ಧರ್ಮಸ್ಥಳ: ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ ಬಿಜೆಪಿ ದ.ಕ ಜಿಲ್ಲೆಯ ವತಿಯಿಂದ ಅಭಿನಂದನೆ
ಧರ್ಮಸ್ಥಳ: ರಾಜ್ಯ ಸಭೆಯ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಧರ್ಮಾಧಿಕಾರಿಗಳಾದ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಜು.11 ರಂದು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರೂ, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಶಾಸಕರಾದ ಶ್ರೀ ಸಂಜೀವ ಮಠಂದೂರು, ಶ್ರೀ ಉಮಾನಾಥ ಕೋಟ್ಯಾನ್, ಶ್ರೀ ಭರತ್ ಶೆಟ್ಟಿ, ಶ್ರೀ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್,ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಹರಿಕೃಷ್ಣ ಬಂಟ್ವಾಳ್,ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುದರ್ಶನ್ ಮೂಡುಬಿದ್ರೆ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸುಧೀರ್ ಶೆಟ್ಟಿ ಕಣ್ಣೂರು, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್, ಪುತ್ತೂರು ಮಂಡಲ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶ್ರೀನಿವಾಸ್ ರಾವ್, ಶ್ರೀ ಗಣೇಶ್ ಗೌಡ ಅವರು ಉಪಸ್ಥಿತರಿದ್ದರು.