• December 6, 2024

ಕರ್ನಾಟಕ ದಲ್ಲಿ ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ !: ದೇಶದಾದ್ಯಂತ ‘ವಕ್ಫ್ ಬೋರ್ಡ್ ಕಾಯ್ದೆ’ ರದ್ದುಗೊಳಿಸಲು ಹಿಂದೂ ರಾಷ್ಟ್ರ ಜಾಗೃತಿ ಆಂದೋಲನದಲ್ಲಿ ಬೇಡಿಕೆ !

 ಕರ್ನಾಟಕ ದಲ್ಲಿ ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ !: ದೇಶದಾದ್ಯಂತ ‘ವಕ್ಫ್ ಬೋರ್ಡ್ ಕಾಯ್ದೆ’ ರದ್ದುಗೊಳಿಸಲು ಹಿಂದೂ ರಾಷ್ಟ್ರ ಜಾಗೃತಿ ಆಂದೋಲನದಲ್ಲಿ ಬೇಡಿಕೆ !

 


ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರ ಮೇಲೆ ವಿವಿಧ ರೀತಿಯ ಆಕ್ರಮಣಗಳು ಹೆಚ್ಚಾಗಿವೆ.ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಅವರಿಗೆ ಥಳಿಸುವುದು ಮತ್ತು ಭಯ ನಿರ್ಮಾಣ ಮಾಡುವ ಪ್ರಕ್ರಿಯೆ ನಡೆಯುತ್ತಿವೆ,ಜೈನ ಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ಮತ್ತು ಯುವ ಬ್ರಿಗೇಡ್ ನ ಶ್ರೀ. ವೇಣುಗೋಪಾಲ ಇವರ ಹತ್ಯೆ, ಸೇರಿದಂತೆ ಇನ್ನೂ ಹಲವಾರು ಘಟನೆಗಳು ಹಿಂದೂ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ. ಅಷ್ಟೇ ಅಲ್ಲದೆ ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ಪ್ರತಿ ರವಿವಾರ ನಡೆಯುತ್ತಿದ್ದ ನಾಗರಕಟ್ಟೆಯ ಪೂಜೆಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಬಕ್ರೀದ್ ಸಮಯದಲ್ಲಿ ಬಾದಾಮಿ, ಶಿಕಾರಿಪುರ, ಶಿರಸಿ ಸೇರಿದಂತೆ ಹಲವೆಡೆ ಅಕ್ರಮವಾಗಿ ಗೋಹತ್ಯೆ ಮಾಡಿ, ಗೋವಿನ ಎಲುಬುಗಳನ್ನು ದೇವಸ್ಥಾನ, ಹಿಂದೂ ಮನೆಗಳ ಎದುರು ಎಸೆದು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ. ಹಾಗಾಗಿ ಹಿಂದೂ ಕಾರ್ಯಕರ್ತರಿಗೆ ಹಿಂದೂ ಧರ್ಮದ ರಕ್ಷಣೆಗಾಗಿ ಹೋರಾಟ ಮಾಡುವವರಿಗೆ ರಕ್ಷಣೆ ನೀಡಬೇಕು,ಹಿಂದೂಗಳ ಮೇಲೆ ಆಕ್ರಮಣ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಆಗ್ರಹಿಸ ಜುಲೈ 15 ರಂದು ಮಿನಿ ವಿಧಾನಸೌಧ (ಕ್ಲಾಕ್ ಟವರ್ ಬಳಿ) ಮಂಗಳೂರು ಇಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ ನಡೆಸಲಾಯಿತು.

ಈ ಆಂದೋಲನದಲ್ಲಿ ಜೈನ ಸಮುದಾಯದ ಪ್ರಮುಖರಾದ ಶ್ರೀ ಅಶೋಕ್ ದಾರಿವಾಲ್ ಇವರು ಜೈನ ಮುನಿಗಳ ಹತ್ಯೆಯನ್ನು ಮಾಡಿದವರ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು, ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ವಿನಂತಿಸಿದರು.

ಅಯ್ಯಪ್ಪ ಸಮಿತಿ ಸೇವಾ ಸಮಾಜದ ಪ್ರಮುಖರಾದ ಶ್ರೀ ಗಣೇಶ ಚಿಲಿಂಬಿ ಇವರು ಹಿಂದುಗಳಿಗೆ ರಕ್ಷಣೆಯನ್ನು ಒದಗಿಸಿ ಕೊಡಬೇಕು ಎಂದು ವಿನಂತಿಸಿದರು.

ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕನ್ನಡ ಜಿಲ್ಲೆಯ ಸಮನ್ವಯಕರಾದ ಸೌ. ಪವಿತ್ರ ಕುಡ್ವ ಇವರು ವಕ್ಫ್ ಬೋರ್ಡ್ ವಶಪಡಿಸಿಕೊಂಡ ಭೂಮಿಯನ್ನು ಮೂಲ ಮಾಲೀಕರಿಗೆ ಹಿಂತಿರುಗಿಸಬೇಕೆಂದು ಆಗ್ರಹ ಪಡಿಸಿದರು.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವಕ್ಫ್ ಬೋರ್ಡ್ ಕಾನೂನನ್ನು ದುರುಪಯೋಗ ಪಡಿಸಿಕೊಂಡು ಸರಕಾರಿ ಮತ್ತು ಖಾಸಗಿ ಜಮೀನುಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿದೆ. ಆ ಮೂಲಕ ದೇಶದಲ್ಲಿ ೮ ಲಕ್ಷ ಎಕರೆ ಜಮೀನನ್ನು ಕಬಳಿಸಿದೆ. ಇದೊಂದು ದೊಡ್ಡ ‘ಲ್ಯಾಂಡ್ ಜಿಹಾದ್’ ಆಗಿದೆ.ಹಾಗಾಗಿ ಈ ಕಾನೂನನ್ನು ರದ್ದುಗೊಳಿಸಿ ಜಮೀನಿನ ನಿಜವಾದ ಮಾಲೀಕರಿಗೆ ಅದರ ಅಧಿಕಾರವನ್ನು ನೀಡಬೇಕು. ದೇಶದಲ್ಲಿ ’ಸಮಾನ ನಾಗರಿಕ ಕಾನೂನು’ ಜಾರಿಗೆ ತರುವ ಮೂಲಕ ಅಲ್ಪಸಂಖ್ಯಾತರ ಹೆಸರಿನಲ್ಲಿ ಜಾರಿಯಲ್ಲಿರುವ ಎಲ್ಲಾ ವಿಶೇಷ ಸೌಲಭ್ಯಗಳು, ಕಾನೂನುಗಳು, ಆಯೋಗಗಳು,ಮಂಡಳಿಗಳು, ಸರಕಾರಿ ಇಲಾಖೆಗಳನ್ನು ರದ್ದುಪಡಿಸಬೇಕು ಮತ್ತು ಎಲ್ಲರಿಗೂ ಸಮಾನ ಹಕ್ಕು ಸಿಗುವಂತಾಗಬೇಕು, ಈ ಬೇಡಿಕೆಗಳನ್ನು ಅಂಗೀಕರಿಸದಿದ್ದರೆ ‘ವಕ್ಫ್ ಕಾನೂನು’ ವಿರುದ್ಧ ಪ್ರಬಲ ಚಳವಳಿ ನಡೆಸಬೇಕಾಗುತ್ತದೆ ಎಂದು ಆಂದೋಲನದ ಮೂಲಕ ಎಚ್ಚರಿಸಲಾಯಿತು.

ಈ ಮನವಿಯನ್ನು ಶ್ರೀ ಅಭೀದ್ ಜಿ , ನಿರ್ದೇಶಕರು, ಜಿಲ್ಲಾ ನಗರ ಅಭಿವೃದ್ಧಿ ಯೋಜನಾ ಕೋಶ ಇವರ ಮೂಲಕ ಮಂಗಳೂರಿನ ಜಿಲ್ಲಾಧಿಕಾರಿಗಳಿಗೆ ಮತ್ತು ರಾಜ್ಯಪಾಲರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ತುಳುನಾಡು ರಕ್ಷ ಣಾ ವೇದಿಕೆಯ ಪ್ರಮುಖರಾದ ಸೌ. ಜ್ಯೋತಿ ಜೈನ್, ಅಯ್ಯಪ್ಪ ಸಮಿತಿ ಸೇವಾ ಸಮಾಜದ ಪ್ರಮುಖರಾದ ಶ್ರೀ ಗಣೇಶ್, ಬಿ.ಜೆ.ಪಿ.ಯ ಶ್ರೀ ಹರ್ಷವರ್ಧನ್ ಶೆಟ್ಟಿ, ಶ್ರೀ ವಸಂತ ರೈ, ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕರ್ನಾಟಕ ರಾಜ್ಯ ಸಮನ್ವಯಕರಾದ ಶ್ರೀ ಚಂದ್ರ ಮೊಗೇರ್, ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಆಗಿರುವ ಶ್ರೀ ಗಣೇಶ್ ಸಾಲಿಯಾನ, ಶ್ರೀ ಉಪೇಂದ್ರ ಆಚಾರ್ಯ, ಶ್ರೀ ಸುಧಾಕರ ಹಾಗೂ ಧರ್ಮ ಪ್ರೇಮಿಗಳಾದ ಶ್ರೀ ಮನೋಜ್, ಶ್ರೀ ಮಂಜುನಾಥ ಕೊಟ್ಟಾರಿ, ಶ್ರೀ ರವೀಂದ್ರ, ಶ್ರೀಭಾಸ್ಕರ ಕೊಲ್ನಾಡು, ಶ್ರೀಯೋಗೀಶ್ ಬಿ. ಸಿ ರೋಡ್,ಶ್ರೀ ಲೋಕೇಶ್ ಉಳ್ಳಾಲ, ಶ್ರೀ ಪ್ರೇಮನಾಥ ಪೊಳಲಿ,
ಶ್ರೀಸತೀಶ್, ಶ್ರೀ ಬಾಲಗಂಗಾಧರ ಕೋಡಿಕಲ್ ಮೊದಲಾದವರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!