ್ಲಿ ಬಿಜೆಪಿ ದ.ಕ ಜಿಲ್ಲಾ ಸಮಿತಿಯ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ ಕಲ್ಮಂಜ ಆಯ್ಕೆಯಾಗಿದ್ದಾರೆ. ಇನ್ನುಳಿದ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಸಿ.ಕೆ ಚಂದ್ರಕಲಾ, ಯುವ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಕುಲಾಲ್ ಆಯ್ಕೆಯಾಗಿದ್ದಾರೆ.Read More
ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆಯು ಫೆ.13 ರಂದು ಜರುಗಿದ್ದು, ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಈ ವೇಳೆ ನಡೆಯಿತು. ಮೀಡಿಯಾ ಕ್ಲಬ್ ನ ನೂತನ ಗೌರವಾಧ್ಯಕ್ಷರಾಗಿ ಸತೀಶ್ ಪೆರ್ಲೆ , ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ನೇಸರ ಇವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿ ಶರತ್ ಎಂ ಗೌಡ, ಕೋಶಾಧಿಕಾರಿ ದಿನೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿಯಾಗಿ ನಿತಿನ್ ಕನ್ಯಾಡಿ, ಜೊತೆ ಕಾರ್ಯದರ್ಶಿಯಾಗಿ ಅನಂತ್ ಭಟ್ ಆಯ್ಕೆಯಾಗಿದ್ದಾರೆRead More
ರಾಜ್ಯಮಟ್ಟದ ಪ್ರತಿಭಾ ಕಾರಂಜಿ 2023-24 ಸಾಲಿನ ಪದ್ಯ /ಕವನ ವಾಚನ ಸ್ಪರ್ಧೆಯಲ್ಲಿ 3
ಬಂದಾರು : ಫೆ 08,09 ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ, ಇಲಾಖೆ, ಬೆಂಗಳೂರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಧಾರವಾಡ, ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, ಧಾರವಾಡ ಇವುಗಳ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ 2023-24 ಕವನ ವಾಚನ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಸರಕಾರಿ ಪ್ರೌಢ ಶಾಲೆಯ 9 ತರಗತಿ ವಿದ್ಯಾರ್ಥಿನಿ ಕು|ನಿತ್ಯಶ್ರೀ. ಖಂಡಿಗ. 3 ನೇ ಸಮಾಧಾನಕರ ಪ್ರಶಸ್ತಿ ಪಡೆದಿರುತ್ತಾಳೆ. ಇವರು ಬಂದಾರು […]Read More
ಜೆ. ಎಸ್.ಎಸ್. ಶಾಲೆ, ಧಾರವಾಡ ಇಲ್ಲಿ ನಡೆದ 2023-24ನೇ ಸಾಲಿನ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಹಂಸಿನಿ ಭಿಡೆ ಭರತನಾಟ್ಯ ಸ್ಪರ್ಧೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ಮುಂಡಾಜೆಯ ಶ್ರೀ ಧನಂಜಯ ಭಿಡೆ ಹಾಗೂ ಶ್ರೀಮತಿ ಚಿತ್ರ ಭಿಡೆ ದಂಪತಿಯ ಪುತ್ರಿ.Read More
ರಾಷ್ಟ್ರಮಟ್ಟದ ರಾಮನ್ ಯುಂಗ್ ಸೈಂಟಿಸ್ಟ್ ಇನ್ನೋವೇಟರ್ ಅವಾರ್ಡ್ ಸ್ಪರ್ಧೆ : ಎಸ್.ಡಿ.ಎಂ. ಆಂಗ್ಲ
ಬೆಂಗಳೂರಿನ ಸರ್ ಸಿ.ವಿ ರಾಮನ್ ರಿಸರ್ಚ್ ಇನಸ್ಟಿಟ್ಯೂಟ್ ನಡೆಸಿದ ರಾಷ್ಟ್ರ ಮಟ್ಟದ ವಿಜ್ಞಾನ ಸ್ಪರ್ಧೆಯ 3ನೇ ಸುತ್ತಿನಲ್ಲಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿ ಅಧಿಶ್ ಬಿ. ಸಿ ಪ್ರಶಂಸಾ ಪ್ರಮಾಣಪತ್ರ ಪಡೆದಿದ್ದಾರೆ. ಸ್ಪರ್ಧೆಯ ಪ್ರಾಥಮಿಕ ಹಂತದ ಆನ್ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 3000ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಒಬ್ಬರಾಗಿದ್ದ ಅಧಿಶ್ ಬಿ.ಸಿ,. ಎರಡನೆಯ ಸುತ್ತಿಗೆ ಅರ್ಹತೆ ಪಡೆದು ತನ್ನ ಪ್ರಯೋಗವನ್ನು ಮಂಡಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರು. ರಾಷ್ಟ್ರಮಟ್ಟದ ಸ್ಪರ್ಧೆಯು ಬೆಂಗಳೂರಿನ […]Read More
ಭಾರತೀಯ ಕುಸ್ತಿ ಸಂಘದ(ರಿ.) ಜಂಟಿ ಕಾರ್ಯದರ್ಶಿಯಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಭಾರತೀಯ ಕುಸ್ತಿ ಸಂಘದ ಚುನಾವಣೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಕರ್ನಾಟಕದಿಂದ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಭಾರತೀಯ ಕುಸ್ತಿ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪಟ್ಟಿ ಅಧ್ಯಕ್ಷರು ಸಂಜಯ್ ಕುಮಾರ್ ಸಿಂಗ್, ಹಿರಿಯ ಉಪಾಧ್ಯಕ್ಷರು ದೇವೇಂದರ್, […]Read More