ಭಾರೀ ಮಳೆಗೆ ಚಾರ್ಮಾಡಿ ಘಾಟ್ ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ
ಚಾರ್ಮಾಡಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಚಾರ್ಮಾಡಿ ಘಾಟ್ ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವಾಗಿದೆ.ಸದ್ಯ ಅರ್ಧಕ್ಕೆ ನಿಂತಿರುವ ರಸ್ತರ ದುರಸ್ತಿ ಕಾಮಗಾರಿ ನಡೆಯುತ್ತಿದೆ.
ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲೇ ಗುಡ್ಡ ಕುಸಿತವಾಗಿರುವುದು ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿದೆ.ಹೀಗಾಗಿ ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ವೇಳೆ ಘನ ವಾಹನಗಳ ಓಡಾಟ ನಿಷೇಧಕ್ಕೆ ಚಿಂತನೆ ಆರಂಭವಾಗಿದೆ. ಗಾಳಿ ಮಳೆಗೆ ಗುಡ್ಡ ಕುಸಿತವಾದರೆ ರಸ್ತೆ ಸಂಪರ್ಕ ಕಡಿತವಾಗುವ ಭೀತಿಯೂ ಎದುರಾಗಿದೆ.