ಧರ್ಮಸ್ಥಳದ ಹೆಗ್ಗಡೆಯವರ ವಿರುದ್ಧ ಅವಹೇಳನ ಸುದ್ದಿಗೆ ನಿರ್ಬಂಧ: ಹೈಕೋರ್ಟ್ ತಾತ್ಕಾಲಿಕ ಪ್ರತಿಬಂಧಕಾಜ್ಞೆ
ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅವಹೇಳನಕಾರಿ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಕೆಲ ವ್ಯಕ್ತಿಗಳು ಮತ್ತು ಮಾಧ್ಯಮದ ವಿರುದ್ಧ ತಾತ್ಕಾಲಿಕ ಪ್ರತಿಬಂಧಕಾಜ್ಞೆ ಹೊರಡಿಸಿದೆ.
ಈಗಾಗಲೇ ಸಾಮಾಜಿಕ ಮಾಧ್ಯಮಗಳಲ್ಲಿ ಈ ಕುರಿತು ಸುದ್ದಿ ವಿಶ್ಲೇಷಣೆ ಅಥವಾ ಪ್ರಸಾರ ಮಾಡಿದ್ದರೆ ತಕ್ಷಣ ಅದನ್ನು ತೆಗೆದುಹಾಕುವಂತೆ ನ್ಯಾಯಪೀಠ ತನ್ನ ಆದೇಶವನ್ನು ಹೊರಡಿಸಿದೆ.