ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ ಆಶ್ರಯದಲ್ಲಿ ನಡೆದ ಶ್ರೀ ಗಣೇಶೋತ್ಸವದ ಭವ್ಯ ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜರವರನ್ನು ಊರ ಗ್ರಾಮಸ್ಥರ ಪರವಾಗಿ ಹೂ ಹಾರ, ಶಾಲು ಹಾಕಿ,ಕೇಸರಿ ಪೇಟಾ ತೊಡಿಸಿ,ಫಲ ಪುಷ್ಪ ನೀಡಿ,ಸ್ಮರಣಿಕೆ,ಬಾಲಗಂಗಾಧರ ತಿಲಕರ ಭಾವಚಿತ್ರ, ದೊಡ್ಡ ಸನ್ಮಾನ ಪತ್ರ,ಗಣಪತಿ ಮೂರ್ತಿ ನೀಡಿ ಅದ್ದೂರಿಯಾಗಿ ಸನ್ಮಾನಿಸಲಾಯಿತು. ಬಳಂಜ ಶಾಲೆಯ ಮುಖ್ಯ ರಸ್ತೆಗೆ ಸುಮಾರು ರೂ 4.25 ಲಕ್ಷದ ಇಂಟರ್ ಲಾಕ್ ಅಳವಡಿಸಿ ಶಾಲೆ ಹಾಗೂ ಊರಿನ ಅಭಿವೃದ್ಧಿಗೆ ಹಚ್ಚಿನ […]
ಹುಣ್ಸೆಕಟ್ಟೆ: ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ಇದರ ವತಿಯಿಂದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸಮುದಾಯ ಭವನ ಹುಣ್ಸೆಕಟ್ಟೆಯಲ್ಲಿ ಆ.31 ರಿಂದ ಸೆ.2ರವರೆಗೆ ಶ್ರೀ ಕೃಷ್ಣ ಕುಮಾರ್ ಐತಾಳ್ ಪಂಜಿರ್ಪು ಇವರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ಜರುಗಿತು. ಆ.31ರಂದು ಬೆಳಗ್ಗೆ ಗಣಹೋಮ, ಮೂರ್ತಿ ಪ್ರತಿಷ್ಠೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಶ್ರೀ ಸತ್ಯಸಾಯಿ ಸೇವಾ ಸಮಿತಿ ಬೆಳ್ತಂಗಡಿ ಇವರಿಂದ ಭಜನಾ ಕಾರ್ಯಕ್ರಮ, ಊರವರಿಂದ ಹಾಗೂ ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ […]Read More
ಉಜಿರೆ: ಉಜಿರೆ ಶ್ರೀರಾಮಕೃಷ್ಣ ಸಭಾ ಮಂಟಪದಲ್ಲಿ ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ 24ನೇ ವಾರ್ಷಿಕ ಮಹಾಸಭೆ ಆ.28 ರಂದು ಜರಗಿತು. ಬೆಳ್ತಂಗಡಿ ಅಂಗ ಸಂಸ್ಥೆಯ ಅಧ್ಯಕ್ಷರು ಮತ್ತು ಕೂಟ ಮಹಾ ಜಗತ್ತು ಕೇಂದ್ರ ಸಂಸ್ಥೆಯ ಕೋಶಾಧಿಕಾರಿಗಳಾದ ಬಿ ವಾಸುದೇವ ಸೋಮಯಾಜಿ ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೂಟ ಮಹಾ ಜಗತ್ತು ಕೇಂದ್ರ ಸಂಸ್ಥೆಯ ಅಧ್ಯಕ್ಷರಾದ ಹೆಚ್ ಸತೀಶ್ ಹಂದೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕೂಟ ಮಹಾ ಜಗತ್ತಿನ ಸದಸ್ಯರ ಸಂಖ್ಯೆ ಹೆಚ್ಚಳ ಮಾಡುವುದರಿಂದ ಸರ್ಕಾರದ […]Read More
ಹುಣ್ಸೆಕಟ್ಟೆ: ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ಇದರ ವತಿಯಿಂದ ವರ್ಷಂಪ್ರತಿ ಜರುಗುವ 22 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಆ.31 ರಂದು ಶ್ರೀ ಕೃಷ್ಣ ಕುಮಾರ್ ಐತಾಳ್ , ಪಂಜಿರ್ಪು ಇವರ ಪೌರೋಹಿತ್ವದಲ್ಲಿ ಜರುಗಿತು. ಆ.31 ರಂದು ಬೆಳಗ್ಗೆ 8 ಗಂಟೆಗೆ ಗಣಹೋಮ, ಮೂರ್ತಿ ಪ್ರತಿಷ್ಠೆ ನಡೆದು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ಜರುಗಿತು. ಸಂಜೆ 6 ರಿಂದ ಅಂಗನವಾಡಿ ಮತ್ತು ಶಾಲಾ ಮಕ್ಕಳಿಂದ ಹಾಗೂ […]Read More
