ಸೌಜನ್ಯ ಹತ್ಯೆ ಪ್ರಕರಣ:ಮರು ತನಿಖೆಗೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯರವರಿಗೆ ಮನವಿ ಮಾಡಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ರವರಿಗೆ ಶಾಸಕ ಹರೀಶ್ ಪೂಂಜರವರು ಮನವಿ ಮಾಡಿದ್ದಾರೆ.
2023 ರವರೆಗೂ ನಡೆದ ಸಿಬಿಐ ತನಿಖೆಯಲ್ಲಿ ಶಂಕಿತ ಆರೋಪಯನ್ನು ದೋಷ ಮುಕ್ತಗೊಳಿಸಿ ನ್ಯಾಯಾಲಯವು ಆದೇಶ ನೀಡಿದೆ. ಈ ತನಿಖೆಯ ಫಲಶೃತಿಯ ಬಗ್ಗೆ ಅಪರಾಧಿಗಳನ್ನು ಕಾನೂನಿನ ಚೌಕಟ್ಟಿನೊಳಗೆ ತಂದು ಶಿಕ್ಷೆ ನೀಡಲು ಆಡಳಿತ ವ್ಯವಸ್ಥೆ ವಿಫಲವಾಗಿದೆ. ನಾಗರೀಕರ ಭಾವನೆಗಳನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರವು ಸೌಜನ್ಯಾಳ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆಗೆ ಒಳಪೆಇಸಿ ಮೃತ ಸೌಜನ್ಯಳಿಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿದ್ದಾರೆ