ಮಂಗಳೂರು: ವೈದ್ಯರ ನಿರ್ಲಕ್ಷ್ಯ: ಮೆದುಳು ನಿಷ್ಕ್ರಿಯ ಗೊಂಡು ಸಾವನ್ನಪ್ಪಿದ ಗರ್ಭಿಣಿ: ವೇಣೂರು ನಿವಾಸಿ ಶಿಲ್ಪಾ ಸಾವು
ವೇಣೂರು: ವೈದ್ಯರ ನಿರ್ಲಕ್ಷ್ಯಕ್ಕೆ ಮೆದುಳು ನಿಷ್ಕ್ರಿಯಗೊಂಡು ಗರ್ಭಿಣಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಡೆದಿದೆ.
ಸಾವನ್ನಪ್ಪಿರುವ ಗರ್ಭಿಣಿ ವೇಣೂರಿನ ಶಿಲ್ಪಾ ಎಂದು ತಿಳಿದುಬಂದಿದೆ.
ಈಕೆ ತನ್ನ ಎರಡನೇ ಮಗುವಿನ ಹೆರಿಗೆಗಾಗಿ ಜುಲೈ.2 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರ ಚಿಕಿತ್ಸೆಯ ಮೂಲಕ ಹೆಣ್ಣುಮಗುವನ್ನು ಹೊರತೆಗೆದರೂ ಗರ್ಭಕೋಶದಲ್ಲಿ ಸಮಸ್ಯೆ ಇದೆ ಎಂದು ಹೇಳಿ ಬಳಿಕ ಅದರ ನಿವಾರಣೆಯ ಸಂದರ್ಭ ರಕ್ತಸ್ರಾವವಾಗಿದೆ ಎನ್ನಲಾಗಿದೆ. ರಕ್ತದೊತ್ತಡದ ಏರಿಳಿತದಿಂದ ಸಮಸ್ಯೆ ಉಲ್ಬಣಗೊಂಡು ಮೆದುಳು ನಿಷ್ಕ್ರಿಯಗೊಂಡು ಕೋಮಾಕ್ಕೆ ತಲುಪಿದ್ದರು ಎಂದು ಆರೋಪಿಸಲಾಗಿದೆ.