ಬೆಳ್ತಂಗಡಿ ಶ್ರೀ. ಧ.ಮಂ.ಸ್ವಾಮಿ ಕಲಾ ಭವನದಲ್ಲಿ 180 ಫಲಾನುಭವಿಗಳ ಸಭೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಸುಮಾರು ರೂ.5 ಲಕ್ಷ ವೆಚ್ಚದಲ್ಲಿ ನೀರಾವರಿ, ವಿದ್ಯುತ್ತಿಕರಣ, ಪಂಪ್ ಸೆಟ್ ಅಳವಡಿಕೆಯ ಯೋಜನೆಯ 180 ಫಲಾನುಭವಿಗಳ ಸಭೆಯು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ನಾವೂರ ಹಾಗೂ ಎಸ್. ಸಿ. ಮೋರ್ಚಾ ಎಸ್. ಟಿ. ಮೋರ್ಚಾ ಪದಾಧಿಕಾರಿಗಳು ಪಂಚಾಯತ್ ಅಧ್ಯಕ್ಷರುಗಳು ಉಪಸ್ಥಿತರಿದ್ದರು.