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಆ .30 ರಂದು ‘ಸನಾತನ ಪಂಚಾಂಗ – 2023 ರ ಲೋಕಾರ್ಪಣೆಯನ್ನು ಮಾಡಿ ಪಂಚಾಂಗದ ರಚನೆಯ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸಿದರುು. ಈ ಸಂದರ್ಭದಲ್ಲಿ ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ವೇಳೆ ಉದ್ಯಮಿಗಳು ಹಾಗೂ ಹಿಂದೂ ಜಾಗರಣ ವೇದಿಕೆಯ ಪದ್ಮನಾಭ ಶೆಟ್ಟಿಗಾರ್, ವಕೀಲರಾದ ಉದಯಕುಮಾರ್ ಬಂದಾರು, ಶ್ರೀಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ […]Read More
ಕಲ್ಲಡ್ಕ : ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಇಲ್ಲಿನ 2021-22 ನೇ ಸಾಲಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ದೀಪ ಪ್ರದಾನ- ಆಜಾದ್ ಭವನ್ ಮತ್ತು ಭೌತಶಾಸ್ತ್ರ ಪ್ರಯೋಗಲಯ ಉದ್ಘಾಟನಾ ಕಾರ್ಯಕ್ರಮ ಆ.30 ರಂದು ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯಾತಿಥಿಯಾಗಿ ಡಾ ಪ್ರಭಾಕರ್ ಭಟ್ ಕಲ್ಲಡ್ಕ, ಲಕ್ಷ್ಮೀ ಗ್ರೂಪ್ಸ್ ಮೋಹನ್ ಕುಮಾರ್ ಭಾಗಿಯಾಗಿದ್ದರು.Read More
ಕನ್ಯಾಡಿ: ಚಾತುರ್ಮಾಸ್ಯ ವೃತಾಚರಣೆಯಲ್ಲಿ ಭಾಗಿಯಾಗಿ ಸ್ವಾಮೀಜಿಯ ಆಶೀರ್ವಾದ ಪಡೆದ ಸಚಿವ ವಿ.ಸೋಮಣ್ಣ
ಕನ್ಯಾಡಿ: ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆಯ 47ನೇ ದಿನವಾದ ಆ.27 ರಂದು ವಸತಿ ಸಚಿವ ವಿ.ಸೋಮಣ್ಣರವರು ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಮಂಗಳೂರು ದಕ್ಷಿಣದ ಶಾಸಕರು ವೇದವ್ಯಾಸ್ ಕಾಮತ್, ಮಿಜಾರು ಮೂಡ ಅಧ್ಯಕ್ಷರು ರವಿಶಂಕರ್, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಬಿಜೆಪಿ ಮುಖಂಡ ವಸಂತ ಜಿ ಪೂಜಾರಿ, ಯುವ ಮೋರ್ಚಾ ಉಪಾಧ್ಯಕ್ಷ ಪ್ರಕಾಶ್ ಪೂಜಾರಿ, ವಸಂತ ಸಾಲ್ಯಾನ್ ಕಾಪಿನಡ್ಕ ಮತ್ತು ಮನೆಯವರು, […]Read More
ಬೆಳ್ತಂಗಡಿ: ರಾಜೀವ ಗಾಂಧಿ ವಸತಿ ನಿಗಮ ಬೆಂಗಳೂರು, ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ 2021- 22ನೇ ಸಾಲಿನ ಬಸವ ವಸತಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಯಲ್ಲಿ 48 ಗ್ರಾಮ ಪಂಚಾಯತ್ ಗಳು 1640 ಮಂದಿ ಅಹ೯ ಫಲಾನುಭವಿಗಳಿಗೆ ಮನೆ ನಿರ್ಮಾಣ ಕಾಮಗಾರಿ ಆದೇಶ ಪತ್ರ ವಿತರಣಾ ಕಾರ್ಯಕ್ರಮ ಆ.27ರಂದು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನ ಗುರುವಾಯನಕೆರೆಯಲ್ಲಿ ಜರುಗಿತು. ರಾಜ್ಯ ಸರ್ಕಾರದ ವಸತಿ […]Read More
ಕನ್ಯಾಡಿ ಚಾತುರ್ಮಾಸ್ಯ ವೃತಾಚರಣೆಯಲ್ಲಿ ಪಾದುಕ ಪೂಜೆ ನೆರವೇರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್
ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಗುರು ದೇವ ಮಠದಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ 45ನೇ ಚಾತುರ್ಮಾಸ್ಯ ವ್ರತಾಚರಣೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯಕ್ ಉಳಿಪ್ಪಾಡಿಯವರು ಗುರುಗಳ ಪಾದುಕ ಪೂಜೆ ನೆರವೇರಿಸಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಬಂಟ್ವಾಳ ಮಂಡಲ ಪ್ರ. ಕಾರ್ಯದರ್ಶಿ ಡೊಂಬಯ್ಯ ಅರಳ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಪ್ರಣಾಮ್ ರಾಜ್ ಅಜ್ಜಿಬೆಟ್ಟು ಉಪಸ್ಥಿತರಿದ್ದರು.Read More