• September 8, 2024

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆ

 ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆ


ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿದ್ದು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಹಾಗೂ ಹೆತ್ತವರು ಜೊತೆಗೂಡಿ ದೀಪ ಪ್ರಜ್ವಲಿಸುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ತದನಂತರ ಮಾತಾಡಿದವರು ಈ ಬಾರಿಯ ಶೈಕ್ಷಣಿಕ ವರ್ಷದ ರೂಪರೇಷೆಗಳು ಹೆತ್ತವರ ಜವಾಬ್ದಾರಿ ಶಿಕ್ಷಕರ ಪ್ರಯತ್ನ ಇತ್ಯಾದಿಗಳನ್ನು ವಿವರಿಸಿದರು. ತದನಂತರ ಹೆತ್ತವರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

ಶಾಲಾ ಶಿಕ್ಷಕಿ ಶ್ರೀಮತಿ ಪದ್ಮಶ್ರೀ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ, ಶ್ರೀಮತಿ ದಿವ್ಯ ಆರ್ ಸ್ವಾಗತಿಸಿ, ಶಾಲಾ ಸಹ ಶಿಕ್ಷಕಿ ಶ್ರೀಮತಿ ಆಶಾ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ ಹಾಗೂ ಹೆತ್ತವರು ಭಾಗಿಯಾಗಿದ್ದರು.

Related post

Leave a Reply

Your email address will not be published. Required fields are marked *

error: Content is protected !!