ಪುತ್ತೂರು ತಾಲೂಕಿನ ನಿಡ್ಪಳ್ಳಿ ಮತ್ತು ಆರ್ಯಾಪು ಗ್ರಾಮ ಪಂಚಾಯಿತಿ ಉಪಚುನಾವಣೆ: ಪುತ್ತಿಲ ಪರಿವಾರ ಸದಸ್ಯ ಜಯಭೇರಿ
ಪುತ್ತೂರು ತಾಲೂಕಿನ ನಿಡ್ಪಳ್ಳಿ ಮತ್ತು ಆರ್ಯಾಪು ಗ್ರಾಮ ಪಂಚಾಯಿತಿ ಉಪಚುನಾವಣೆಗಳಲ್ಲಿ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಪುತ್ತಿಲ ಪರಿವಾರ ಸದಸ್ಯ ಜಯಭೇರಿ ಬಾರಿಸಿದ್ದಾರೆ.
ಆರ್ಯಾಪು ಗ್ರಾಮಪಂಚಾಯಿತಿ 2ನೇ ವಾರ್ಡಿಗೆ ನಡೆದ ಚುನಾವಣೆಗಳಲ್ಲಿ ಪುತ್ತಿಲ ಪರಿವಾರ ಬೆಂಬಲಿತರು ಜಯಗಳಿಸಿದ್ದಾರೆ. ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತ ಪಡೆದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ್ ಭಂಡಾರಿ 140 ಮತ, ಕಾಂಗ್ರೆಸ್ ಅಭ್ಯರ್ಥಿ ಜಿ. ಪುರುಷೋತ್ತಮ ಪ್ರಭು 353 ಮತ ಪಡೆದುಕೊಂಡಿದ್ದಾರೆ.