ಮಂಗಳೂರು: ಮಾಜಿ ಸಚಿವ ರಮಾನಾಥ ರೈ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಯಸ್ಸಿನ ಕಾರಣದಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದರಿಂದಾಗಿ ಮುಂದೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದಿದ್ದಾರೆ. ಆದರೆ ಕಾಂಗ್ರೆಸ್ ಗೆ ಶಕ್ತಿ ತುಂಬುವ ಕೆಲಸದಲ್ಲಿ ಸಕ್ರಿಯನಾಗಿರುತ್ತೇನೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ. ಹಿಂದಿನಿಂದಲೂ ಹೈಕಮಾಂಡ್ ನ ಎಲ್ಲ ಆದೇಶ ತಪ್ಪದೆ ಪಾಲಿಸುತ್ತಾ ಬಂದಿದ್ದೇನೆ. ಈ ಬಾರಿ ನನ್ನ ಸೋಲಿನ ಮತಗಳ ಅಂತರ ಕಡಿಮೆಯಾಗಿದೆ. ಗೆಲುವಿನ ವಿಶ್ವಾಸವಿತ್ತು. ಆದರೂ ಸೋಲಾಗಿದೆ […]
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವಿನ ಹಿನ್ನಲೆಯಲ್ಲಿ ಇಬ್ಬರು ಯುವಕರು ಅಳದಂಗಡಿಯ ಸತ್ಯದೇವತೆ ದೇವಸ್ಥಾನಕ್ಕೆ ಪಾದಾಯಾತ್ರೆ ಕೈಗೊಂಡಿದ್ದು, ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದಿಂದ ಮುಂಜಾನೆ 3.30 ಕ್ಕೆ ಹೊರಟ ಅಜಿತ್ ಪೂಜಾರಿ ಕನ್ಯಾಡಿ ಹಾಗೂ ಅಜಿತ್ ಕುಮಾರ್ ಚಾರ್ಮಾಡಿ ಇಂದು ಬೆಳಗ್ಗೆ 9.30 ರ ಸುಮಾರಿಗೆ ಅಳದಂಗಡಿಯ ಸತ್ಯದೇವತೆಯ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರರು ಶಿವಪ್ರಸಾದ್ ಅಜಿಲರು ಶುಭಹಾರೈಸಿದರು.Read More
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ವಚನ ಮೇ.17 ರಂದು ಸ್ವೀಕರಿಸಲಿದ್ದಾರೆ. ಇನ್ನೂ ಯಾರ್ಯಾರಿಗೆ ಯಾವ ಖಾತೆ ?ಕೃಷ್ಣೇ ಬೈರೇಗೌಡಾಗೆ ಕಾನೂನು ಮತ್ತು ಸಂಸದೀಯ ವ್ಯವಹಾರ,ಕಾಂಗ್ರೆಸ್ ಹಿರಿಯ ನಾಯಕ ಆರ್ ವಿ ದೇಶಪಾಂಡೆಗೆ ಸ್ಪೀಕರ್ ಸ್ಥಾನ , ಕೆ ಎಚ್ ಮುನಿಯಪ್ಪಗೆ ಸಮಾಜ ಕಲ್ಯಾಣ, ಜಮೀರ್ ಹಮಮದ್ ಗೆ ವಸತಿ ಖಾತೆ, ಸತೀಶ್ ಜಾರಕಿಹೊಳೆಗೆ ಕಲ್ಲಿದ್ದಲು ಮತ್ತು ಗಣಿ ಖಾತೆ , ಎನ್ ಎ ಹ್ಯಾರಿಸ್ ಗೆ ಆಹಾರ ಖಾತೆ, ಸವದಿಗೆ ಸಾರಿಗೆ ಖಾತೆ, […]Read More
ರಾಜ್ಯ ವಿಧಾನಸಭಾ ಎಲೆಕ್ಷನ್ಗೆ ಮತದಾನ ಮುಗಿದು ರಿಸಲ್ಟ್ಗೆ ಕೌಂಟ್ಡೌನ್ ಶುರುವಾಗಿದೆ. ಗೆಲುವಿನ ಸನಿಹದಲ್ಲಿರುವ ಕಾಂಗ್ರೆಸ್ ನಲ್ಲಿ ಸರ್ಕಾರ ರಚನೆಗೆ ಸಿದ್ದತೆ ನಡೆಯುತ್ತಿದ್ದು, ಆಪರೇಷನ್ ಕಮಲದ ಭೀತಿಯಲ್ಲಿರುವ ಕಾಂಗ್ರೆಸ್ ನಾಯಕರು ತಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳವ ತಂತ್ರಗಾರಿಕೆಯನ್ನ ನಡೆಸಿದ್ದು, ಸಿಎಂ ಸ್ಥಾನಕ್ಕಾಗಿ ಹಲವು ಕಸರತ್ತು ನಡೆಯುತ್ತಿವೆ. ಬಹುತೇಕ ಸಮೀಕ್ಷೆಯಂತೆ ಕಾಂಗ್ರೆಸ್ ಈ ಬಾರೀ ಬಹುಮತವನ್ನ ಗಳಿಸಲಿದೆ ಎಂದು ಕಾಂಗ್ರೆಸ್ ನಾಯಕರುವ ಸರ್ಕಾರ ರಚಿಸುವ ವಿಶ್ವಾಸದಲ್ಲಿದ್ದು, ಕಾಂಗ್ರೆಸ್ನಲ್ಲಿ ಸಿಎಂ ಗಾದಿಗೆ ಏರುವ ಬಗ್ಗೆ ನಾನಾ, ನೀನಾ ಎಂಬ ಚರ್ಚೆಗಳು ನಡೆಯುತ್ತಿವೆ. […]Read More
ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆ ಮತದಾನ ನಡೆಯಲಿರುವ ಕಾರಣ ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಿಗೆ ಶಾಲಾ ಕಾಲೇಜುಗಳಿಗೆ ಸಂಘ ಸಂಸ್ಥೆಗಳಿಗೆ ಹಾಗೂ ಖಾಸಗಿ ಸಂಸ್ಥೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದೆ. ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು […]Read More
ರಾಜ್ಯ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಮತದಾನಕ್ಕೆ ಕೇವಲ 1 ದಿನ ಮಾತ್ರ ಬಾಕಿ ಇದೆ. ಶಾಂತಿಯುತ, ನಿರ್ಭೀತ ಹಾಗೂ ನ್ಯಾಯಯುತ ಮತದಾನಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಾಳೆ ಮೇ 10 ಮತದಾನ ನಡೆಯಲಿರುವ ಹಿನ್ನೆಲೆ ರಾಜ್ಯದೆಲ್ಲೆಡೆ 1 ಲಕ್ಷದ 56 ಸಾವಿರ ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಿ ಅಭೂತಪೂರ್ವ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ 11,617 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, […]Read More